Bigg Boss Kannada First Elimination Yamuna Srinidhi: ಕನ್ನಡದ ಅತಿ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡ ಸೀಸನ್ 11ರ ಮೊದಲ ಎಲಿಮಿನೇಷನ್ ಪ್ರಕ್ರಿಯೆ ಶನಿವಾರದಿಂದ ಪ್ರಾರಂಭವಾಗಿದೆ. ಈ ಸೀಸನ್‌ನಲ್ಲಿ ಒಬ್ಬರಿಗಿಂತ ಒಬ್ಬರು ಚತುರ ಸ್ಪರ್ಧಿಗಳೇ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಕನ್ನಡದ ಅತಿ ಜನಪ್ರಿಯ ರಿಯಾಲಿಟಿ ಶೋ ಬಿಗ್‌ಬಾಸ್ ಕನ್ನಡ ಸೀಸನ್ 11ರ ಮೊದಲ ಎಲಿಮಿನೇಷನ್ ಪ್ರಕ್ರಿಯೆ ಶನಿವಾರದಿಂದ ಪ್ರಾರಂಭವಾಗಿದೆ. ಈ ಸೀಸನ್‌ನಲ್ಲಿ ಒಬ್ಬರಿಗಿಂತ ಒಬ್ಬರು ಚತುರ ಸ್ಪರ್ಧಿಗಳೇ ದೊಡ್ಮನೆಗೆ ಎಂಟ್ರಿ ಕೊಟ್ಟಿದ್ದಾರೆ.
ಈ ವಾರ ಒಂಟಿ ಮನೆಯಿಂದ ಹೊರಬೀಳುವ ಸ್ಪರ್ಧಿ ಯಾರು ಎಂಬ ಕುತೂಹಲ ಎಲ್ಲೆಡೆ ಮನೆಮಾಡಿತ್ತು. ಇದೀಗ ಅಧಿಕೃತ ಮಾಹಿತಿ ಹೊರಬಿದ್ದಿದ್ದು, ಯಮುನಾ ಶ್ರೀನಿಧಿ ಎಲಿಮಿನೇಟ್ ಆಗಿದ್ದಾರೆ.
ಬಿಗ್‌ಬಾಸ್ ಮನೆಯಲ್ಲಿ ಕ್ಯಾಪ್ಟನ್ಸಿ ಟಾಸ್ಕ್‌ಗೆ ಹಂಸ ಪರ ಆಡಿದ್ದ ರಂಜಿತ್ ಸ್ವರ್ಗಕ್ಕೆ ಎಂಟ್ರಿ ಪಡೆದಿದ್ದರೆ, ಸ್ವರ್ಗದಲ್ಲಿದ್ದರೂ ನರಕ ತೋರಿಸಿ ಕಿಚ್ಚನ ಖಡಕ್ ಮಾತುಗಳಿಗೆ ಸೈಲೆಂಟ್ ಆಗಿದ್ದ ಲಾಯರ್ ಜಗದೀಶ್ ನರಕ ಸೇರಿದ್ದಾರೆ ಎನ್ನಲಾಗಿದೆ.
ಯಮುನಾ ಬಿಗ್‌ಬಾಸ್ ಮನೆಯಿಂದ ಎಲಿಮಿನೇಟ್ ಆಗಿರುವ ಬಗ್ಗೆ kannadanews_kfiinsider ಎಂಬ ಇನ್‌ಸ್ಟಾಗ್ರಾಂ ಪೇಜ್ 100ಕ್ಕೆ 100 ಶೇಕಡಾ ಇದು ಅಧಿಕೃತ ಎಂದು ಬರೆದುಕೊಂಡಿದೆ. ಅಷ್ಟೇ ಅಲ್ಲದೆ, ರಂಜಿತ್ ಮತ್ತು ಜಗದೀಶ್ ಬಗ್ಗೆ ಇದೇ ಪೇಜ್ ಮಾಹಿತಿ ಹಂಚಿಕೊಂಡಿದೆ.
ಆರಂಭದಲ್ಲಿ ಭರತನಾಟ್ಯ ಕಲಾವಿದೆಯಾಗಿದ್ದ ಯಮುನಾ ಶ್ರೀನಿಧಿ ಅವರು ವಿವಿಧ ಶೈಲಿಗಳಿಗಾಗಿ ವಿವಿಧ ಭರತನಾಟ್ಯ ಗುರುಗಳಿಂದ ತರಬೇತಿಯನ್ನು ಪಡೆದಿದ್ದಾರೆ. ಅಷ್ಟೇ ಅಲ್ಲದೆ, USA ನಲ್ಲಿ ಸುಮಾರು 700 ವಿದ್ಯಾರ್ಥಿಗಳಿಗೆ ನೃತ್ಯವನ್ನು ಕಲಿಸಿದ್ದಾರೆ.
ಶಾಸ್ತ್ರೀಯ ಭರತನಾಟ್ಯ ನೃತ್ಯಗಾರ್ತಿಯಾಗಿ, ನೃತ್ಯ ಸಂಯೋಜಕಿಯಾಗಿ 15 ವರ್ಷಗಳ ಕಾಲ USA ನಲ್ಲಿ ಜೀವನ ನಡೆಸಿದ ನಂತರ, ಯಮುನಾ 2012 ರಲ್ಲಿ ಭಾರತಕ್ಕೆ ಮರಳಿದ್ದರು. ಅದಾದ ನಂತರ ಕನ್ನಡ ಧಾರಾವಾಹಿ ಅಶ್ವಿನಿ ನಕ್ಷತ್ರದ ಮೂಲಕ ತಮ್ಮ ನಟನಾ ವೃತ್ತಿಯನ್ನು ಪ್ರಾರಂಭಿಸಿದರು. ಕನ್ನಡ ಚಿತ್ರರಂಗದ ಪ್ರಮುಖ ನಟರೊಂದಿಗೆ 20ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಯಮುನಾ, 10 ಕ್ಕೂ ಹೆಚ್ಚು ಧಾರಾವಾಹಿಗಳಲ್ಲಿ ಬಣ್ಣ ಹಚ್ಚಿದ್ದಾರೆ.