ಫೋರ್ಬ್ಸ್ ನಿಯತಕಾಲಿಕೆ ಪ್ರಕಟಿಸುವ ವಿಶ್ವದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿರುವವರು ಬಹುತೇಕರು ಸೆಲ್ಫ್ ಮೇಡ್ ಶ್ರೀಮಂತರು.
ಬಿಲ್ ಗೇಟ್ಸ್, ಮಾರ್ಕ್ ಜುಕರ್ಬರ್ಗ್ ಸೇರಿ ವಿಶ್ವದ ಅಗ್ರಗಣ್ಯ ಕೋಟ್ಯಾಧಿಪತಿಗಳ ಶೈಕ್ಷಣಿಕ ಅರ್ಹತೆಗಳ ಬಗ್ಗೆ ನೀವು ಎಂದಾದರೂ ಯೋಚಿಸಿದ್ದೀರಾ? ಫೋರ್ಬ್ಸ್ ನಿಯತಕಾಲಿಕೆ ಪ್ರಕಟಿಸುವ ವಿಶ್ವದ ಶ್ರೀಮಂತ ವ್ಯಕ್ತಿಗಳ ಪಟ್ಟಿಯಲ್ಲಿರುವವರು ಬಹುತೇಕರು ಸೆಲ್ಫ್ ಮೇಡ್ ಶ್ರೀಮಂತರು. ಕಾಲೇಜು ಡ್ರಾಫ್ ಔಟ್ ಅಥವಾ ಕಾಲೇಜು ಮತ್ತು ವಿಶ್ವವಿದ್ಯಾನಿಲಯಕ್ಕೆ ಹೋಗದ ಅನೇಕ ಕೋಟ್ಯಧಿಪತಿಗಳಿದ್ದಾರೆ ಎಂದು ತಿಳಿದರೆ ನಿಮಗೆ ಆಶ್ಚರ್ಯವಾಗುತ್ತದೆ. ವಿಶ್ವದ ಅತ್ಯಂತ ಶ್ರೀಮಂತ ವ್ಯಕ್ತಿಗಳ ಶೈಕ್ಷಣಿಕ ಅರ್ಹತೆ ಬಗ್ಗೆ ಉಪಯುಕ್ತ ಮಾಹಿತಿ ಇಲ್ಲಿದೆ ನೋಡಿ...
ಕನ್ನಡ ಭಾಷೆಯಲ್ಲಿ ಮತ್ತಷ್ಟು ಸ್ವಾರಸ್ಯಕರ ಸುದ್ದಿಗಳನ್ನು ಓದಲು ನಮ್ಮ ಝೀ ಹಿಂದೂಸ್ತಾನ್ ಕನ್ನಡ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ
ಮಾಜಿ ಅಮೆಜಾನ್ ಸಿಇಒ ಮತ್ತು ವಿಶ್ವದ 2ನೇ ಶ್ರೀಮಂತ ವ್ಯಕ್ತಿ ಜೆಫ್ ಬೆಜೋಸ್ 1986ರಲ್ಲಿ ಪ್ರಿನ್ಸ್ಟನ್ ವಿಶ್ವವಿದ್ಯಾಲಯದಿಂದ ಪದವಿ ಪಡೆದುಕೊಂಡಿದ್ದಾರೆ. ಇದಲ್ಲದೆ ಎಲೆಕ್ಟ್ರಿಕಲ್ ಎಂಜಿನಿಯರಿಂಗ್ ಮತ್ತು ಕಂಪ್ಯೂಟರ್ ವಿಜ್ಞಾನದಲ್ಲಿ ಎಂಜಿನಿಯರಿಂಗ್ (ಬಿಎಸ್ಇ) ಪದವಿ ಪಡೆದುಕೊಂಡಿದ್ದಾರೆ.
ಮೈಕ್ರೋಸಾಫ್ಟ್ ಸಂಸ್ಥಾಪಕ ಬಿಲ್ ಗೇಟ್ಸ್ 1973ರಲ್ಲಿ ಹಾರ್ವರ್ಡ್ನಲ್ಲಿ ಪ್ರಿ-ಲಾ ಮೇಜರ್ ಕೋರ್ಸ್ ಓದಲು ಸೇರಿಕೊಂಡರು. ಆದರೆ ಅವರಿಗೆ ವಿಶ್ವವಿದ್ಯಾನಿಲಯದ ಅತ್ಯಂತ ಕಠಿಣ ಗಣಿತ ಮತ್ತು ಪದವಿ ಮಟ್ಟದ ಕಂಪ್ಯೂಟರ್ ಸೈನ್ಸ್ ಕೋರ್ಸ್ಗಳು ಹಿಡಿಸಲಿಲ್ಲ. ಹೀಗಾಗಿ ಅವರು ಓದನ್ನು ಅರ್ಧಕ್ಕೆ ನಿಲ್ಲಿಸಿಬಿಟ್ಟರು. ಹಾರ್ವರ್ಡ್ನಿಂದ ಡ್ರಾಫ್ ಔಟ್ ಆದ ಅವರು ಮೈಕ್ರೋಸಾಫ್ಟ್ ಆರಂಭಿಸಲು ನಿರ್ಧರಿಸಿದರು.
ಫೇಸ್ಬುಕ್ ಸಿಇಒ ಮಾರ್ಕ್ ಜುಕರ್ಬರ್ಗ್ ಹಾರ್ವರ್ಡ್ನಲ್ಲಿ ಮನೋವಿಜ್ಞಾನ ಮತ್ತು ಕಂಪ್ಯೂಟರ್ ವಿಜ್ಞಾನವನ್ನು ಅಧ್ಯಯನ ಮಾಡಿದರು. ಹಾರ್ವರ್ಡ್ನಲ್ಲಿರುವಾಗ ‘ಥೇಸ್ಬುಕ್’ ಅನ್ನು ಅಭಿವೃದ್ಧಿಪಡಿಸಿದರು. ಪ್ರತಿಷ್ಠಿತ ವಿಶ್ವವಿದ್ಯಾನಿಲಯದಿಂದ ಹೊರಬಂದ ಜುಕರ್ಬರ್ಗ್ ತಮ್ಮ ಫೇಸ್ಬುಕ್ ಯೋಜನೆಯ ಮೇಲೆ ಗಮನಹರಿಸಿದರು.
ಬರ್ಕ್ಶೈರ್ ಹಾಥ್ವೇ ಸಿಇಒ ವಾರೆನ್ ಬಫೆಟ್ ಅವರು ಪೆನ್ಸಿಲ್ವೇನಿಯಾ ವಿಶ್ವವಿದ್ಯಾಲಯದ ವಾರ್ಟನ್ ಸ್ಕೂಲ್ನಲ್ಲಿ ಬ್ಯುಸಿನೆಸ್ ಮೇಜರ್ ಆಗಿ ಸೇರಿಕೊಂಡರು. ಆದರೆ ಅವರು ನೆಬ್ರಾಸ್ಕಾ -ಲಿಂಕನ್ ವಿಶ್ವವಿದ್ಯಾಲಯಕ್ಕೆ ತೆರಳಿ, ತಮ್ಮ 20ನೇ ವಯಸ್ಸಿನಲ್ಲಿ ಬ್ಯಾಚುಲರ್ ಆಫ್ ಸೈನ್ಸ್ ಪದವಿ ಪಡೆದರು. ನಂತರ ಅವರು ಕೊಲಂಬಿಯಾ ಬಿಸಿನೆಸ್ ಸ್ಕೂಲ್ನಲ್ಲಿ ಅರ್ಥಶಾಸ್ತ್ರ ವಿಷಯದಲ್ಲಿ ಸ್ನಾತಕೋತ್ತರ ಪದವಿಯನ್ನು ಗಳಿಸಿದರು.
ಗೂಗಲ್ ಸಿಇಒ ಲ್ಯಾರಿ ಪೇಜ್ ಅವರು ಮಿಚಿಗನ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಎಂಜಿನಿಯರಿಂಗ್ ವಿಷಯದಲ್ಲಿ ಬಿಎಸ್ಸಿ ಪದವಿ ಪಡೆದುಕೊಂಡಿದ್ದಾರೆ. ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯದಿಂದ ಕಂಪ್ಯೂಟರ್ ಸೈನ್ಸ್ ವಿಷಯದಲ್ಲಿ ಸ್ನಾತಕೋತ್ತರ ಪದವಿ ಗಳಿಸಿದ್ದಾರೆ. ಸ್ಟ್ಯಾನ್ಫೋರ್ಡ್ ವಿಶ್ವವಿದ್ಯಾಲಯದಲ್ಲಿ ಪಿಎಚ್ಡಿ ಮಾಡುತ್ತಿದ್ದ ಸಮಯದಲ್ಲಿಯೇ ಪೇಜ್ ಅವರು ಗೂಗಲ್ ನ ಸಹ ಪಾಲುದಾರ ಸೆರ್ಗೆ ಬ್ರಿಯಾನ್ ಅವರನ್ನು ಭೇಟಿಯಾಗಿದ್ದರು.