ಖಾಲಿ ಹೊಟ್ಟೆಯಲ್ಲಿ ಈ ಆಹಾರ ವಸ್ತುಗಳನ್ನು ತಿಂದರೆ ಸಮಸ್ಯೆ ಕಟ್ಟಿಟ್ಟ ಬುತ್ತಿ

ಕೆಲವೊಂದು ಆಹಾರ ವಸ್ತುಗಳು ಎಷ್ಟೇ ಆರೋಗ್ಯ ಪ್ರಯೋಜನಗಳನ್ನು ಹೊಂದಿದ್ದರೂ ಅವುಗಳನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಬಾರದು. ಆರೋಗ್ಯಕ್ಕೆ ಉತ್ತಮ ಎಂದು ಸೇವಿಸುವ ಈ ಆಹಾರ ವಸ್ತುಗಳು ಆರೋಗ್ಯ ಬಿಗಡಾಯಿಸಲು ಕಾರಣವಾಗಬಹುದು.

ಬೆಂಗಳೂರು : ಇತ್ತೀಚಿನ ದಿನಗಳಲ್ಲಿ ಪ್ರತಿಯೊಬ್ಬರ ಜೀವನಶೈಲಿ ಬದಲಾಗುತ್ತಿದೆ. ಬದಲಾಗುತ್ತಿರುವ ಜೀವನ ಶೈಲಿಯಲ್ಲಿ ಜನ ತಮ್ಮ ಬಟ್ಟೆ, ಸೌಂದರ್ಯ, ಕೂದಲಿನ ಬಗ್ಗೆ ವಿಶೇಷ ಕಾಳಜಿ ವಹಿಸುತ್ತಾರೆ. ಆದರೆ ತಮ್ಮ ಆರೋಗ್ಯ, ಆಹಾರದ ಬಗ್ಗೆ ಮಾತ್ರ ಅಸಡ್ಡೆ ತೋರುತ್ತಾರೆ. ಕೈಗೆ ಏನು ಸಿಗುತ್ತದೆಯೋ ಅದನ್ನು ಆ ಹೊತ್ತಿನ ಹಸಿವು ನೀಗಿಸಲು ತಿನ್ನುವಂಥಹ ಸ್ಥಿತಿ  ಇಂದಿನ ಜನರೇಶನ್ ನ ಹವ್ಯಾಸವಾಗಿದೆ. ಆದರೆ ಕೆಲವೊಂದು ಆಹಾರ ವಸ್ತುಗಳು ಎಷ್ಟೇ ಆರೋಗ್ಯ ಪ್ರಯೋಜನಗಳನ್ನು ಹೊಂದಿದ್ದರೂ ಅವುಗಳನ್ನು ಖಾಲಿ ಹೊಟ್ಟೆಯಲ್ಲಿ ಸೇವಿಸಬಾರದು. ಆರೋಗ್ಯಕ್ಕೆ ಉತ್ತಮ ಎಂದು ಸೇವಿಸುವ ಈ ಆಹಾರ ವಸ್ತುಗಳು ಆರೋಗ್ಯ ಬಿಗಡಾಯಿಸಲು ಕಾರಣವಾಗಬಹುದು.

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ಟೊಮ್ಯಾಟೋವನ್ನು ಖಾಲಿ ಹೊಟ್ಟೆಯಲ್ಲಿ ತಿನ್ನಬಾರದು. ಏಕೆಂದರೆ ಇದರಲ್ಲಿರುವ ಗ್ಯಾಸ್ಟ್ರೋಇನ್ ಟೆಸ್ಟೈಲ್ ಹೊಟ್ಟೆಯಲ್ಲಿ  ಆಸಿಡ್, ಗ್ಯಾಸ್, ಕಿಡ್ನಿ ಸ್ಟೋನ್ ಮುಂತಾದ ಸಮಸ್ಯೆಗಳಿಗೆ ಕಾರಣವಾಗಬಹುದು.  

2 /5

ಹಾಲು ಮತ್ತು ಬಾಳೆಹಣ್ಣನ್ನು ಎಂದಿಗೂ ಖಾಲಿ ಹೊಟ್ಟೆಯಲ್ಲಿ ತಿನ್ನಬಾರದು. ಇದರಿಂದ ಅಜೀರ್ಣದ ಸಮಸ್ಯೆ ಕಾಣಿಸಿಕೊಳ್ಳುತ್ತದೆ. ಮಾತ್ರವಲ್ಲ ಇದು ಗ್ಯಾಸ್ ಮತ್ತು ಅಸಿಡಿಟಿ ಸಮಸ್ಯೆಗಳನ್ನು ಕೂಡಾ ತಂದೊಡ್ಡಬಹುದು.   

3 /5

ತಂಪು ಪಾನೀಯವನ್ನು ಸೇವಿಸುವ ಮೂಲಕ ಯಾವುದೇ ಕಾರಣಕ್ಕೂ ನಿಮ್ಮ ದಿನದ ಆರಂಭವನ್ನು ಮಾಡಬೇಡಿ. ಹೀಗೆ ಮಾಡುವುದರಿಂದ ಅದು ಜೀರ್ಣಕ್ರಿಯೆಯ ಮೇಲೆ ಪರಿಣಾಮ ಬೀರುತ್ತದೆ. 

4 /5

ಮಸಾಲೆಯುಕ್ತ ಆಹಾರ ತಿನ್ನಲು ಬಲು ರುಚಿ. ಆದರೆ ಇದನ್ನೂ ಎಂದಿಗೂ ಖಾಲಿ ಹೊಟ್ಟೆಯಲ್ಲಿ ತಿನ್ನಬಾರದು. ಏಕೆಂದರೆ ಖಾಲಿ ಹೊಟ್ಟೆಯಲ್ಲಿ ಮಸಾಲೆಯುಕ್ತ ಆಹಾರ ಸೇವಿಸುವುದರಿಂದ ಅದು ಹೊಟ್ಟೆಯ ಸಮಸ್ಯೆಗೆ ಕಾರಣವಾಗಬಹುದು.    

5 /5

ಈ ಋತುವಿನಲ್ಲಿ ಸಿಹಿ ಗೆಣಸು ಹೇರಳವಾಗಿ ಸಿಗುತ್ತದೆ. ಸಿಹಿ ಗೆಣಸು ಆರೋಗ್ಯಕ್ಕೆ ಅತ್ಯಂತ ಪ್ರಯೋಜನ ನೀಡುವ ಪದಾರ್ಥವಾಗಿದೆ. ಆದರೆ ಖಾಲಿ ಹೊಟ್ಟೆಯಲ್ಲಿ ಮಾತ್ರ ಈ ಹಣ್ಣನ್ನು ತಿನ್ನಬಾರದು. ಏಕೆಂದರೆ ಇದು ಹೊಟ್ಟೆಗೆ ಸಂಬಂಧಿಸಿದ ಕಾಯಿಲೆಗಳಿಗೆ ಕಾರಣವಾಗಬಹುದು.  (ಸೂಚನೆ :ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE KANNADA NEWS ಅದನ್ನು ಖಚಿತಪಡಿಸುವುದಿಲ್ಲ.)