Fennel Seeds For White Hair: ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿರುವವರು ತೆಂಗಿನೆಣ್ಣೆಯ ಜೊತೆ ಈ ಕಾಳಿನ ಪುಡಿಯನ್ನು ಸೇರಿಸಿ ಪ್ರತಿದಿನ ಹಚ್ಚಿದರೆ ಉತ್ತಮ ಫಲಿತಾಂಶ ಸಿಗುತ್ತದೆ. ಮೇಲಾಗಿ ಬಿಳಿ ಕೂದಲನ್ನು ತಡೆಯುತ್ತದೆ ಎನ್ನುತ್ತಾರೆ ಆಯುರ್ವೇದ ತಜ್ಞರು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಬಿಳಿ ಕೂದಲಿನ ಸಮಸ್ಯೆಯಿಂದ ಬಳಲುತ್ತಿರುವವರು ಹೆಚ್ಚಾಗಿ ಹೇರ್ ಡೈಗಳನ್ನು ಬಳಸುತ್ತಾರೆ.
ಆದರೆ ಇಂದಿನ ದಿನಗಳಲ್ಲಿ ಮಾರುಕಟ್ಟೆಯಲ್ಲಿ ಲಭ್ಯವಿರುವ ಕೆಮಿಕಲ್ ಗಳಿರುವ ಹೇರ್ ಪ್ರಾಡಕ್ಟ್ ಗಳನ್ನು ಹಲವರು ಬಳಸುತ್ತಿದ್ದಾರೆ.
ಕೆಮಿಕಲ್ ಗಳಿರುವ ಹೇರ್ ಕಲರ್ ಬಳಕೆಯಿಂದ ಹಲವಾರು ರೀತಿಯ ಕೂದಲ ಸಮಸ್ಯೆಗಳು ಎದುರಾಗುವ ಸಾಧ್ಯತೆ ಇದೆ ಎನ್ನುತ್ತಾರೆ ತಜ್ಞರು.
ತೆಂಗಿನೆಣ್ಣೆ ಮತ್ತು ಸೋಂಪು ಕಾಳುಗಳ ಮಿಶ್ರಣವು ಇಂತಹ ಸಮಸ್ಯೆಗಳಿಂದ ಸುಲಭವಾಗಿ ಪರಿಹಾರವನ್ನು ಒದಗಿಸುತ್ತದೆ.
ಈ ಮಿಶ್ರಣವನ್ನು ತಯಾರಿಸಿ ಕೂದಲಿಗೆ ಹಚ್ಚುವುದರಿಂದ ಹಲವಾರು ರೀತಿಯ ಕೂದಲಿನ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು ಎನ್ನುತ್ತಾರೆ ಆಯುರ್ವೇದ ತಜ್ಞರು.
ಇದಕ್ಕಾಗಿ ಮೊದಲು ನೀವು ಸೋಂಪು ಕಾಳಿನ ಪುಡಿಯನ್ನು ಮಾಡಬೇಕಾಗುತ್ತದೆ. ನಂತರ ಅದನ್ನು ತೆಂಗಿನ ಎಣ್ಣೆಗೆ ಸೇರಿಸಿ ಮತ್ತು ಚೆನ್ನಾಗಿ ಮಿಶ್ರಣ ಮಾಡಿ.
ಈ ಮಿಶ್ರಣವನ್ನು ಕೂದಲಿಗೆ ಹಚ್ಚಿ 25 ರಿಂದ 30 ನಿಮಿಷ ಬಿಡಿ. ನಂತರ ತಲೆಸ್ನಾನ ಮಾಡಿ. ಹೀಗೆ ಮಾಡುವುದರಿಂದ ಬಿಳಿ ಕೂದಲು ಸುಲಭವಾಗಿ ಕಪ್ಪಾಗಬಹುದು.
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee ಮಾಧ್ಯಮವು ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)