ಹುಬ್ಬಳ್ಳಿಯಿಂದ ಬಾಲಿವುಡ್ ವರೆಗೆ..ಬೆಳ್ಳಿ ಪರದೆಯ ಮೇಲೆ ಮಿಂಚಿ ಮರೆಯಾದ ಈ ಶ್ರೇಷ್ಠ ನಟಿ..!

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ಈಗಿನ ದಿನಗಳಲ್ಲಿ ಹಿಂದಿ ಸಿನಿಮಾದಲ್ಲಿ ನಟಿಸುವುದು ದೊಡ್ಡ ಮಾತಲ್ಲ, ಆದರೆ 1930 ಅವಧಿಯಲ್ಲಿ ಹುಬ್ಬಳ್ಳಿ ಹತ್ತಿರದ ಹಳ್ಳಿಯಿಂದ ದೂರದ ಬಾಂಬೆಯಲ್ಲಿರುವ ಸಿನಿ ಜಗತ್ತಿನಲ್ಲಿ ಮೆರೆಯುವುದು ಸಾಮಾನ್ಯ ಸಂಗತಿಯಲ್ಲ, ಅದು ನಿಜಕ್ಕೂ ಸಾಹಸಗಾಥೆಯೇ ಸರಿ. ಅಂತಹ ಸಾಧನೆಯನ್ನು ಮಾಡಿದವರಲ್ಲಿ ನಟಿ ಶಾಂತಾ ಹುಬ್ಬಳ್ಳಿಕರ್ ಒಬ್ಬರು.ಇಂದಿನ ಹುಬ್ಬಳ್ಳಿ ಹತ್ತಿರದಲ್ಲಿರುವ ಅದರಗುಂಚಿ ಗ್ರಾಮದಲ್ಲಿ ಜನಿಸಿ ಮುಂದೆ ಸುಮಾರು ಎರಡು, ಮೂರು ದಶಕಗಳ ಕಾಲ ಹಿಂದಿ ಮತ್ತು ಮರಾಠಿ ಸಿನಿಮಾ ಜಗತ್ತಿನಲ್ಲಿ ತಮ್ಮದೇ ಛಾಪು ಮೂಡಿಸಿದ ಹೆಗ್ಗಳಿಕೆ ನಮ್ಮ ಹೆಮ್ಮೆಯ ಕನ್ನಡತಿ ಶಾಂತಾ ಹುಬ್ಬಳೀಕರ್ ಅವರದು. ಶಾಂತಾ ಹುಟ್ಟಿದ್ದು ಹುಬ್ಬಳ್ಳಿ ಬಳಿಯ ಅದರಗುಂಚಿ ಎಂಬ ಊರಿನಲ್ಲಿ 1914ರ ಏಪ್ರಿಲ್ 14ರಂದು. ಅವರ ಹುಟ್ಟುಹೆಸರು ರಾಜಮ್ಮ.ಶಾಂತಾ ಮೂರನೇ ವಯಸ್ಸಿನಲ್ಲಿದ್ದಾಗ ಅವರ ತಂದೆ ತಾಯಿ ನಿಧನರಾಗಿ, ಅಜ್ಜಿಯ ಆಶ್ರಯದಲ್ಲಿ ಬೆಳೆದರು. ಮೂವರು ಅಕ್ಕತಂಗಿಯರಲ್ಲಿ ಮಧ್ಯದವರಾದ ಶಾಂತಾ ಮತ್ತು ಅವರ ತಂಗಿಯನ್ನು ಹುಬ್ಬಳ್ಳಿಯ ಹತ್ತಿರದ, ಮಕ್ಕಳಿಲ್ಲದ ಸಂಬಂಧಿಕರೊಬ್ಬರಿಗೆ ದತ್ತು ಕೊಟ್ಟು ಸಾಕುವ ವ್ಯವಸ್ಥೆಯಾಗಿ, ದತ್ತುತಾಯಿಯ ಕಟ್ಟುನಿಟ್ಟಿನ ಪರಿಸರದ ಮಧ್ಯೆಯೇ ಪ್ರೌಢಶಾಲೆಯ ತನಕ ಶಾಂತಾ ಓದಿದರು.

2 /5

ಬಾಲ್ಯದಿಂದಲೇ ಹಾಡುವ ಆಸಕ್ತಿ ಹೊಂದಿದ್ದ ಶಾಂತಾ, ಪ್ರಸಿದ್ಧ ಹಿಂದೂಸ್ತಾನಿ ಶಾಸ್ತ್ರೀಯ ಸಂಗೀತಗಾರರಾದ ಅಬ್ದುಲ್ ಕರೀಂ ಖಾನ್ ಸಾಹೇಬರ ಬಳಿ ನಾಲ್ಕು ವರ್ಷ ಹಿಂದೂಸ್ತಾನಿ ಸಂಗೀತಾಭ್ಯಾಸ ಮಾಡಿದರು. ಅಜ್ಜಿಯಿಂದ ಜನಪದ ಗೀತೆ ಮತ್ತು ವಚನಗಳನ್ನು ಕಲಿತಿದ್ದ ಅವರಿಗೆ ಮುಂದೆ ಗಾಯಕಿಯಾಗುವ ಅವಕಾಶಗಳಲ್ಲಿ ಈ ಸಂಗೀತಾಭ್ಯಾಸ ನೆರವಾಯಿತು.

3 /5

ಶಾಂತಾ ಮೊದಲು ರಂಗನಟಿಯಾಗಿ ಹುಬ್ಬಳ್ಳಿ-ಧಾರವಾಡದಾದ್ಯಂತ ಹೆಸರು ಮಾಡಿದರು. ಗುಬ್ಬಿ ಕಂಪನಿ ಸೇರಿದ ಶಾಂತ, ರಂಗಲೋಕದಲ್ಲಿ ಚಿಕ್ಕ ಚಿಕ್ಕ ಪಾತ್ರಗಳನ್ನು ಮಾಡುತ್ತಾ ಮುಂದೆ ಪ್ರಮುಖ ಪಾತ್ರಗಳನ್ನು ಪಡೆದರು ಮಾತ್ರವಲ್ಲ, ಒಳ್ಳೆಯ ಗಾಯಕಿ ಎಂದೂ ಹೆಸರಾದರು.ಶಾಂತಾ ಅವರ ಹೆಸರು ಉತ್ತರ ಕರ್ನಾಟಕ ಭಾಗದಲ್ಲಿ ಪ್ರಸಿದ್ಧಿಗೆ ಬರುತ್ತಲೇ ಚಿತ್ರನಿರ್ಮಾಪಕರಿಂದ ಶಾಂತಾ ಅವರಿಗೆ ಅವಕಾಶಗಳು ಬಂದವು. ತಮ್ಮ 18ನೇ ವಯಸ್ಸಿನಲ್ಲಿ ಕರ್ನಾಟಕ ಬಿಟ್ಟು, ಸಿನಿಮಾ ಅವಕಾಶಗಳಿಗೆ ಪುಣೆಗೆ ಶಾಂತಾ ಬಂದರು.

4 /5

ಪ್ರಭಾತ್ ಫಿಲ್ಮ್ ಕಂಪನಿಯ, ಖ್ಯಾತ ಮರಾಠಿ ಚಿತ್ರ ನಿರ್ದೇಶಕ ವಿ.ಶಾಂತಾರಾಮ್ ಅವರು ತಮ್ಮ ಮಝ ಮುಳ್ಗ/ಮೇರಾ ಲಡ್ಕ (1938) ಚಿತ್ರದ ನಾಯಕಿಯಾಗಿ ಶಾಂತಾರನ್ನು ಆಯ್ಕೆ ಮಾಡಿದರು. ಕಂಪನಿಯ ಒಳಗೆ ಮತ್ತು ಹೊರಗೆ ಶಾಂತಾರಾಂ ಅವರ ಈ ನಿರ್ಧಾರ ಅಚ್ಚರಿಗೆ, ಚರ್ಚೆಗೆ ಕಾರಣವಾಗಿತ್ತು. ಅದಾಗಲೇ ಕಂಪನಿಯ ಬಹುಪಾಲು ಎಲ್ಲಾ ಚಿತ್ರಗಳ ಯಶಸ್ವೀ ನಾಯಕಿಯಾಗಿ ಹೆಸರು ಮಾಡಿದ್ದ ಖ್ಯಾತ ಮರಾಠಿ ನಟಿ ಶಾಂತಾ ಆಪ್ಟೆ ಇದ್ದರು. ಅವರನ್ನು ಬಿಟ್ಟು ಹೊಸ ಮತ್ತು ಮರಾಠಿ ಬಾರದ ಕನ್ನಡದ ಹುಡುಗಿಯನ್ನು ಆರಿಸಿಕೊಂಡಿದ್ದು ಚಿತ್ರದ ಮೇಲೆ ಹೆಚ್ಚಿನ ನಿರೀಕ್ಷೆ , ಗಮನ ಬರುವಂತಾಯಿತು. ಶಾಂತಾರಾಂ ನೀಡಿದ ಈ ಅವಕಾಶವನ್ನು ಚೆನ್ನಾಗಿ ಬಳಸಿಕೊಂಡ ಶಾಂತಾ ಒಳ್ಳೆಯ ಅಭಿನಯ ಮತ್ತು ಹಾಡುಗಳನ್ನು ಹಾಡಿ ಶಾಂತಾರಾಂ ಅವರನ್ನೂ ಸೇರಿದಂತೆ ಎಲ್ಲಾ ಮರಾಠಿ ಮತ್ತು ಹಿಂದಿ ಪ್ರೇಕ್ಷಕರ ಅಪಾರ ಮೆಚ್ಚುಗೆ ಗಳಿಸಿದರು.

5 /5

ಶಾಂತಾ ಹುಬ್ಬಳೀಕರ್ ಅವರು ತಮ್ಮ ಕೊನೆಯ ದಿನಗಳನ್ನು ಪುಣೆಯ ವೃದ್ಧಾಶ್ರಮದಲ್ಲಿ ಕಳೆದರು.ಅಂತಿಮವಾಗಿ ಅವರು  ಜುಲೈ 19, 1992ರಂದು ನಿಧನವಾದರು.ಶಾಂತಾ ತಮ್ಮ ಆತ್ಮಕಥೆ ‛ಕಶಲ ಉದ್ಯಾಚಿ ಬಾತ್’ ಮರಾಠಿಯಲ್ಲಿ ಬರೆದಿದ್ದಾರೆ.ಇದರ ಕನ್ನಡಾನುವಾದ ‛ನಾಳೀನ ಚಿಂತ್ಯಾಕ ’ ಪುಸ್ತಕ ಅಹರ್ನಿಶಿ ಪ್ರಕಾಶನದಿಂದ ಪ್ರಕಟವಾಗಿದೆ.