Home Remedies to Cure Dandruff: ಕೇವಲ ನಿಂಬೆ ರಸವನ್ನು ಕೂದಲ ಬುಡಕ್ಕೆ ಹಚ್ಚಿ ಸ್ನಾನ ಮಾಡುವುದರಿಂದ ತಲೆಹೊಟ್ಟು ನಿವಾರಣೆಯಾಗುತ್ತದೆ. ತಲೆಕೂದಲಿಗೆ ಮೆಹೆಂದಿ ಹಾಕುವುದರಿಂದಲೂ ತಲೆ ಹೊಟ್ಟಿನ ಸಮಸ್ಯೆ ನಿವಾರಣೆಯಾಗುತ್ತದೆ.
Home Remedies to Cure Dandruff: ಬದಲಾದ ಜೀವನಶೈಲಿ ಮತ್ತು ಆಹಾರ ಪದ್ಧತಿಯಿಂದ ಇಂದು ಅನೇಕ ಕಾಯಿಲೆಗಳು ಜನರನ್ನು ಕಾಡುತ್ತವೆ. ಈ ಪೈಕಿ ತಲೆಹೊಟ್ಟು ಸಹ ಒಂದು. ಕೂದಲಿನ ಬಗ್ಗೆ ಕಾಳಜಿ ವಹಿಸದ ಜನರಲ್ಲಿ ತಲೆಹೊಟ್ಟಿನ ಸಮಸ್ಯೆ ಸಾಮಾನ್ಯಾಗಿ ಕಂಡುಬರುತ್ತದೆ. ಈ ತಲೆಹೊಟ್ಟನ್ನು ನಿವಾರಿಸಲು ಜನರು ಇನ್ನಿಲ್ಲದ ಸರ್ಕಸ್ ಮಾಡುತ್ತಾರೆ. ಮಾರುಕಟ್ಟೆಯಲ್ಲಿ ದೊರೆಯುವ ಶಾಂಪ್ಯೂ ಸೇರಿದಂತೆ ದುಬಾರಿ ಪ್ರಾಡಕ್ಟ್‌ಗಳನ್ನು ಬಳಸಿ ಸಮಸ್ಯೆಯನ್ನು ಮತ್ತಷ್ಟು ಹೆಚ್ಚಿಸಿಕೊಳ್ಳುತ್ತಾರೆ. ಇವೆಲ್ಲವನ್ನು ಬಿಟ್ಟು ಮನೆಯಲ್ಲಿಯೇ ನೈಸರ್ಗಿಕವಾಗಿ ಹಾಗೂ ಸುಲಭವಾಗಿ ತಲೆ ಹೊಟ್ಟಿನ ಸಮಸ್ಯೆಯನ್ನು ನಿವಾರಿಸಿಕೊಳ್ಳಬಹುದು. ತಲೆಹೊಟ್ಟು ನಿವಾರಿಸಲು ಕೆಲವು ಸಿಂಪಲ್ ಸಲಹೆಗಳನ್ನು ಇಲ್ಲಿ ನೀಡಲಾಗಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
ಸಾಮಾನ್ಯವಾಗಿ ಕೂದಲಿನ ಬುಡ ಒಣಗಿದಾಗ ತಲೆ ಹೊಟ್ಟಿನ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಆಗ ಕೂದಲಿಗೆ ಚೆನ್ನಾಗಿ ಎಣ್ಣೆ ಮಸಾಜ್ ಮಾಡುವುದರಿಂದ ತಲೆ ಹೊಟ್ಟು ನಿವಾರಣೆಯಾಗುತ್ತದೆ.
ವಾರಕ್ಕೊಮ್ಮೆ ಮೊಟ್ಟೆಯ ಹಳದಿ ಭಾಗವನ್ನು ತಲೆಗೆ ಹಚ್ಚಿಕೊಂಡು 1 ಗಂಟೆಯ ನಂತರ ತೊಳೆಯುವುದರಿಂದ ತಲೆ ಹೊಟ್ಟು ನಿವಾರಣೆಯಾಗುವುದಲ್ಲದೇ ತಲೆ ಕೂದಲೂ ಸಹ ಸೊಂಪಾಗಿ ಬೆಳೆಯುತ್ತದೆ.
ವಾರಕ್ಕೊಮ್ಮೆ ಲೋಳೆ ರಸವನ್ನು ತಲೆಗೆ ಹಚ್ಚಿ ಶ್ಯಾಂಪೂ ಬಳಸದೆ ಹಾಗೆಯೇ ತೊಳೆಯುವುದರಿಂದಲೂ ಸಹ ತಲೆಹೊಟ್ಟು ನಿವಾರಣೆಯಾಗುತ್ತದೆ.
ತಲೆ ಸ್ನಾನ ಮಾಡುವಾಗ ಶ್ಯಾಂಪೂ ಬಳಸುವುದರ ಬದಲು ಸೀಗೆಕಾಯಿ ಬಳಸುವುದರಿಂದ ತಲೆಹೊಟ್ಟು ನಿವಾರಣೆಯಾಗುವುದಲ್ಲದೇ ಅದು ಮತ್ತೆ ಬರದಂತೆ ತಡೆಗಟ್ಟಬಹುದು.
1 ಚಮಚ ಅಡುಗೆ ಸೋಡಾವನ್ನು ನೀರಿನಲ್ಲಿ ಬೆರೆಸಿ 5 ನಿಮಿಷದ ನಂತರ ಉಗುರು ಬೆಚ್ಚಗಿನ ನೀರಿನಲ್ಲಿ ತೊಳೆಯುವುದರಿಂದ ತಲೆಹೊಟ್ಟು ನಿವಾರಣೆಯಾಗುತ್ತದೆ.