ಅರಶಿನವನ್ನು ಈ ರೀತಿ ಬಳಸಿದರೆ ಒಂದೇ ವಾರದಲ್ಲಿ ತೂಕ ಇಳಿಯುವುದು ಗ್ಯಾರಂಟಿ !

Turmeric For Weight Loss: ರಕ್ತದೊತ್ತಡದಿಂದ ಮಧುಮೇಹದವರೆಗೆ ಎಲ್ಲವನ್ನೂ ನಿಯಂತ್ರಿಸುವ ಶಕ್ತಿ ಈ ಅರಶಿನಕ್ಕಿದೆ. ಅರಿಶಿನ ತೂಕ ಇಳಿಕೆ ಪ್ರಕ್ರಿಯೆಯಲ್ಲಿಯೂ ಸಹಕಾರಿಯಾಗಿದೆ.

Turmeric For Weight Loss: ಅರಿಶಿನ ನಾವು ಅಡುಗೆಗೆ ಬಳಸುವ ಮುಖ್ಯ  ಮಸಾಲೆಯಾಗಿದೆ.ಇದು ಆಹಾರದ ರುಚಿಯನ್ನು ಹೆಚ್ಚಿಸುವುದರ ಜೊತೆಗೆ ಅನೇಕ ಔಷಧೀಯ ಗುಣಗಳನ್ನು ಹೊಂದಿದೆ. ಅರಿಶಿನ ಸೇವನೆಯಿಂದ ದೇಹದ ರೋಗನಿರೋಧಕ ಶಕ್ತಿ ಹೆಚ್ಚುತ್ತದೆ. ರಕ್ತದೊತ್ತಡದಿಂದ ಮಧುಮೇಹದವರೆಗೆ ಎಲ್ಲವನ್ನೂ ನಿಯಂತ್ರಿಸುವ ಶಕ್ತಿ ಈ ಅರಶಿನಕ್ಕಿದೆ. ಅರಿಶಿನ ತೂಕ ಇಳಿಕೆ ಪ್ರಕ್ರಿಯೆಯಲ್ಲಿಯೂ ಸಹಕಾರಿಯಾಗಿದೆ. ಆದರೆ ತೂಕ ಇಳಿಸಿಕೊಳ್ಳಬೇಕಾದರೆ ಅರಶಿನವನ್ನು ಬಳಸುವ ಸರಿಯಾದ ವಿಧಾನ ತಿಳಿದಿರಬೇಕು.  

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ. 

1 /5

ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಅರಿಶಿನ ನೀರನ್ನು ಕುಡಿಯುವುದರಿಂದ ಚಯಾಪಚಯ ಸುಧಾರಿಸುತ್ತದೆ. ಇದು ಹೊಟ್ಟೆಯಲ್ಲಿ ಸಂಗ್ರಹವಾಗಿರುವ ಕೊಬ್ಬನ್ನು ಸುಡುವಲ್ಲಿ ಸಹಾಯ ಮಾಡುತ್ತದೆ. ಒಂದು ಲೋಟ ನೀರಿನಲ್ಲಿ ಹಸಿ ಅರಿಶಿನ ತುಂಡುಗಳನ್ನು ಸೇರಿಸಿ ಚೆನ್ನಾಗಿ ಕುದಿಸಿ. ಈ ನೀರು ಕುದ್ದು ಅರ್ಧದಷ್ಟಾದಾಗ ಫಿಲ್ಟರ್ ಮಾಡಿ.ನಂತರ ಅದಕ್ಕೆ ಸ್ವಲ್ಪ ನಿಂಬೆ ಅಥವಾ ಜೇನುತುಪ್ಪ ಸೇರಿಸಿ ಸೇವಿಸಿ.   

2 /5

ತೂಕ ಇಳಿಸಿಕೊಳ್ಳಲು ಅರಿಶಿನ ಮತ್ತು ಶುಂಠಿಯನ್ನು ಜೊತೆಯಾಗಿ ಸೇವಿಸಬಹುದು. ಈ ಎರಡರ ಮಿಶ್ರಣವು ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಕೊಬ್ಬನ್ನು ತ್ವರಿತವಾಗಿ ಕಡಿಮೆ ಮಾಡುತ್ತದೆ. ಒಂದು ಕಪ್ ನೀರಿಗೆ ಒಂದು ಇಂಚು ಶುಂಠಿ ಮತ್ತು ಎರಡು ಚಿಟಿಕೆ ಅರಿಶಿನ ಹಾಕಿ ಕುದಿಸಿ. ಈ ನೀರನ್ನು ಚಹಾದಂತೆ ಸೇವಿಸಿ. 

3 /5

ಅರಿಶಿನ ಮತ್ತು ಜೇನುತುಪ್ಪದ ಮಿಶ್ರಣವು ತೂಕ ನಷ್ಟದಲ್ಲಿ ಪರಿಣಾಮಕಾರಿಯಾಗಿದೆ. ಒಂದು ಬಟ್ಟಲಿನಲ್ಲಿ ಒಂದು ಚಮಚ ಜೇನುತುಪ್ಪವನ್ನು ತೆಗೆದುಕೊಂಡು ಅದಕ್ಕೆ ಸ್ವಲ್ಪ ಹಸಿ ಅರಿಶಿನ ಬೆರೆಸಿ ತಿನ್ನಿ.   

4 /5

ಇನ್ನು ಅರಿಶಿನ ಹಾಲನ್ನು ಸೇವಿಸಿದರೂ ತೂಕ ನಷ್ಟಕ್ಕೆ ಸಹಾಯವಾಗುತ್ತದೆ. ಒಂದು ಲೋಟ ಬಿಸಿ ಹಾಲಿಗೆ ಒಂದು ಚಮಚ ಅರಿಶಿನ ಪುಡಿಯನ್ನು ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ.ಪ್ರತಿ ರಾತ್ರಿ ಮಲಗುವ ಮುನ್ನ ಇದನ್ನು ಸೇವಿಸಿ.   

5 /5

ಅರಿಶಿನದೊಂದಿಗೆ ಚಕ್ಕೆಯನ್ನು ಸೇವಿಸಿದರೂ ತೂಕ ನಿಯಂತ್ರಣಕ್ಕೆ ಸಹಾಯ ಮಾಡುತ್ತದೆ.  ಇವೆರಡನ್ನು ಒಟ್ಟಿಗೆ ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವನ್ನು ನಿಯಂತ್ರಿಸಬಹುದು. ಬಾಣಲೆಯಲ್ಲಿ ಒಂದು ಕಪ್ ನೀರನ್ನು ತೆಗೆದುಕೊಂಡು ಅದಕ್ಕೆ ಒಂದು ತುಂಡು ಚಕ್ಕೆ ಮತ್ತು ಚಿಟಿಕೆ ಅರಿಶಿನ ಸೇರಿಸಿ ಚೆನ್ನಾಗಿ ಕುದಿಸಿ. ನಂತರ ಈ ನೀರನ್ನು ಫಿಲ್ಟರ್ ಮಾಡಿ ಸೇವಿಸಿ. ಪ್ರತಿದಿನ ಬೆಳಗ್ಗೆ ಖಾಲಿ ಹೊಟ್ಟೆಯಲ್ಲಿ ಇದನ್ನು ಸೇವಿಸುವುದರಿಂದ  ತೂಕವನ್ನು ನಿಯಂತ್ರಣದಲ್ಲಿರುತ್ತದೆ.