ಕಲಬುರ್ಗಿಯಲ್ಲಿ ಸುಮಾರು 50 ಕೋಟಿ ರೂ.ವೆಚ್ಚದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಸ್ಥಾಪನೆ

ಕಲಬುರಗಿಯ ಜಿಮ್ಸ್ ಆವರಣದಲ್ಲಿ ಸುಮಾರು 50 ಕೋಟಿ ರೂ. ವೆಚ್ಚದಲ್ಲಿ ಕ್ರಿಟಿಕಲ್ ಕೇರ್ ಯೂನಿಟ್ ಸ್ಥಾಪಿಸಲಾಗುವುದು ಎಂದು ರಾಜ್ಯದ ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ, ಉದ್ಯಮಶೀಲತೆ ಹಾಗೂ ಜೀವನೋಪಾಯ ಸಚಿವ ಡಾ.ಶರಣಪ್ರಕಾಶ ಪಾಟೀಲ ಹೇಳಿದರು.ಮಂಗಳವಾರ ಕಲಬುರಗಿ ನಗರದ ಕರ್ನಾಟಕ-ಜರ್ಮನ್ ತಾಂತ್ರಿಕ ತರಬೇತಿ ಸಂಸ್ಥೆ (ಕೆ.ಜಿ.ಟಿ.ಟಿ.ಐ)ಗೆ ಭೇಟಿ ನೀಡಿದ ನಂತರ ಸುದ್ದಿಗಾರರೊಂದಿಗೆ ಮಾತನಾಡಿದರು.

ತುರ್ತಾಗಿ ಸ್ಪಂದಿಸಬೇಕಾದ ರೋಗಿಗಳಿಗೆ ಈ ಘಟಕದಿಂದ ಅಗತ್ಯ ವೈದ್ಯಕೀಯ ನೆರವು ಸಿಗಲಿದೆ. ಇದರಲ್ಲಿ ಸುಟ್ಟ ಗಾಯಗಳ ಘಟಕ ಸಹ ಸೇರಿದೆ. ಮುಂದಿನ 2 ವರ್ಷದಲ್ಲಿ ಈ ಘಟಕ ಜಿಮ್ಸ್ ಆವರಣದಲ್ಲಿಯೇ ಪ್ರತ್ಯೇಕವಾಗಿ ಸ್ಥಾಪನೆಯಾಗಲಿದೆ ಎಂದರು.

 

1 /6

ಕಲಬುರಗಿ ನಗರದಲ್ಲಿ ಕೆ.ಕೆ.ಆರ್.ಡಿ.ಬಿ. ಮಂಡಳಿಯ 182.65 ಕೋಟಿ ರೂ. ಆರ್ಥಿಕ ನೆರವಿನೊಂದಿಗೆ ನಿರ್ಮಾಣವಾಗುತ್ತಿರುವ 371 ಹಾಸಿಗೆಯ ಶ್ರೀ ಜಯದೇವ ಹೃದ್ರೋಗ ಮತ್ತು ವಿಜ್ಞಾನಗಳ ಸಂಸ್ಥೆಯ ಆಸ್ಪತ್ರೆಯನ್ನು 2024ರ ಜನವರಿಯಲ್ಲಿ ಮತ್ತು 162.80 ಕೋಟಿ ರೂ. ಪರಿಷ್ಕೃತ ಅಂದಾಜಿನೊಂದಿಗೆ ಜಿಮ್ಸ್ ಆವರಣದಲ್ಲಿ ನಿರ್ಮಾಣ ಹಂತದಲ್ಲಿರುವ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಮುಂದಿನ 6 ತಿಂಗಳಿನಲ್ಲಿ ಪೂರ್ಣಗೊಳಿಸಿ ಲೋಕಾರ್ಪಣೆ ಮಾಡಲಾಗುವುದೆಂದು ಸಚಿವ ಡಾ.ಶರಣಪ್ರಕಾಶ ಪಾಟೀಲ ತಿಳಿಸಿದರು.

2 /6

ಜನವರಿಯಲ್ಲಿ ಜಯದೇವ,6 ತಿಂಗಳಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಲೋಕಾರ್ಪಣೆ  

3 /6

ಇದೀಗ ನಮ್ಮ ಸರ್ಕಾರ ಬಂದ ಕೂಡಲೆ ಸೆಂಟರ್ ಕಾರ್ಯಾಚರಣೆಗೆ ಎಲ್ಲಾ ಸಿದ್ಧತೆ ಮಾಡಿಕೊಂಡಿದ್ದು, ಮುಂದಿನ ಒಂದು ತಿಂಗಳಿನಲ್ಲಿ ಟ್ರಾಮಾ ಸೆಂಟರ್ ರೋಗಿಗಳ ಸೇವೆಗೆ ಲಭ್ಯವಾಗಲಿದೆ.  

4 /6

ರಸ್ತೆ ಅಪಘಾತದಂತಹ ಪ್ರಕರಣದಲ್ಲಿ ತುರ್ತಾಗಿ ಚಿಕಿತ್ಸೆ ನೀಡಲು ಕಲಬುರಗಿ ಜಿಮ್ಸ್ ಆವರಣದಲ್ಲಿ ಹಿಂದೆ ನಮ್ಮ ಸರ್ಕಾರದ ಅವಧಿಯಲ್ಲಿ ಟ್ರಾಮಾ ಸೆಂಟರ್ ನಿರ್ಮಿಸಲಾಗಿತ್ತಾದರೂ, ಅಗತ್ಯ ವೈದ್ಯಕೀಯ ಉಪಕರಣಗಳು ಇಲ್ಲದ ಕಾರಣ ಸೇವೆ ಆರಂಭಿಸಿರಲಿಲ್ಲ.

5 /6

ಜಯದೇವ ಆಸ್ಪತ್ರೆಯಂತೆ ಈ ಆಸ್ಪತ್ರೆ ಸಹ 371 ಹಾಸಿಗೆ ಬ್ರ್ಯಾಂಡ್‍ನೊಂದಿಗೆ ಗುರುತಿಸಿಕೊಳ್ಳಲಿದೆ. ಪ್ರಸುತ ಹಳೇ ಜಿಲ್ಲಾ ಆಸ್ಪತ್ರೆ ಕೆಡವಿ ಅಲ್ಲಿ ಈ ಹೊಸ ಕಟ್ಟಡ ನಿರ್ಮಿಸಲಾಗುವುದು. ಈಗಾಗಲೆ ನೀಲಿ ನಕ್ಷೆ ತಯಾರಿದ್ದು, ಡಿ.ಪಿ.ಆರ್. ಸಿದ್ಧಗೊಳ್ಳುತ್ತಿದೆ. ಮುಂದಿನ 2 ವರ್ಷದಲ್ಲಿ ಇದನ್ನು ನಿರ್ಮಿಸಲಾಗುವುದು ಎಂದು ಡಾ. ಶರಣಪ್ರಕಾಶ ಪಾಟೀಲ ಮಾಹಿತಿ ನೀಡಿದರು.    

6 /6

ಪ್ರಸಕ್ತ 2023-24ನೇ ಸಾಲಿನ ಆಯವ್ಯಯದಲ್ಲಿ ಘೋಷಿಸಿರುವಂತೆ 70 ಕೋಟಿ ರೂ. ವೆಚ್ಚದಲ್ಲಿ ತಾಯಿ ಮತ್ತು ಮಕ್ಕಳ ಆಸ್ಪತ್ರೆಯನ್ನು ನಿರ್ಮಿಸಲಾಗುವುದು.