ಒಗ್ಗರಣೆ ಡಬ್ಬಿಯಲ್ಲಿರುವ ಈ ಕಾಳು ಬ್ಲಡ್ ಶುಗರ್ ನಿಯಂತ್ರಣಕ್ಕೆ ಪರಮೌಷಧ! ರಾತ್ರಿ ಹೊತ್ತು ತಿನ್ನಿ… ಬೆಳಗ್ಗೆ ವೇಳೆ ನಾರ್ಮಲ್ ಆಗಿರುತ್ತೆ!

Benefits of Cumin Seeds in Diabetes: ವಿವಿಧ ರೀತಿಯ ಆಹಾರಗಳ ರುಚಿಯನ್ನು ಹೆಚ್ಚಿಸಲು ಜೀರಿಗೆಯನ್ನು ಬಳಸಲಾಗುತ್ತದೆ. ಇದು ಆಹಾರದ ರುಚಿಯನ್ನು ಹೆಚ್ಚಿಸುವುದಲ್ಲದೆ, ಆರೋಗ್ಯಕ್ಕೂ ಉತ್ತಮ ಪ್ರಯೋಜನಗಳನ್ನು ನೀಡುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /8

ಆಯುರ್ವೇದದಲ್ಲಿ ಜೀರಿಗೆಯನ್ನು ಪ್ರಮುಖ ಔಷಧಿ ಎಂದು ವಿವರಿಸಲಾಗಿದೆ, ಜೀರಿಗೆಯನ್ನು ಅತ್ಯುತ್ತಮವಾದ ಉತ್ಕರ್ಷಣ ನಿರೋಧಕ ಎಂದೂ ಸಹ ಪರಿಗಣಿಸಲಾಗುತ್ತದೆ, ತಾಮ್ರ, ಕಬ್ಬಿಣ, ಕ್ಯಾಲ್ಸಿಯಂ, ಪೊಟ್ಯಾಸಿಯಮ್, ಮ್ಯಾಂಗನೀಸ್, ಸತು ಮತ್ತು ಮೆಗ್ನೀಸಿಯಮ್ನಂತಹ ಖನಿಜಗಳ ಉತ್ತಮ ಮೂಲವಾಗಿದೆ ಜೀರಿಗೆ.

2 /8

ಜೀರಿಗೆಯು ಮಧುಮೇಹ ವಿರೋಧಿ ಗುಣಗಳನ್ನು ಹೊಂದಿದೆ. ಅಷ್ಟೇ ಅಲ್ಲದೆ, ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ. ಅಂದಹಾಗೆ ನಾವಿಂದು ಈ ವರದಿಯಲ್ಲಿ ಮಧುಮೇಹ ರೋಗಿಗಳಿಗೆ ಜೀರಿಗೆ ಉತ್ತಮವೇ? ಅದನ್ನು ಹೇಗೆ ಬಳಸುವುದು? ಎಂಬೆಲ್ಲಾ ವಿಚಾರಗಳ ಬಗ್ಗೆ ಮಾಹಿತಿಯನ್ನು ನೀಡಲಿದ್ದೇವೆ.

3 /8

ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಪ್ರಕಾರ, ಜೀರಿಗೆ ದೇಹದಲ್ಲಿ ಇನ್ಸುಲಿನ್ ಮಟ್ಟವನ್ನು ಹೆಚ್ಚಿಸುತ್ತದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಮಧುಮೇಹದಿಂದ ಮುಕ್ತಿ ದೊರೆಯುತ್ತದೆ.

4 /8

ಜೀರಿಗೆ ಇನ್ಸುಲಿನ್ ಅನ್ನು ಹೆಚ್ಚಿಸುವುದು ಮಾತ್ರವಲ್ಲದೆ ದೇಹದಲ್ಲಿನ ಚಯಾಪಚಯವನ್ನು ಹೆಚ್ಚಿಸುವ ಮೂಲಕ ಬೊಜ್ಜನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಣದಲ್ಲಿಡುತ್ತದೆ.

5 /8

ಜೀರಿಗೆಯಲ್ಲಿ ವಿಟಮಿನ್ ಸಿ ಮತ್ತು ಇ ಹೇರಳವಾಗಿ ಕಂಡುಬರುತ್ತವೆ, ಹೀಗಾಗಿ ನಿಯಮಿತವಾಗಿ ಸೇವಿಸಿದರೆ ಚರ್ಮವನ್ನು ಹೊಳೆಯುವ ಮತ್ತು ಆರೋಗ್ಯಕರವಾಗಿರುವಂತೆ ನೋಡಿಕೊಳ್ಳಬಹುದು.

6 /8

ಮಧುಮೇಹ ರೋಗಿಗಳು ಜೀರಿಗೆಯನ್ನು ಪುಡಿ ರೂಪದಲ್ಲಿ ಸೇವಿಸಿದರೆ ಹೆಚ್ಚು ಪ್ರಯೋಜನಕಾರಿಯಾಗಿದೆ. ಅದರಲ್ಲೂ ಹುರಿದ ಜೀರಿಗೆಯನ್ನು ಕಾಳುಗಳನ್ನು ಪುಡಿ ಮಾಡಿ ರಾತ್ರಿ ಮಲಗುವಾಗ ತಿಂದರೆ, ಮುಂಜಾನೆ ವೇಳೆಗೆ ಬ್ಲಡ್ ಶುಗರ್ ನಿಯಂತ್ರಣಕ್ಕೆ ಬರುತ್ತದೆ.

7 /8

ಊಟವಾದ ಸುಮಾರು 30 ನಿಮಿಷಗಳ ನಂತರ ಒಂದು ಲೋಟ ನೀರಿಗೆ ಒಂದು ಚಮಚ ಜೀರಿಗೆ ಪುಡಿ ಬೆರೆಸಿ ಕುಡಿದರೆ ಸಹ ರಕ್ತದಲ್ಲಿನ ಸಕ್ಕರೆ ಮಟ್ಟ ಕಡಿಮೆಯಾಗುತ್ತದೆ. ಜೊತೆಗೆ ಜೀರ್ಣಕ್ರಿಯೆಯನ್ನು ಸುಧಾರಿಸುತ್ತದೆ.

8 /8

(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)