Health benefits of jaggery: ಬೆಲ್ಲದಲ್ಲಿ ಕಬ್ಬಿಣ, ಪೊಟ್ಯಾಸಿಯಮ್, ಕ್ಯಾಲ್ಸಿಯಂ, ಸತು, ರಂಜಕ, ತಾಮ್ರ ಮತ್ತು ಮೆಗ್ನೀಸಿಯಮ್ ಸಮೃದ್ಧವಾಗಿದೆ. ಬೆಲ್ಲ ತಿನ್ನುವುದು ದೇಹದ ಉಷ್ಣತೆಯನ್ನು ನಿಯಂತ್ರಿಸಲು ಮತ್ತು ಬಿಸಿ ವಾತಾವರಣದಲ್ಲಿ ದೇಹವನ್ನು ತಂಪಾಗಿರಿಸಲು ಒಳ್ಳೆಯದು.
Health benefits of consuming jaggery: ನಿಯಮಿತವಾಗಿ ಬೆಲ್ಲವನ್ನು ಸೇವಿಸುವುದರಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನ ಪಡೆಯಬಹುದು. ಬೆಲ್ಲದಲ್ಲಿ ಕಬ್ಬಿಣ, ಪೊಟ್ಯಾಸಿಯಮ್, ಕ್ಯಾಲ್ಸಿಯಂ, ಸತು, ರಂಜಕ, ತಾಮ್ರ ಮತ್ತು ಮೆಗ್ನೀಸಿಯಮ್ ಸಮೃದ್ಧವಾಗಿದೆ. ಬೆಲ್ಲ ತಿನ್ನುವುದು ದೇಹದ ಉಷ್ಣತೆಯನ್ನು ನಿಯಂತ್ರಿಸಲು ಮತ್ತು ಬಿಸಿ ವಾತಾವರಣದಲ್ಲಿ ದೇಹವನ್ನು ತಂಪಾಗಿರಿಸಲು ಒಳ್ಳೆಯದು. ಬೇಸಿಗೆಯಲ್ಲಿ ಬೆಲ್ಲವನ್ನು ಸೇವಿಸುವುದರಿಂದ ಹಲವಾರು ಲಾಭಗಳಿವೆ. ಬೇಸಿಗೆಯಲ್ಲಿ ದೇಹದಲ್ಲಿ ನೀರಿನಂಶ ಕಡಿಮೆಯಾಗಿ ಮಲಬದ್ಧತೆ ಸಮಸ್ಯೆ ಕಾಡುತ್ತದೆ. ಮಲಬದ್ಧತೆ ತಡೆಯಲು ಬೆಲ್ಲವು ಸಹಾಯ ಮಾಡುತ್ತದೆ. ಬೆಲ್ಲವನ್ನು ಸೇವಿಸುವುದರಿಂದ ದೊರೆಯುವ ಮತ್ತಷ್ಟು ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಬೆಲ್ಲವು ಪೊಟ್ಯಾಸಿಯಮ್, ಮೆಗ್ನೀಸಿಯಮ್ & ಸೋಡಿಯಂನಂತಹ ಎಲೆಕ್ಟ್ರೋಲೈಟ್ಗಳನ್ನು ಹೊಂದಿರುತ್ತದೆ. ಇದರಿಂದ ದೇಹದಲ್ಲಿ ದ್ರವ ಸಮತೋಲನ ಕಾಪಾಡಿಕೊಳ್ಳಲು, ದೇಹ ತಂಪಾಗಿಸಲು ಮತ್ತು ನಿರ್ಜಲೀಕರಣ ತಡೆಯಲು ಸಹಾಯ ಮಾಡುತ್ತದೆ.
ಬೆಲ್ಲವನ್ನು ತಿನ್ನುವುದರಿಂದ ದೇಹವು ನಿರ್ವಿಷಗೊಳ್ಳುತ್ತದೆ. ಇದು ಯಕೃತ್ತನ್ನು ಶುದ್ಧಗೊಳಿಸುತ್ತದೆ ಜೊತೆಗೆ ಯಕೃತ್ತಿನ ಆರೋಗ್ಯವನ್ನು ಸುಧಾರಿಸುತ್ತದೆ. ಇದು ಅನ್ನನಾಳ, ಶ್ವಾಸಕೋಶ ಮತ್ತು ಕರುಳನ್ನು ಶುದ್ಧೀಕರಿಸುವ ಕೆಲಸ ಮಾಡುತ್ತದೆ.
ತೂಕ ಇಳಿಸಿಕೊಳ್ಳಲು ಬಯಸುವವರು ತಮ್ಮ ಆಹಾರದಲ್ಲಿ ಬೆಲ್ಲವನ್ನು ಸೇರಿಸಿಕೊಳ್ಳಬಹುದು. ಇದರಲ್ಲಿರುವ ಪೊಟ್ಯಾಸಿಯಮ್ ಎಲೆಕ್ಟ್ರೋಲೈಟ್ಅನ್ನು ಸಮತೋಲನಗೊಳಿಸುತ್ತದೆ. ಚಯಾಪಚಯವನ್ನು ಹೆಚ್ಚಿಸುವುದರಿಂದ ನೀವು ಸುಲಭವಾಗಿ ತೂಕ ಕಡಿಮೆ ಮಾಡಿಕೊಳ್ಳಬಹುದು.
ಕ್ಯಾಲ್ಸಿಯಂ ಮತ್ತು ಕಬ್ಬಿಣದ ಅಂಶ ಹೊಂದಿರುವ ಬೆಲ್ಲ ಸೇವಿಸುವುದು ಮೂಳೆಗಳ ಆರೋಗ್ಯಕ್ಕೂ ಉತ್ತಮ. ಜೀರ್ಣಕ್ರಿಯೆ ಸುಧಾರಿಸಲು ಮತ್ತು ಮಲಬದ್ಧತೆ ತಡೆಯಲು ಪ್ರತಿದಿನ ಸ್ವಲ್ಪ ಬೆಲ್ಲ ತಿನ್ನುವುದು ಒಳ್ಳೆಯದು. ಕಬ್ಬಿಣಾಂಶ ಮತ್ತು ಫೋಲೇಟ್ ಹೇರಳವಾಗಿರುವ ಬೆಲ್ಲ ತಿನ್ನುವುದರಿಂದ ಕಬ್ಬಿಣದ ಕೊರತೆ ಸರಿಪಡಿಸಬಹುದು. ಇದರ ಸೇವನೆಯಿಂದ ರಕ್ತಹೀನತೆಯನ್ನು ಸಹ ತಡೆಯಬಹುದು.
ಆಂಟಿಆಕ್ಸಿಡೆಂಟ್ಗಳಿಂದ ಸಮೃದ್ಧವಾಗಿರುವ ಬೆಲ್ಲವನ್ನು ಆಹಾರದಲ್ಲಿ ಸೇರಿಸುವುದರಿಂದ ರೋಗನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ನಿಯಮಿತವಾಗಿ ಬೆಲ್ಲವನ್ನು ಸೇವಿಸುವುದರಿಂದ ಮಲಬದ್ಧತೆ ಸೇರಿದಂತೆ ಅನೇಕ ಸಮಸ್ಯೆಗಳಿಂದ ಮುಕ್ತಿ ಹೊಂದಬಹುದು.