Garlic Benefits: ಬಿಪಿ, ತೂಕ ನಷ್ಟ ಸೇರಿದಂತೆ ಈ ಸಮಸ್ಯೆಗಳಿಗೆ ಬೆಳ್ಳುಳ್ಳಿ ರಾಮಬಾಣವಿದ್ದಂತೆ

                               

ಬೆಳ್ಳುಳ್ಳಿ ಪ್ರಯೋಜನಗಳು: ಅಡುಗೆಯ ಸ್ವಾದ ಹೆಚ್ಚಿಸಲು ಹಲವು ಖಾದ್ಯಗಳಲ್ಲಿ ಸಾಮಾನ್ಯವಾಗಿ ಬೆಳ್ಳುಳ್ಳಿಯನ್ನು ಬಳಸುತ್ತೇವೆ. ಆದರೆ, ಬೆಳ್ಳುಳ್ಳಿ ಸೇವನೆಯಿಂದ ಹಲವು ಆರೋಗ್ಯ ಸಮಸ್ಯೆಗಳಿಂದ ದೂರ ಉಳಿಯಬಹುದು ಎಂದು ನಿಮಗೆ ತಿಳಿದಿದೆಯೇ? ಹೌದು, ಸಾಮಾನ್ಯವಾಗಿ ಬೆಳ್ಳುಳ್ಳಿ ಬಹುತೇಕ ಮಂದಿಗೆ ಇಷ್ಟವಾಗದ ತರಕಾರಿ. ಆದರೆ, ಇದರ ಅದ್ಭುತ ಪ್ರಯೋಜನಗಳ ಬಗ್ಗೆ ತಿಳಿದರೆ ಖಂಡಿತವಾಗಿಯೂ ನೀವು ಅದನ್ನು ತಪ್ಪದೇ ಸೇವಿಸುತ್ತೀರಿ. 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /5

ಅಪಧಮನಿಗಳಲ್ಲಿ ಅಧಿಕ ಕೊಲೆಸ್ಟ್ರಾಲ್ ಸಂಗ್ರಹಗೊಳ್ಳುತ್ತದೆ ಮತ್ತು ಇದರಿಂದಾಗಿ ಅಪಧಮನಿಗಳು ನಿರ್ಬಂಧಿಸಲ್ಪಡುತ್ತವೆ. ಇದರಿಂದಾಗಿ ಸಾಕಷ್ಟು ರಕ್ತವು ಹೃದಯ ಮತ್ತು ಮೆದುಳಿಗೆ ತಲುಪುವುದಿಲ್ಲ. ಈ ಕಾರಣಕ್ಕಾಗಿಯೇ ಅಧಿಕ ಕೊಲೆಸ್ಟ್ರಾಲ್ ಹೃದಯಾಘಾತ ಮತ್ತು ಪಾರ್ಶ್ವವಾಯು ಮುಂತಾದ ಹೃದಯ ಕಾಯಿಲೆಗಳ ಅಪಾಯವನ್ನು ಹೆಚ್ಚಿಸಬಹುದು. ಆದರೆ ನಿಮ್ಮ ಆಹಾರದಲ್ಲಿ ಬೆಳ್ಳುಳ್ಳಿ ಸೇರಿಸುವುದರಿಂದ ನೀವು ಈ ಸಮಸ್ಯೆಯಿಂದ ಪರಿಹಾರ ಪಡೆಯಬಹುದು.

2 /5

ಬೆಳ್ಳುಳ್ಳಿಯಲ್ಲಿ ಸಲ್ಫರ್ ಉತ್ತಮ ಪ್ರಮಾಣದಲ್ಲಿ ಕಂಡುಬರುತ್ತದೆ. ಸಲ್ಫರ್ ಅಂತಹ ಸಂಯುಕ್ತವಾಗಿದ್ದು ಇದು ಲೋಹಗಳ ವಿಷತ್ವದಿಂದ ನಿಮ್ಮ ಅಂಗಗಳನ್ನು ರಕ್ಷಿಸುತ್ತದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಬೆಳ್ಳುಳ್ಳಿಯನ್ನು ಸೇವಿಸುವ ಮೂಲಕ ದೇಹವನ್ನು ನಿರ್ವಿಷಗೊಳಿಸಬಹುದು.

3 /5

ಬೆಳ್ಳುಳ್ಳಿಯನ್ನು ತಿನ್ನುವುದರಿಂದ ದೇಹದಲ್ಲಿರುವ ಅನೇಕ ವಿಷಕಾರಿ ವಸ್ತುಗಳು ಹೊರಬರುತ್ತವೆ. ಇದರಿಂದಾಗಿ ದೇಹದಲ್ಲಿ ಸಂಗ್ರಹವಾಗಿರುವ ಹೆಚ್ಚುವರಿ ಕೊಬ್ಬು ಕರಗುತ್ತದೆ. ಇದು  ತೂಕವನ್ನು ಕಡಿಮೆ ಮಾಡಲು ಸಹಕಾರಿ ಆಗಿದೆ.

4 /5

ಇತ್ತೀಚಿನ ಜೀವನಶೈಲಿ ಒತ್ತಡ ಭರಿತವಾಗಿತ್ತು ಅತಿ ಚಿಕ್ಕ ವಯಸ್ಸಿನಲ್ಲಿಯೇ ರಕ್ತದೊತ್ತಡ ಸಮಸ್ಯೆ ಜನರನ್ನು ಬಾದಿಸುತ್ತದೆ. ಅಧಿಕ ರಕ್ತದೊತ್ತಡವು ಒಂದು ದೊಡ್ಡ ಸಮಸ್ಯೆಯಾಗಿ ಹೊರಹೊಮ್ಮಿದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಬೆಳ್ಳುಳ್ಳಿಯನ್ನು ಸೇವಿಸಿದರೆ, ಅದು ರಕ್ತದೊತ್ತಡವನ್ನು ನಿಯಂತ್ರಿಸಲು ನಿಮಗೆ ಸಹಾಯ ಮಾಡಬಹುದು.  

5 /5

ನಿಮ್ಮ ದೈನಂದಿನ ಆಹಾರದಲ್ಲಿ ಬೆಳ್ಳುಳ್ಳಿ ಸೇವನೆ ನಿಮ್ಮನ್ನು ಹಲವು ರೋಗಗಳಿಂದ ದೂರ ಇರಿಸುತ್ತಾದ್.ಎ ಬೆಳ್ಳುಳ್ಳಿ ಶಕ್ತಿಯುತವಾದ ಉತ್ಕರ್ಷಣ ನಿರೋಧಕ ಗುಣಗಳನ್ನು ಹೊಂದಿದೆ. ಇದು ಹೃದಯ ಸಂಬಂಧಿ ಸಮಸ್ಯೆಗಳನ್ನು ನಿವಾರಿಸುವುದರ ಜೊತೆಗೆ ಹೃದಯಾಘಾತದ ಅಪಾಯವನ್ನು ಕಡಿಮೆ ಮಾಡುತ್ತದೆ. ಬೆಳ್ಳುಳ್ಳಿ ಸೇವನೆಯಿಂದ ರಕ್ತ ಪರಿಚಲನೆಯನ್ನು ನಿಯಂತ್ರಿಸಲು ತುಂಬಾ ಸಹಾಯಕ. ಇದಲ್ಲದೆ ಉದರ ಸಂಬಂಧಿತ ಕಾಯಿಲೆಗಳಾದ ಅತಿಸಾರ ಮತ್ತು ಮಲಬದ್ಧತೆಯನ್ನು ನಿವಾರಿಸಲು ಬೆಳ್ಳುಳ್ಳಿ ತುಂಬಾ ಉಪಯುಕ್ತವಾಗಿದೆ.  ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.