ನಿತ್ಯ ನಿಮ್ಮ ಡಯಟ್ನಲ್ಲಿ ಕೆಲವು ಆಹಾರಗಳನ್ನು ಸೇವಿಸುವುದು ಕೂಡ ನೈಸರ್ಗಿಕ ತೂಕ ಇಳಿಕೆಯಲ್ಲಿ ಪರಿಣಾಮಕಾರಿ ಎಂದು ಸಾಬೀತುಪಡಿಸಲಿದೆ.
ಪ್ರಸ್ತುತ ಬಹುತೇಕ ಜನರನ್ನು ಬಾಧಿಸುತ್ತಿರುವ ಸಮಸ್ಯೆ ಎಂದರೆ ತೂಕ ಹೆಚ್ಚಳ. ದೇಹದ ಅಧಿಕ ತೂಕವು ಸೌಂದರ್ಯದ ಮೇಲೆ ಪರಿಣಾಮ ಬೀರುವುದು ಮಾತ್ರವಲ್ಲ ಆರೋಗ್ಯದ ಮೇಲೂ ನಕಾರಾತ್ಮಕ ಪರಿಣಾಮವನ್ನು ಉಂಟು ಮಾಡುತ್ತದೆ. ದೇಹದಲ್ಲಿ ಸಂಗ್ರಹವಾಗುವ ಹೆಚ್ಚುವರಿ ಕೊಬ್ಬು ಹಲವು ಆರೋಗ್ಯ ಸಮಸ್ಯೆಗಳ ಮೂಲವಾಗಿದೆ. ಹಾಗಾಗಿ, ಅದನ್ನು ಕರಗಿಸುವುದು ಬಹಳ ಮುಖ್ಯ. ಇದಕ್ಕಾಗಿ ಹೆಚ್ಚು ಕಷ್ಟ ಪಡುವ ಅಗತ್ಯವಿಲ್ಲ. ನಿತ್ಯ ನಿಮ್ಮ ಡಯಟ್ನಲ್ಲಿ ಕೆಲವು ಆಹಾರಗಳನ್ನು ಸೇವಿಸುವುದು ಕೂಡ ನಿಮಗೆ ಪ್ರಯೋಜನಕಾರಿ ಎಂದು ಸಾಬೀತುಪಡಿಸಲಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಮೀನಿನಲ್ಲಿ ಒಮೆಗಾ -3 ಕೊಬ್ಬಿನಾಮ್ಲಗಳು ಕಂಡು ಬರುತ್ತದೆ. ಇದು ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಕೊಬ್ಬನ್ನು ಕರಗಿಸಲು ತುಂಬಾ ಸಹಕಾರಿ ಆಗಲಿದೆ. ಹಾಗಾಗಿ, ತೂಕ ಕಳೆದುಕೊಳ್ಳಲು ಬಯಸಿದರೆ ನಿಮ್ಮ ದಿನನಿತ್ಯದ ಡಯಟ್ನಲ್ಲಿ ತಪ್ಪದೇ ಮೀನನ್ನು ಸೇರಿಸಿ.
ನೈಸರ್ಗಿಕ ರೀತಿಯಲ್ಲಿ ತೂಕ ಇಳಿಕೆಗೆ ಮೊಟ್ಟೆ ಕೂಡ ಬಹಳ ಪ್ರಯೋಜನಕಾರಿ ಆಗಿದೆ.
ಕ್ಯಾಪ್ಸಿಕಂ ಎಂದರೆ ದೊಡ್ಡ ಮೆಣಸಿನಕಾಯಿಯು ಕೊಬ್ಬನ್ನು ಸುಡುವ ತರಕಾರಿ ಆಗಿದೆ. ಹಾಗಾಗಿ, ನೀವು ವೇಗವಾಗಿ ತೂಕವನ್ನು ಕಡಿಮೆ ಮಾಡಲು ಬಯಸಿದರೆ, ನೀವು ಕ್ಯಾಪ್ಸಿಕಂ ಅನ್ನು ತಿನ್ನುವುದು ಪ್ರಯೋಜನಕಾರಿ ಆಗಲಿದೆ.
ಅಧಿಕ ಕಾಫಿ ಸೇವನೆ ಆರೋಗ್ಯಕ್ಕೆ ಒಳ್ಳೆಯದಲ್ಲ ಎಂಬುದರಲ್ಲಿ ಅನುಮಾನವೇ ಇಲ್ಲ. ಆದರೆ, ನಿತ್ಯ ಒಂದೆರಡು ಕಪ್ ಶುಗರ್ ಲೆಸ್ ಕಾಫಿ ಕುಡಿಯುವುದರಿಂದ ಆರೋಗ್ಯಕರವಾಗಿ ತೂಕ ಇಳಿಸಿಕೊಳ್ಳಬಹುದು.
ದಿನಕ್ಕೆ ಒಂದೆರಡು ಕಪ್ ಗ್ರೀನ್ ಟೀ ಸೇವನೆಯಿಂದಲೂ ನೈಸರ್ಗಿಕವಾಗಿ ತೂಕ ಕಳೆದುಕೊಳ್ಳಬಹುದು. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.