ಸೌತೆಕಾಯಿಯನ್ನು ಸಿಪ್ಪೆ ಸಮೇತ ತಿಂದರೆ ಸಿಗುತ್ತೆ ಈ ಅದ್ಭುತ ಪ್ರಯೋಜನಗಳು

                          

Health Tips: ತಾಜಾ ಹಣ್ಣು-ತರಕಾರಿಗಳ ಸೇವನೆಯಿಂದ ಆರೋಗ್ಯ ವೃದ್ಧಿಯಾಗುತ್ತದೆ. ಅದರಲ್ಲೂ ಬೇಸಿಗೆಯಲ್ಲಿ ಕೆಲವು ತರಕಾರಿಗಳು ಯಾವುದೇ ಔಷಧಿಗಳಿಗಿಂತ ಕಡಿಮೆ ಇಲ್ಲ. ಅದರಲ್ಲೂ ನೀರಿನ ಅಂಶ ಹೆಚ್ಚಿರುವ ಸೌತೆಕಾಯಿಯಂತಹ ತರಕಾರಿಗಳನ್ನು ಸುಲಭವಾಗಿ ಸಲಾಡ್‌ಗಳ ರೂಪದಲ್ಲಿ ತಿನ್ನಬಹುದು. ಆದರೆ, ಸೌತೆಕಾಯಿಯನ್ನು ಅದರ ಸಿಪ್ಪೆ ಸಮೇತ ತಿನ್ನುವುದು ನಿಮ್ಮ ಆರೋಗ್ಯಕ್ಕೆ ಹೆಚ್ಚಿನ ಪ್ರಯೋಜನ ನೀಡಬಲ್ಲದು. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

ಸೌತೆಕಾಯಿಯಂತೆ ಅದರ ಸಿಪ್ಪೆಯಲ್ಲಿಯೂ ಕೂಡ ಹಲವು ಪೋಷಕಾಂಶಗಳು ಕಂಡು ಬರುತ್ತವೆ. ಸೌತೆಕಾಯಿಯನ್ನು ಅದರ ಸಿಪ್ಪೆಯೊಂದಿಗೆ ಸೇವಿಸುವುದರಿಂದ ನಮ್ಮ ದೇಹಕ್ಕೆ ಏನೆಲ್ಲಾ ಪ್ರಯೋಜನಗಳಿವೆ ಎಂದು ತಿಳಿಯೋಣ...

2 /5

ಸೌತೆಕಾಯಿಯನ್ನು ಅದರ ಸಿಪ್ಪೆ ಸಮೇತ ನಿಯಮಿತವಾಗಿ ಸೇವಿಸುತ್ತಾ ಬಂದರೆ ಕಣ್ಣಿನ ಆರೋಗ್ಯ ಸುಧಾರಿಸುತ್ತದೆ. ಮಾತ್ರವಲ್ಲ, ದೃಷ್ಟಿ ದುರ್ಬಲವಾಗುವುದನ್ನು ತಡೆಯಬಹುದು. 

3 /5

ಸೌತೆಕಾಯಿ ಸಿಪ್ಪೆಯಲ್ಲಿ ಆಸ್ಕೋರ್ಬಿಕ್ ಆಮ್ಲ ಕಂಡುಬರುತ್ತದೆ, ಜೊತೆಗೆ ಅದರಲ್ಲಿರುವ ಜೀವಸತ್ವಗಳು ಆಕ್ಸಿಡೇಟಿವ್ ಹಾನಿಯನ್ನು ತಡೆಯುತ್ತದೆ. ಹಾಗಾಗಿ, ಕಾಂತಿಯುತ ತ್ವಚೆ ಪಡೆಯಲು ನಿಯಮಿತವಾಗಿ ಸಿಪ್ಪೆ ಸಮೇತ ಸೌತೆಕಾಯಿಯನ್ನು ತಿನ್ನುವುದು ಹೆಚ್ಚು ಪ್ರಯೋಜನಕಾರಿ ಆಗಿದೆ. 

4 /5

ಸೌತೆಕಾಯಿಯನ್ನು ಸಿಪ್ಪೆಯೊಂದಿಗೆ ತಿನ್ನುವುದರಿಂದ ಆರೋಗ್ಯಕರವಾಗಿ ತೂಕ ಇಳಿಸಿಕೊಳ್ಳಲು ತುಂಬಾ ಸಹಕಾರಿ ಆಗಿದೆ. 

5 /5

ಸೌತೆಕಾಯಿಯನ್ನು ಸಿಪ್ಪೆಯೊಂದಿಗೆ ತಿನ್ನುವುದರಿಂದ ಹೃದಯ ಸಂಬಂಧಿ ಕಾಯಿಲೆಗಳ ಅಪಾಯವನ್ನು ಕಡಿಮೆ ಮಾಡುವುದು ಎಂದೂ ಸಹ ಹೇಳಲಾಗುತ್ತದೆ.  ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇದನ್ನು Zee ಮೀಡಿಯಾ ಖಚಿತಪಡಿಸುವುದಿಲ್ಲ.