ಶತಭಿಷಾ ನಕ್ಷತ್ರದಲ್ಲಿ ಶನಿಯ ಪ್ರವೇಶ- ಈ ರಾಶಿಯವರಿಗೆ ವಿಶೇಷ ಪ್ರಯೋಜನ

                        

ವೈದಿಕ ಜ್ಯೋತಿಷ್ಯ ಶಾಸ್ತ್ರದ ಪ್ರಕಾರ ಶನಿಯು ಶೀಘ್ರದಲ್ಲೇ ಶತಭಿಷಾ ನಕ್ಷತ್ರವನ್ನು ಪ್ರವೇಶಿಸಲಿದ್ದಾನೆ. ಮಾರ್ಚ್ 15 ರಂದು ಶನಿಯು ಶತಭಿಷಾ ನಕ್ಷತ್ರವನ್ನು ಪ್ರವೇಶಿಸುತ್ತಾನೆ. ರಾಹು ಈ ನಕ್ಷತ್ರದ ಅಧಿಪತಿ ಆಗಿದ್ದು, ಶನಿ-ರಾಹು ನಡುವೆ ಸ್ನೇಹ ಭಾವವಿದ್ದು, ಈ ಸಂಯದಲ್ಲಿ ಕೆಲವು ರಾಶಿಯವರು ವಿಶೇಷ ಪ್ರಯೋಜನಗಳನ್ನು ಪಡೆಯಲಿದ್ದಾರೆ ಎಂದು ಹೇಳಲಾಗುತ್ತಿದೆ. ಶತಭಿಷಾ ನಕ್ಷತ್ರದಲ್ಲಿ ಶನಿಯ ಪ್ರವೇಶ ಯಾವ ರಾಶಿಯವರಿಗೆ ಅದೃಷ್ಟವನ್ನು ತರಲಿದೆ ಎಂದು ತಿಳಿಯೋಣ...

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಶನಿಯು ಶತಭಿಷಾ ನಕ್ಷತ್ರಕ್ಕೆ ಪ್ರವೇಶಿಸುವುದರಿಂದ ಮೇಷ ರಾಶಿಯವರಿಗೆ ವಿಶೇಷ ಫಲಗಳು ಪ್ರಾಪ್ತಿಯಾಗಲಿವೆ. ಹೊಸ ವ್ಯವಹಾರವನ್ನು ಪ್ರಾರಂಭಿಸಲು ಯೋಚಿಸುತ್ತಿರುವವರಿಗೆ ಸೂಕ್ತ ಸಮಯ.  ಈ ರಾಶಿಯವರು ಹೂಡಿಕೆಯಿಂದ ಲಾಭ ಪಡೆಯಬಹುದು. ಉದ್ಯೋಗಿಗಳು ಬಡ್ತಿ ಅಥವಾ ಇನ್ಕ್ರಿಮೆಂಟ್ ಸಾಧ್ಯತೆ.

2 /5

ಶತಭಿಷಾ ನಕ್ಷತ್ರದಲ್ಲಿ ಪ್ರವೇಶಿಸಲಿರುವ ಶನಿಯು ಮಿಥುನ ರಾಶಿಯವರಿಗೆ ತುಂಬಾ ಲಾಭದಾಯಕ ಎಂದು ಸಾಬೀತುಪಡಿಸಲಿದೆ. ಶನಿಯ ಧೈಯಾ ಪ್ರಭಾವದಿಂದಲೂ ಪರಿಹಾರ ದೊರೆಯಲಿದ್ದು, ಆದಾಯದ ಹೊಸ ಮೂಲಗಳು ಸೃಷ್ಟಿಯಾಗಲಿವೆ. 

3 /5

ಶನಿಯ ಆಶೀರ್ವಾದದಿಂದ ಈ ಸಮಯದಲ್ಲಿ ಸಿಂಹ ರಾಶಿಯವರಿಗೆ ಹೊಸ ಉದ್ಯೋಗ ಸಿಗುವ ಸಾಧ್ಯತೆ ಇದೆ. ದೀರ್ಘಕಾಲದಿಂದ ಸ್ಥಗಿತಗೊಂಡಿದ್ದ ಕೆಲಸಗಳು ಈಗ ಪೂರ್ಣಗೊಳ್ಳಲಿವೆ. 

4 /5

ಶತಭಿಷಾ ನಕ್ಷತ್ರದಲ್ಲಿ ಶನಿಯ ಪ್ರವೇಶದಿಂದ ತುಲಾ ರಾಶಿಯವರ ಅದೃಷ್ಟ ಖುಲಾಯಿಸಲಿದೆ. ಜೀವನದಲ್ಲಿ ಸುಖ-ಸಂತೋಷಕ್ಕೆ ಕೊರತೆ ಇರುವುದಿಲ್ಲ. ಉದ್ಯೋಗಸ್ಥರಿಗೆ ಪ್ರಮೋಷನ್ ಭಾಗ್ಯ, ವ್ಯಾಪಾರಸ್ಥರಿಗೆ ಬಂಪರ್ ಆಫರ್ ದೊರೆಯುವ ಸಾಧ್ಯತೆ ಇದೆ. 

5 /5

ಶತಭಿಷಾ ನಕ್ಷತ್ರಕ್ಕೆ ಶನಿಯ ಪ್ರವೇಶವು ಧನು ರಾಶಿಯವರಿಗೆ ಶುಭ ಫಲಿತಾಂಶಗಳನ್ನು ನೀಡುತ್ತದೆ. ಉದ್ಯೋಗ ವ್ಯವಹಾರದಲ್ಲಿ ನಿರೀಕ್ಷಿತ ಫಲಿತಾಂಶ ದೊರೆಯಲಿದೆ. ಕೌಟುಂಬಿಕ ವಾತಾವರಣವೂ ಆಹ್ಲಾದಕರವಾಗಿರುತ್ತದೆ. ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಧಾರ್ಮಿಕ ನಂಬಿಕೆಗಳು ಮತ್ತು ಸಾಮಾನ್ಯ ಮಾಹಿತಿಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.