Weight Loss Tips: ಪ್ರತಿದಿನ ಮುಂಜಾನೆ ಖಾಲಿ ಹೊಟ್ಟೆಯಲ್ಲಿ ಸೇವಿಸುವ ಆಹಾರ ನಮ್ಮ ಆರೋಗ್ಯದ ಮೇಲೆ ಮಹತ್ವದ ಪರಿಣಾಮವನ್ನು ಬೀರುತ್ತದೆ. ಇದು ತೂಕ ಇಳಿಕೆಯ ಮೇಲೂ ಗಮನಾರ್ಹ ಪರಿಣಾಮವನ್ನುಂಟು ಮಾಡುತ್ತದೆ.
Belly Fat Reduce Tips: ತೂಕ ಇಳಿಸಿದರೂ ಹೊಟ್ಟೆಯ ಸುತ್ತಲಿನ ಬೊಜ್ಜು ಕರಗಿಸುವುದು ಕಷ್ಟ ಅನಿಸ್ತಾ ಇದೀಯಾ? ಚಿಂತೆ ಬಿಟ್ಟು ನಿತ್ಯ ಖಾಲಿ ಹೊಟ್ಟೆಯಲ್ಲಿ ಈ ಪಾನೀಯಗಳನ್ನು ಸೇವಿಸಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Facebook Link - https://bit.ly/3Hhqmcj
Youtube Link - https://www.youtube.com/watch?v=kr-YIH866cM
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm
Twitter Link - https://bit.ly/3n6d2R8 ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಪ್ರಸ್ತುತ ಕಾಲಮಾನದಲ್ಲಿ ತೂಕ ಇಳಿಕೆ ಯಾವುದೇ ದೊಡ್ಡ ಸವಾಲಿಗಿಂತಲೂ ಕಡಿಮೆಯಿಲ್ಲ.
ಒಂದೊಮ್ಮೆ ದೇಹದ ತೂಕ ಇಳಿಕೆಯಾದರೂ ಹೊಟ್ಟೆಯ ಸುತ್ತಲಿನ ಬೊಜ್ಜು ಕರಗಿಸುವುದು ಕಬ್ಬಿಣದ ಕಡಲೆಯಂತೆ.
ಆದರೆ, ಈ ಬಗ್ಗೆ ಚಿಂತಿಸುವ ಅಗತ್ಯವಿಲ್ಲ. ಪ್ರತಿದಿನ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈ ಐದು ಬಗೆಯ ಪಾನೀಯಗಳನ್ನು ರೂಢಿಸಿಕೊಳ್ಳುವುದರಿಂದ ಹೊಟ್ಟೆಯ ಫ್ಯಾಟ್ ಸಲೀಸಾಗಿ ಕರಗುತ್ತೆ.
ವಿಟಮಿನ್ಗಳು, ಉತ್ಕರ್ಷಣ ನಿರೋಧಕಗಳಿದ್ನ ಸಮೃದ್ಧವಾಗಿರುವ ನಿಂಬೆ ನೀರನ್ನು ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ಇದು ಹೊಟ್ಟೆಯಲ್ಲಿ ಶೇಖರಣೆಯಾಗಿರುವ ಬೊಜ್ಜನ್ನು ಕರಗಿಸಲು ದಿವ್ಯೌಷಧವಾಗಿ ಕಾರ್ಯ ನಿರ್ವಹಿಸುತ್ತದೆ.
ಖಾಲಿ ಹೊಟ್ಟೆಯಲ್ಲಿ ಗ್ರೀನ್ ಟೀ ಕುಡಿಯುವುದರಿಂದ ಚಯಾಪಚಯ ಹೆಚ್ಚಾಗಿ, ಹೆಚ್ಚಿನ ಕ್ಯಾಲೋರಿಗಳನ್ನು ಸುಡಲು ಸಹಕಾರಿ ಆಗಲಿದೆ.
ಬೆಳಿಗ್ಗೆ ನಾರ್ಮಲ್ ಟೀ ಕುಡಿಯುವುದಕ್ಕಿಂತ ಶುಂಠಿ ಟೀ ಕುಡಿಯುವುದರಿಂದ ಉದರದ ಆರೋಗ್ಯ ಸುಧಾರಿಸುವುದರ ಜೊತೆಗೆ ಇದು ತೂಕವನ್ನು ಕಳೆದುಕೊಳ್ಳಲು ಮುಖ್ಯವಾಗಿ ಬೆಲ್ಲಿ ಫ್ಯಾಟ್ ಕರಗಿಸಲು ಪ್ರಯೋಜನಕಾರಿ ಆಗಿದೆ.
ಒಂದು ಲೋಟ ಬಿಸಿ ನೀರಿಗೆ ಒಂದು ಸ್ಪೂನ್ ಆಪಲ್ ಸೈಡರ್ ವಿನೆಗರ್ ಹಾಕಿ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಕುಡಿಯುವುದರಿಂದ ದೇಹದಲ್ಲಿ ಅಧಿಕವಾಗಿರುವ ಕೊಬ್ಬನ್ನು ಕರಗಿಸಲು ತುಂಬಾ ಸಹಕಾರಿ ಆಗಿದೆ.
ಎರಡು ಲೋಟ ನೀರಿಗೆ ಎರಡು ಸ್ಪೂನ್ ಮೆಂತ್ಯ ಹಾಕಿ ಅದು ಅರ್ಧ ಆಗುವವರೆಗೂ ಕುದಿಸಿ ಶೋಧಿಸಿ ಕುಡಿಯುತ್ತಾ ಬಂದರೆ ಕೆಲವೇ ದಿನಗಳಲ್ಲಿ ಹೊಟ್ಟೆಯ ಫ್ಯಾಟ್ ಕರಗಿ ಸ್ಲಿಮ್ ಆದ ಬಳುಕುವ ಸೊಂಟ ನಿಮ್ಮದಾಗುತ್ತದೆ.
ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.