ದಿವ್ಯಾಂಗರಿಗೆ ಭಾರಿ ನೆಮ್ಮದಿಯ ಸುದ್ದಿ ನೀಡಿದ Modi ಸರ್ಕಾರ, ರಾಜ್ಯಗಳಿಗೆ ನೀಡಿದ ನಿರ್ದೇಶನ ಇದು

  • Aug 25, 2020, 18:38 PM IST

ಕೊರೊನಾ ಮಹಾಮಾರಿಯ ಈ ಸಂಕಷ್ಟದ ಸಮಯದಲ್ಲಿ ಕೇಂದ್ರ ಸರ್ಕಾರ ದಿವ್ಯಾಂಗರಿಗಾಗಿ ಭಾರಿ ನೆಮ್ಮದಿಯ ಸುದ್ದಿಯೊಂದನ್ನು ಪ್ರಕಟಿಸಿದೆ.  ಕೇಂದ್ರ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಕಾರ್ಯದರ್ಶಿ ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 ರ ಅಡಿಯಲ್ಲಿ ಎಲ್ಲಾ ಅರ್ಹ ಅಂಗವಿಕಲರನ್ನು ಸೇರಿಸಿಕೊಳ್ಳುವಂತೆ ಪತ್ರ ಬರೆದಿದ್ದಾರೆ.

1 /5

ಗ್ರಾಹಕ ವ್ಯವಹಾರ, ಆಹಾರ ಮತ್ತು ಸಾರ್ವಜನಿಕ ವಿತರಣಾ ಸಚಿವಾಲಯದ ಅಡಿಯಲ್ಲಿ ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆಯ ಕಾರ್ಯದರ್ಶಿ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಮುಖ್ಯ ಕಾರ್ಯದರ್ಶಿಗಳಿಗೆ ಕಳುಹಿಸಿದ ಪತ್ರದಲ್ಲಿ ಈ ವಿಷಯವನ್ನು ವೈಯಕ್ತಿಕವಾಗಿ ಗಮನಿಸಬೇಕು ಮತ್ತು ಸಂಬಂಧಪಟ್ಟ ಇಲಾಖೆಗಳು, ಅಧಿಕಾರಿಗಳು ಮತ್ತು ವಿಶೇಷವಾಗಿ ಎಲ್ಲಾ ಅರ್ಹ ದಿವ್ಯಾಂಗ್ ಜನರು ಸರ್ಕಾರದ ಯೋಜನೆಗಳ ಲಾಭವನ್ನು ಪಡೆದುಕೊಳ್ಳುವಂತೆ ಜಿಲ್ಲಾಡಳಿತಕ್ಕೆ ಸೂಚಿಸಬೇಕು ಎಂದು ಹೇಳಿದ್ದಾರೆ.

2 /5

ಇದಕ್ಕೂ ಮೊದಲು ಆಗಸ್ಟ್ 22, 2020ರಂದು ರಾಜ್ಯಗಳು ಹಾಗೂ ಕೇಂದ್ರಾಡಳಿತ ಪ್ರದೇಶಗಳಿಗೆ ಪತ್ರವೊಂದನ್ನು ಬರೆದು ಮಾರ್ಗ ಸೂಚಿಗಳನ್ನು ಜಾರಿಗೊಳಿಸಲು ಸೂಚಿಸಲಾಗಿದೆ. ಮಾರ್ಗ ಸೂಚಿಗಳ ಪ್ರಕಾರ , ಎನ್‌ಎಫ್‌ಎಸ್‌ಎ ಅಡಿಯಲ್ಲಿ ಅರ್ಹತೆ ಹೊಂದಿರುವ ಎಲ್ಲ ವಿಕಲಾಂಗ ವ್ಯಕ್ತಿಗಳನ್ನು ಗುರುತಿಸಿ ಅವರನ್ನು ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 ರ ಅಡಿಯಲ್ಲಿ ಸೇರಿಸಿಕೊಳ್ಳಬೇಕೆಂದು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ, ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳನ್ನು ಕೇಳಿಕೊಂಡಿದೆ.

3 /5

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆ 2013 ರ ನಿಬಂಧನೆಗಳ ಪ್ರಕಾರ, ಅರ್ಹ ಅಂಗವಿಕಲರಿಗೆ ಎನ್‌ಎಫ್‌ಎಸ್‌ಎ ಮತ್ತು ಪಿಎಂಜಿಕೆಎ ಅಡಿಯಲ್ಲಿ ಲಭ್ಯವಿರುವ ಆಹಾರ ಧಾನ್ಯಗಳ ಕೋಟಾ ನೀಡಲಾಗುವುದು.

4 /5

ಈ ಯೋಜನೆಯಲ್ಲಿ ಈಗಾಗಲೇ ಸೇರ್ಪಡೆಗೊಳ್ಳದವರನ್ನು ಹೊಸ ಪಡಿತರ ಚೀಟಿ ಅರ್ಹತಾ ಮಾನದಂಡಗಳನ್ನು ಗಮನದಲ್ಲಿಟ್ಟುಕೊಂಡು ಈ ಯೋಜನೆಯಲ್ಲಿ ಸೇರಿಸಿಕೊಳ್ಳಬೇಕು ಎಂದು ಆಹಾರ ಮತ್ತು ಸಾರ್ವಜನಿಕ ವಿತರಣಾ ಇಲಾಖೆ ಸೂಚಿಸಿದೆ.

5 /5

ರಾಷ್ಟ್ರೀಯ ಆಹಾರ ಭದ್ರತಾ ಕಾಯ್ದೆಯ ಸೆಕ್ಷನ್ 38 ಪ್ರಕಾರ,  ಕೇಂದ್ರ ಸರ್ಕಾರವು ಕಾಲಕಾಲಕ್ಕೆ ಕಾಯಿದೆಯ ನಿಬಂಧನೆಗಳನ್ನು ಪರಿಣಾಮಕಾರಿಯಾಗಿ ಜಾರಿಗೆ ತರಲು ರಾಜ್ಯ ಸರ್ಕಾರಗಳಿಗೆ ನಿರ್ದೇಶನ ನೀಡಬಹುದು. ಇದರ ಅಡಿಯಲ್ಲಿ ಅಂಗವಿಕಲರನ್ನು ಸಮಾಜದ ದುರ್ಬಲ ವರ್ಗವೆಂದು ಪರಿಗಣಿಸಲು ಸೂಚನೆಗಳನ್ನು ನೀಡಲಾಗಿದೆ.