Health Tips: ಬಿಪಿ ನಿಯಂತ್ರಣಕ್ಕೆ ಈ ಸಿಂಪಲ್‌ ಸಲಹೆ ಪಾಲಿಸಿರಿ

How can I prevent high blood pressure?: ಪ್ರತಿದಿನ ಉತ್ತಮ ಆಹಾರ ಸೇವಿಸುವುದು. ಜಂಕ್‌ಫುಡ್‌ಗಳಿಂದ ದೂರವಿರುವುದು. ನಿಯಮಿತವಾಗಿ ವ್ಯಾಯಾಮ ಮಾಡುವುದರಿಂದ ನೀವು ಉತ್ತಮ ಆರೋಗ್ಯ ಪಡೆದುಕೊಳ್ಳಬಹುದು.

How To Control high blood pressure: ಬದಲಾದ ಜೀವನಶೈಲಿ ಮತ್ತು ಕೆಟ್ಟ ಆಹಾರ ಪದ್ಧತಿಯಿಂದ ಇಂದು ಅನೇಕರು ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಒತ್ತಡಮಯ ಪರಿಸ್ಥಿತಿಯಿಂದ ಅನೇಕರು ತಮ್ಮ ಆರೋಗ್ಯದ ಬಗ್ಗೆ ವಿಶೇಷ ಕಾಳಜಿ ವಹಿಸುವುದಿಲ್ಲ. ಆರೋಗ್ಯದ ಬಗ್ಗೆ ನಿರ್ಲಕ್ಷ್ಯ ವಹಿಸುವುದರಿಂದ ಅನೇಕ ಕಾಯಿಲೆಗಳು ಬರುತ್ತವೆ. ಇಂದು ಅನೇಕರು ಲೋ ಬಿಪಿ ಮತ್ತು ಹೈ ಬಿಪಿಯಿಂದ ಬಳಲುತ್ತಿರುತ್ತಾರೆ. ಬಿಪಿ ನಿಯಂತ್ರಣಕ್ಕೆ ಇಲ್ಲಿ ನಾವು ನೀಡಿರುವ ಸಿಂಪಲ್‌ ಸಲಹೆಗಳನ್ನು ಪಾಲಿಸಿ. ಆರೋಗ್ಯಕರ ಜೀವನ ನಿಮ್ಮದಾಗುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

ಬದಲಾದ ಜೀವನಶೈಲಿ ಮತ್ತು ಆಹಾರಪದ್ಧತಿ ಹಾಗೂ ಇಂದಿನ ಒತ್ತಡಮಯ ಜೀವನದಿಂದ ಅನೇಕರು ಬಿಪಿ, ಶುಗರ್‌ ಸಮಸ್ಯೆಯಿಂದ ಬಳಲುತ್ತಿದ್ದಾರೆ. ಲೋ ಬಿಪಿ ಮತ್ತು ಹೈ ಬಿಪಿ ಅನೇಕರನ್ನು ಇನ್ನಿಲ್ಲದಂತೆ ಕಾಡುತ್ತವೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ತೆಗೆದುಕೊಳ್ಳದಿದ್ದರೆ ಜೀವನಕ್ಕೆ ಅಪಾಯ ಎದುರಾಗುವ ಸಾಧ್ಯತೆ ಇರುತ್ತದೆ. ಹೀಗಾಗಿ ಬಿಪಿ ನಿಯಂತ್ರಣದಲ್ಲಿಟ್ಟುಕೊಳ್ಳುವುದು ಬಹುಮುಖ್ಯ.

2 /5

ಎರಡು ಚಮಚ ಮೆಂತ್ಯ ಕಾಳುಗಳನ್ನು ಸ್ವಲ್ಪ ನೀರಿನಲ್ಲಿ ಕುದಿಸಿ, ಆರಿಸಿದ ನಂತರ ಅವುಗಳನ್ನು ಫಿಲ್ಟರ್‌ ಮಾಡಿ ಸೇವಿಸಬೇಕು. ಮೆಂತ್ಯವು ಪೊಟ್ಯಾಸಿಯಮ್‌ ಮತ್ತು ಫೈಬರ್‌ನಲ್ಲಿ ಸಮೃದ್ಧವಾಗಿದೆ. ಇದು ಅಧಿಕ ರಕ್ತದೊತ್ತಡದಿಂದ ತ್ವರಿತ ಪರಿಹಾರ ನೀಡುತ್ತದೆ. 

3 /5

ಜೇನುತುಪ್ಪವು ಅಧಿಕ ರಕ್ತದೊತ್ತಡವನ್ನು ಹೋಗಲಾಡಿಸಲು ಸಹಾಯ ಮಾಡುತ್ತದೆ. ಇದಕ್ಕಾಗಿ ಪ್ರತಿದಿನ ಎರಡು ಚಮಚ ಜೇನುತುಪ್ಪವನ್ನು ಸೇವಿಸುವುದು ಉತ್ತಮ. ನೀವು ತುಳಸಿ ರಸ ಮತ್ತು ಜೇನುತುಪ್ಪವನ್ನು ಮಿಶ್ರಣ ಮಾಡಿ ಸೇವಿಸಬಹುದು.

4 /5

ಅಧಿಕ ರಕ್ತದೊತ್ತಡ ಸಮಸ್ಯೆಯಿಂದ ಮುಕ್ತಿ ಪಡೆಯಲು ದಿನಕ್ಕೆ ಎರಡು ಬಾಳೆಹಣ್ಣು ತಿನ್ನುವುದು, ಶುಂಠಿಯನ್ನು ದಿನನಿತ್ಯದ ಆಹಾರದಲ್ಲಿ ಸೇವಿಸುವುದು ಉತ್ತಮ. 

5 /5

ಆಹಾರದಲ್ಲಿ ಉಪ್ಪನ್ನು ಕಡಿಮೆ ಮಾಡುವುದು ಮತ್ತು ನಿಯಮಿತವಾಗಿ ವ್ಯಾಯಾಮ ಮಾಡುವುದರಿಂದ ಅಧಿಕ ರಕ್ತದೊತ್ತಡವನ್ನು ಕಡಿಮೆ ಮಾಡುತ್ತದೆ.