ಪ್ರತಿಯೊಬ್ಬರಿಗೂ ಅವರದ್ದೇ ಆದ ಕೆಲವು ಅಭ್ಯಾಸಗಳಿರುತ್ತವೆ. ಕೆಲವರು ಊಟದ ಬಳಿಕ ಟೀ ಕುಡಿಯುವ ಅಭ್ಯಾಸ ಹೊಂದಿರುವಂತೆ, ಇನ್ನೂ ಕೆಲವರು ಧೂಮಪಾನ ಮಾಡುತ್ತಾರೆ. ಆದರೆ, ಆರೋಗ್ಯ ತಜ್ಞರ ಪ್ರಕಾರ, ಊಟವಾದ ಬಳಿಕ ಕೆಲವು ಕೆಲಸಗಳನ್ನು ಮಾಡಲೇಬಾರದು ಎಂದು ಹೇಳಲಾಗುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=uzXzteRDY-k
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್.
ಕೆಲವರು ಊಟವಾದ ತಕ್ಷಣ ಮಲಗುವ ಅಭ್ಯಾಸವನ್ನು ಹೊಂದಿರುತ್ತಾರೆ. ಆದರೆ, ಇದು ನೀವು ಆಹಾರವನ್ನು ಜೀರ್ಣಿಸಿಕೊಳ್ಳಲು ತೊಂದರೆ ಉಂಟುಮಾಡಬಹುದು.
ನೀವು ಜಿಮ್ ಅಥವಾ ವ್ಯಾಯಾಮ ಮಾಡುವುದಾದರೆ ಊಟ ಮಾಡುವ ಒಂದೆರಡು ಗಂಟೆ ಮೊದಲು ಇಲ್ಲವೇ ನಂತರ ಮಾಡುವುದು ಒಳ್ಳೆಯದು. ಇಲ್ಲದಿದ್ದರೆ, ಇದು ನಿಮ್ಮ ಆರೋಗ್ಯದ ಮೇಲೆ ನಕಾರಾತ್ಮಕ ಪರಿಣಾಮವನ್ನು ಉಂಟು ಮಾಡಬಹುದು.
ಕೆಲವರು ಊಟವಾದ ತಕ್ಷಣ ಒಂದು ಕಪ್ ಚಹಾ ಇಲ್ಲವೇ ಕಾಫಿ ಕುಡಿಯಲು ಇಚ್ಚಿಸುತ್ತಾರೆ. ಆದರೆ, ಇದರಿಂದ ದೇಹವು ಆಹಾರದಿಂದ ತೆಗೆದುಕೊಂಡ ಕಬ್ಬಿಣದ ಅಂಶವನ್ನು ಹೀರಿಕೊಳ್ಳಲು ಅಡ್ಡಿಯಾಗುತ್ತದೆ.
ಊಟ ಮಾಡಿದ ಬಳಿಕ ಧೂಮಪಾನ ಮಾಡುವುದು ಕೆಲವರ ಅಭ್ಯಾಸ. ಆದರೆ, ಇದು ನಿಮ್ಮ ಜೀರ್ಣಾಂಗ ವ್ಯವಸ್ಥೆಯ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ
ಹಣ್ಣುಗಳು ಆರೋಗ್ಯಕ್ಕೆ ಒಳ್ಳೆಯದು. ಆದರೆ, ಊಟ ಮಾಡಿದ ಬಳಿಕ ತಕ್ಷಣ ಹಣ್ಣುಗಳನ್ನು ಸೇವಿಸುವುದರಿಂದ ಇದು ಸರಿಯಾಗಿ ಜೀರ್ಣವಾಗುವುದಿಲ್ಲ. ನೀವು ಹಣ್ಣುಗಾನ್ನು ಸೇವಿಸುವುದಾದರೆ ಊಟ ಮಾಡುವ ಒಂದು ಗಂಟೆ ಮೊದಲು, ಇಲ್ಲವೇ ನಂತರ ಸೇವಿಸಿ. ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಕೆಲವು ಸಂಶೋಧನೆ ಹಾಗೂ ಸಾಮಾನ್ಯ ಮಾಹಿತಿಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.