ಈ 5 ಕಾರಣಗಳಿಂದ ದೇಹದಲ್ಲಿ ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚುತ್ತದೆ ..!

ಹೆಚ್ಚಿದ ಕೆಟ್ಟ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು, ಸರಿಯಾದ ಆಹಾರವನ್ನು ಹೊಂದಿರುವುದು ಸಹ ಮುಖ್ಯವಾಗಿದೆ. ಆದರೆ ಸರಿಯಾದ ಆಹಾರ ಸೇವನೆ ಮಾಡಿದರೂ ಕೊಲೆಸ್ಟ್ರಾಲ್ ಮಟ್ಟ ಕಡಿಮೆಯಾಗದಿದ್ದರೆ ಅದಕ್ಕೆ ಇವು ಮುಖ್ಯ ಕಾರಣವಾಗಿರಬಹುದು. 


ಬೆಂಗಳೂರು :  ಕೊಲೆಸ್ಟ್ರಾಲ್ ಸಮಸ್ಯೆಯು ಜನರಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ರಕ್ತದಲ್ಲಿ ಕಂಡುಬರುವ ಈ ಮೇಣದಂಥ, ಜಿಗುಟಾದ ವಸ್ತುವು ದೇಹದಲ್ಲಿ ಕೊಲೆಸ್ಟ್ರಾಲ್ ಮತ್ತು ಪಾರ್ಶ್ವವಾಯು, ಹೃದಯಾಘಾತ ಸೇರಿದಂತೆ ಅನೇಕ ಪ್ರಮುಖ ಕಾಯಿಲೆಗಳಿಗೆ ಕಾರಣವಾಗುತ್ತದೆ. ಇದು ಜೀವನಶೈಲಿ ಮತ್ತು ಆಹಾರ ಸಂಬಂಧಿ ಕಾಯಿಲೆಯಾಗಿದೆ. ನಿಯಮಿತ ವ್ಯಾಯಾಮ ಮತ್ತು ಸರಿಯಾದ ಆಹಾರದ ಸಹಾಯದಿಂದ, ಹೆಚ್ಚಿದ ಕೊಲೆಸ್ಟ್ರಾಲ್ ಮಟ್ಟವನ್ನು 30 ರಿಂದ 40 ಪ್ರತಿಶತದಷ್ಟು ಕಡಿಮೆ ಮಾಡಬಹುದು ಎಂದು ತಜ್ಞರು ಹೇಳುತ್ತಾರೆ. ಉತ್ತಮ ಜೀವನಶೈಲಿ ಮತ್ತು ಸರಿಯಾದ ಆಹಾರದ ನಂತರವೂ ಕೆಲವು ಜನರಲ್ಲಿ ಕೊಲೆಸ್ಟ್ರಾಲ್ ಮಟ್ಟವನ್ನು ಕಡಿಮೆ ಮಾಡಲು ಸಾಧ್ಯವಾಗುತ್ತಿಲ್ಲ ಎನ್ನುವ ಅಂಶ ಕೂಡಾ ಬೆಳಕಿಗೆ ಬಂದಿದೆ.  ಅದರ ಬಗ್ಗೆ ಚಿಂತಿಸುವ ಅಗತ್ಯವಿಲ್ಲ, ಬದಲಿಗೆ, ಅದರ ಹಿಂದಿನ ಕಾರಣವನ್ನು ತಿಳಿದುಕೊಳ್ಳಬೇಕು.

 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಆನುವಂಶಿಕ  ಕೊಲೆಸ್ಟ್ರಾಲ್ ಹೊಂದಲು ದೊಡ್ಡ ಕಾರಣಗಳಲ್ಲಿ ಒಂದಾಗಿದೆ. ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು ನಿಯಮಿತವಾಗಿ ವ್ಯಾಯಾಮ ಮಾಡುತ್ತಿದ್ದ ನಂತರವೂ ಕೊಲೆಸ್ಟ್ರಾಲ್ ಕಡಿಮೆಯಾಗಿಲ್ಲ ಎಂದಾದರೆ ಅದು ಆನುವಂಶಿಕ  ಕಾರಣದಿಂದ ಆಗಿರುವ ಸಾಧತೆಗಳು ಹೆಚ್ಚು. 

2 /5

ಆಲ್ಕೊಹಾಲ್ ಸೇವನೆಯು ಕೊಲೆಸ್ಟ್ರಾಲ್ ಅನ್ನು ಹೆಚ್ಚಿಸುತ್ತದೆ. ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುವಲ್ಲಿ ಆಲ್ಕೋಹಾಲ್ ಪ್ರಮುಖ ಪಾತ್ರ ವಹಿಸುತ್ತದೆ. ಸರಿಯಾದ ಆಹಾರ ಕ್ರಮವನ್ನು ಅನುಸರಿಸಿ, ನಿಯಮಿತವಾಗಿ ವ್ಯಾಯಾಮ ಮಾಡುತ್ತಿದ್ದರೂ ಕೂಡಾ  ಹೆಚ್ಚು ಮದ್ಯಪಾನ ಮಾಡುತ್ತಿದ್ದರೆ, ಕೆಟ್ಟ ಕೊಲೆಸ್ಟ್ರಾಲ್ ಹೆಚ್ಚುತ್ತದೆ.   

3 /5

 ಕೆಲವು  ಔಷಧಿಗಳು ಕೊಲೆಸ್ಟ್ರಾಲ್ ಮಟ್ಟವನ್ನು ಹೆಚ್ಚಿಸುತ್ತಿರಬಹುದು.  ಸ್ಟೀರಾಯ್ಡ್   ಮತ್ತು ರೆಟಿನಾಯ್ಡ್ ಅಥವಾ ಪ್ರೊಜೆಸ್ಟಿನ್ ಔಷಧಿಗಳನ್ನು ತೆಗೆದುಕೊಳ್ಳುತ್ತಿದ್ದರೆ, ಕೊಲೆಸ್ಟ್ರಾಲ್ ಮಟ್ಟಗಳು ಹೆಚ್ಚಾಗಬಹುದು.   

4 /5

 ಸರಿಯಾಗಿ ವ್ಯಾಯಾಮ ಮಾಡದೇ ಹೋದರೆ ದೇಹದಲ್ಲಿ ಕೊಲೆಸ್ಟ್ರಾಲ್  ಮಟ್ಟ ಹೆಚ್ಚುತ್ತದೆ. ಕೆಟ್ಟ ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು, ಸರಿಯಾದ ಮತ್ತು ಸಾಕಷ್ಟು ವ್ಯಾಯಾಮ ಮಾಡುವುದು  ಆಹಾರದಷ್ಟೇ ಮುಖ್ಯವಾಗಿದೆ.

5 /5

ಹೊರಗಿನ ಆಹಾರವನ್ನು ತೆಗೆದುಕೊಳ್ಳುವುದರಿಂದ ಕೆಟ್ಟ ಕೊಲೆಸ್ಟ್ರಾಲ್ ಮಟ್ಟ ಹೆಚ್ಚಾಗಬಹುದು. ಕೊಲೆಸ್ಟ್ರಾಲ್ ಅನ್ನು ಕಡಿಮೆ ಮಾಡಲು, ಹೆಚ್ಚಾಗಿ ಮನೆಯಲ್ಲಿ ತಯಾರಿಸಿದ ಆಹಾರವನ್ನು  ಸೇವಿಸಬೇಕು. ಹೊರಗಿನ ಆಹಾರ ಪದಾರ್ಥಗಳನ್ನು ಕಡಿಮೆ ಮಾಡುವುದು ಅವಶ್ಯಕ