Health Tips: ಗಸಗಸೆ ಬೀಜಗಳ ಸೇವನೆಯ ಅದ್ಭುತ ಆರೋಗ್ಯ ಪ್ರಯೋಜನಗಳು

Benefits of Common poppy seeds: ನಾರಿನಿಂದ ಸಮೃದ್ಧವಾಗಿರುವ ಗಸಗಸೆ ಜೀರ್ಣವನ್ನು ಉತ್ತೇಜಿಸಲು ಅತ್ಯಂತ ಪ್ರಯೋಜನಕಾರಿಯಾಗಿದೆ. ಇದು ಆಹಾರದಿಂದ ಪೋಷಕಾಂಶಗಳ ಹೀರುವಿಕೆಯನ್ನು ಹೆಚ್ಚಿಸುತ್ತದೆ. ಇದು ಮಲಬದ್ಧತೆಯನ್ನು ಗುಣಪಡಿಸುವುದರೊಂದಿಗೆ ದೇಹದಿಂದ ತ್ಯಾಜ್ಯ ಪದಾರ್ಥಗಳು ಸುಲಭವಾಗಿ ಹೊರಹೋಗಲು ಸಹಾಯ ಮಾಡುತ್ತದೆ.

Health benefits of Common poppy seeds: ಪಾಯಸ ಸೇರಿದಂತೆ ವಿವಿಧ ಆಹಾರ ಪದಾರ್ಥಕ್ಕೆ ಹಾಕುವ ಗಸಗಸೆಯಲ್ಲಿ ಹಲವಾರು ಆರೋಗ್ಯಕರ ಗುಣಗಳಿವೆ. ಇವುಗಳ ನಿಯಮಿತ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನ ಪಡೆಯಬಹುದು. ಅಡುಗೆಗೆ ಮಾತ್ರವಲ್ಲದೆ ಗಸಗಸೆ ಅನೇಕ ಕಾಯಿಲೆಗಳನ್ನು ಗುಣಪಡಿಸುವ ಶಕ್ತಿಯನ್ನು ಹೊಂದಿದೆ. ಗಸಗಸೆ ಸೇವನೆಯಿಂದ ದೊರೆಯುವ ಮತ್ತಷ್ಟು ಪ್ರಯೋಜನಗಳ ಬಗ್ಗೆ ತಿಳಿಯಿರಿ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

ಗಸಗಸೆಯು ಹೃದಯ ರೋಗ, ಜೀರ್ಣಕ್ರಿಯೆ, ಕೂದಲು ಮತ್ತು ಚರ್ಮದ ಸಮಸ್ಯೆಗಳು, ನಿದ್ರಾಹೀನತೆ, ಮಧುಮೇಹ, ಮೂಳೆಗಳ ಅಸಹಜತೆ ಮತ್ತು ನರ ಸಮಸ್ಯೆಗಳಂತಹ ಅನೇಕ ಖಾಯಿಲೆಗಳಿಗೆ ಚಿಕಿತ್ಸೆ ನೀಡುವ ಆರೋಗ್ಯಕರ ಪ್ರಯೋಜನಗಳನ್ನು ಹೊಂದಿದೆ.

2 /5

ಗಸಗಸೆ ಮತ್ತು ಅದರ ಎಣ್ಣೆಯು ಮಹಿಳೆಯರ ಬಂಜೆತನ ನಿವಾರಣೆಗೆ ಪ್ರಯೋಜನಕಾರಿಯಾಗಿದೆ. ಇದು ಫಲವತ್ತತೆಯ ಸಾಧ್ಯತೆಯನ್ನು ಹೆಚ್ಚಿಸುತ್ತದೆ. ಗಸಗಸೆಯಲ್ಲಿರುವ ಲಿನಿನ್ ಅಂಶವು ಕಾಮೋತ್ತೇಜಕ ಗುಣ ಹೊಂದಿದ್ದು, ಇದು ಲೈಂಗಿಕಾಸಕ್ತಿಯನ್ನು ಹೆಚ್ಚಿಸಿ ಲೈಂಗಿಕ ಜೀವನವನ್ನು ಸುಧಾರಿಸುತ್ತದೆ.

3 /5

ಗಸಗಸೆಯಲ್ಲಿ ಮೆಗ್ನೀಷಿಯಂ ಅಂಶ ಸಮೃದ್ಧವಾಗಿದ್ದು, ಇದು ಒತ್ತಡದ ಹಾರ್ಮೋನ್ ಆಗಿರುವ ಕಾರ್ಟಿಸೋಲ್ ಮಟ್ಟವನ್ನು ಕಡಿಮೆ ಮಾಡುತ್ತದೆ. ಈ ಮೂಲಕ ಒತ್ತಡ ನಿವಾರಣೆಯಾಗಿ ಗುಣಮಟ್ಟದ ನಿದ್ರೆ ಮಾಡಲು ಸಹಕಾರಿಯಾಗಿದೆ. ಮಲಗುವ ಮೊದಲು ಗಸಗಸೆಯ ಟೀ ಅಥವಾ ಗಸಗಸೆಯ ಪೇಸ್ಟ್ ಅನ್ನು ಹಾಲಿನೊಂದಿಗೆ ಕುಡಿಯಬೇಕು. ಇದು ಶರೀರದ ಚಯಾಪಚಯ ಕ್ರಿಯೆ ಹೆಚ್ಚಿಸಿ, ನಿದ್ರಿಸಲು ಪ್ರಚೋದಿಸುತ್ತದೆ ಮತ್ತು ನಿದ್ರಾಹೀನತೆಯಂತಹ ಅಸಹಜತೆಯನ್ನು ಗುಣಪಡಿಸುತ್ತದೆ.

4 /5

ಗಸಗಸೆಯಲ್ಲಿ ಕಬ್ಬಿಣದ ಅಂಶ ಸಮೃದ್ಧವಾಗಿದ್ದು, ಇದು ರಕ್ತವನ್ನು ಶುದ್ಧೀಕರಿಸುತ್ತದೆ ಮತ್ತು ಕೆಂಪು ರಕ್ತಕಣಗಳನ್ನು ಹೆಚ್ಚಿಸುತ್ತದೆ. ರಕ್ತದಲ್ಲಿನ ಹಿಮೋಗ್ಲೋಬಿನ್ ಮಟ್ಟವನ್ನು ಹೆಚ್ಚಿಸುತ್ತದೆ. ಗಸಗಸೆಯು ಏಕಾಗ್ರತೆ ಹೆಚ್ಚಿಸಲು ಮತ್ತು ಚಿತ್ತಭ್ರಮೆ ಮತ್ತು ಆಲ್ಜೀಮರ್ಸ್ ರೋಗ ಉಂಟಾಗುವ ಅಪಾಯವನ್ನು ಕಡಿಮೆ ಮಾಡುತ್ತದೆ. ಇದು ಮೆದುಳಿನ ಆರೋಗ್ಯಕ್ಕೆ ಸಹಕಾರಿಯಾಗಿದೆ. 

5 /5

ಗಸಗಸೆಯಲ್ಲಿ ತಾಮ್ರ, ಸತು ಮತ್ತು ಕ್ಯಾಲ್ಸಿಯಂ ಹೆಚ್ಚಾಗಿದೆ. ಇವು ಮೂಳೆಗಳ ಖನಿಜ ಸಾಂದ್ರತೆಯನ್ನು ಹೆಚ್ಚಿಸುತ್ತದೆ. ಈ ಮೂಲಕ ಮೂಳೆಗಳು ಮುರಿಯದಂತೆ ರಕ್ಷಿಸುತ್ತದೆ. ಇದರಲ್ಲಿರುವ ಮ್ಯಾಂಗನೀಸ್ ಮೂಳೆಗಳಲ್ಲಿ ಕೊಲ್ಯಾಜಿನ್ ಉತ್ಪಾದಿಸಲು ನೆರವಾಗುವ ಮೂಲಕ ಮೂಳೆಗಳು ಹಾನಿಗೊಳಗಾಗದಂತೆ ರಕ್ಷಿಸಿ ಒಟ್ಟಾರೆ ಆರೋಗ್ಯವನ್ನು ಹೆಚ್ಚಿಸುತ್ತದೆ.