Green Apple: ಪ್ರತಿದಿನ ಆರೋಗ್ಯದ ನಿಧಿ ಇರುವ ಹಸಿರು ಸೇಬು ಸೇವಿಸಿ

Health Benefits Of Green Apple: ಹಸಿರು ಸೇಬು ಉರಿಯೂತವನ್ನು ತಡೆಯುತ್ತದೆ ಮತ್ತು ಹೃದಯದ ಆರೋಗ್ಯಕ್ಕೆ ಸಹಕಾರಿಯಾಗಿದೆ. ಇದರಲ್ಲಿರುವ ಫೈಬರ್‌ ಕೆಟ್ಟ ಕೊಲೆಸ್ಟ್ರಾಲ್‌ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದರಿಂದ ಹೃದ್ರೋಗದ ಅಪಾಯವು ಕಡಿಮೆಯಾಗುತ್ತದೆ. 

Health Benefits Of Green Apple: ಸೇಬು ಹಣ್ಣನ್ನು ಪ್ರತಿಯೊಬ್ಬರೂ ಇಷ್ಟಪಟ್ಟು ಸೇವಿಸುತ್ತಾರೆ. ಪ್ರತಿದಿನ ಕೇವಲ ಒಂದು ಸೇಬನ್ನು ತಿನ್ನುವುದರಿಂದ ಡಾಕ್ಟರ್‌ಅನ್ನು ದೂರವಿಡಬಹುದು. ಸೇಬು ಹೃದಯದ ಆರೋಗ್ಯವನ್ನು ಸುಧಾರಿಸುತ್ತದೆ ಮತ್ತು ಕ್ಯಾನ್ಸರ್ ತಡೆಯುತ್ತದೆ. ಸೇಬು ತಿನ್ನುವುದು ಆರೋಗ್ಯಕ್ಕೆ ಉತ್ತಮ ಆಯ್ಕೆಯಾಗಿದೆ. ದಿನಕ್ಕೊಂದು ಸೇಬು ತಿನ್ನುವುದು ನಿಮ್ಮ ಆರೋಗ್ಯದ ಮೇಲಿನ ಉತ್ತಮ ಹೂಡಿಕೆಯಾಗಿದೆ. ಕೆಂಪು ಸೇಬಿನಂತೆಯೇ ಹಸಿರು ಸೇಬು ಸಹ ಹಲವಾರು ಆರೋಗ್ಯಕರ ಪ್ರಯೋಜನಗಳನ್ನು ಹೊಂದಿವೆ. ಹಸಿರು ಸೇಬಿನಲ್ಲಿ ವಿಟಮಿನ್ ಎ, ಬಿ, ಸಿ, ಇ ಮತ್ತು ಕೆ ಅಂಶವಿದೆ. ಕಬ್ಬಿಣ, ಪೊಟ್ಯಾಸಿಯಮ್ ಮತ್ತು ಪ್ರೊಟೀನ್ ಪ್ರಮಾಣವೂ ಹೆಚ್ಚಾಗಿದೆ. ಮಧುಮೇಹ ಸಮಸ್ಯೆಯಿಂದ ಬಳಲುವವರು ಕೆಂಪು ಸೇಬಿನ ಬದಲು ಹಸಿರು ಸೇಬನ್ನು ತಿಂದರೆ ಉತ್ತಮ. ಕೆಂಪು ಸೇಬುಗಳು ಹಸಿರು ಸೇಬುಗಳಿಗಿಂತ ಹೆಚ್ಚು ಉತ್ಕರ್ಷಣ ನಿರೋಧಕಗಳನ್ನು ಹೊಂದಿರುತ್ತವೆ. ಹಸಿರು ಸೇಬು ಸೇವನೆಯಿಂದ ದೊರೆಯುವ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ...

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /6

ಹಸಿರು ಸೇಬುಗಳು ಉತ್ಕರ್ಷಣ ನಿರೋಧಕಗಳ ಸಮೃದ್ಧ ಮೂಲವಾಗಿದ್ದು, ಅದು ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸಹಾಯಮಾಡುತ್ತದೆ. ಇದು ಸೋಂಕಿನ ವಿರುದ್ಧ ಹೋರಾಡಲು ಸಹಾಯ ಮಾಡುತ್ತದೆ. ಇದಕ್ಕಾಗಿಯೇ ರೋಗ ನಿರೋಧಕ ಶಕ್ತಿಯನ್ನು ಹೆಚ್ಚಿಸಲು ಸೇಬುಗಳನ್ನು ತಿನ್ನಲು ಹೆಚ್ಚಾಗಿ ಸಲಹೆ ನೀಡಲಾಗುತ್ತದೆ. ಹಸಿರು ಸೇಬಿನಲ್ಲಿ ಉತ್ತಮ ಪ್ರಮಾಣದ ಉತ್ಕರ್ಷಣ ನಿರೋಧಕಗಳಿವೆ. ವಿಟಮಿನ್‌ ಸಿ, ಫ್ಲೇವನಾಯ್ಡ್‌ಗಳು ಮತ್ತು ಪಾಲಿಫಿನಾಲ್ಗಳನ್ನು ಸಹ ಒಳಗೊಂಡಿದೆ. ಇದು ಪ್ರತಿರಕ್ಷಣಾ ವ್ಯವಸ್ಥೆಯು ಸರಿಯಾಗಿ ಕಾರ್ಯನಿರ್ವಹಿಸಲು ಸಹಾಯ ಮಾಡುತ್ತದೆ. 

2 /6

ಹಸಿರು ಸೇಬಿನಲ್ಲಿ ಹೆಚ್ಚಿನ ಫೈಬರ್ ಅಂಶವಿದ್ದು, ಇದು ಜೀರ್ಣಕ್ರಿಯೆಗೆ ಸಹಾಯ ಮಾಡುತ್ತದೆ ಮತ್ತು ಮಲಬದ್ಧತೆಯಿಂದ ಪರಿಹಾರವನ್ನು ನೀಡುತ್ತದೆ. ಹಸಿರು ಸೇಬು ಪೆಕ್ಟಿನ್ ಅನ್ನು ಹೊಂದಿರುತ್ತದೆ. ಇದು ಫೈಬರ್‌ನ ಉತ್ತಮ ಮೂಲವಾಗಿದ್ದು, ಪ್ರೋಬಯಾಟಿಕ್ ಆಗಿ ಕಾರ್ಯನಿರ್ವಹಿಸುತ್ತದೆ. ಇದು ಕರುಳಿನಲ್ಲಿ ಆರೋಗ್ಯಕರ ಬ್ಯಾಕ್ಟೀರಿಯಾದ ಪ್ರಮಾಣವನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ಅದಕ್ಕಾಗಿಯೇ ಹಸಿರು ಸೇಬು ಜೀರ್ಣಾಂಗ ವ್ಯವಸ್ಥೆಯನ್ನು ಸರಿಪಡಿಸಲು ಉತ್ತಮ ಹಣ್ಣಾಗಿದೆ.

3 /6

ಹಸಿರು ಸೇಬಿನಲ್ಲಿ ಕಡಿಮೆ ಗ್ಲೈಸೆಮಿಕ್ ಇಂಡೆಕ್ಸ್ ಇದ್ದು, ಇದು ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸುತ್ತದೆ & ಟೈಪ್ 2 ಮಧುಮೇಹ ತಡೆಯುತ್ತದೆ. ಕಡಿಮೆ ಗ್ಲೈಸೆಮಿಕ್ ಸೂಚಿಯನ್ನು ಹೊಂದಿರುವ ಆಹಾರಗಳು ನಿಧಾನವಾಗಿ ಜೀರ್ಣವಾಗುತ್ತವೆ ಮತ್ತು ನಿಧಾನವಾಗಿ ರಕ್ತದಲ್ಲಿ ಹೀರಲ್ಪಡುತ್ತವೆ. ಈ ಕಾರಣದಿಂದ ರಕ್ತದಲ್ಲಿನ ಸಕ್ಕರೆಯ ಮಟ್ಟವು ತ್ವರಿತವಾಗಿ ಹೆಚ್ಚಾಗುವುದಿಲ್ಲ ಮತ್ತು ಮಧುಮೇಹದ ಸಮಸ್ಯೆಯನ್ನು ತಡೆಯುತ್ತದೆ. ಅದಕ್ಕಾಗಿಯೇ ಹಸಿರು ಸೇಬು ಮಧುಮೇಹ ರೋಗಿಗಳಿಗೆ ಉತ್ತಮ ಆಯ್ಕೆಯಾಗಿದೆ.

4 /6

ಹಸಿರು ಸೇಬು ಉರಿಯೂತವನ್ನು ತಡೆಯುತ್ತದೆ ಮತ್ತು ಹೃದಯದ ಆರೋಗ್ಯಕ್ಕೆ ಸಹಕಾರಿಯಾಗಿದೆ. ಇದರಲ್ಲಿರುವ ಫೈಬರ್‌ ಕೆಟ್ಟ ಕೊಲೆಸ್ಟ್ರಾಲ್‌ ಮಟ್ಟವನ್ನು ಕಡಿಮೆ ಮಾಡುತ್ತದೆ. ಇದರಿಂದ ಹೃದ್ರೋಗದ ಅಪಾಯವು ಕಡಿಮೆಯಾಗುತ್ತದೆ. 

5 /6

ಹಸಿರು ಸೇಬಿನಲ್ಲಿರುವ ಫೈಟೊ ಕೆಮಿಕಲ್‌ ಪ್ರಮಾಣವು ಕ್ಯಾನ್ಸರ್‌ ತಡೆಗಟ್ಟುವಲ್ಲಿ ಪರಿಣಾಮಕಾರಿ. ಇದರ ಉತ್ಕರ್ಷಣ ನಿರೋಧಕ ಅಂಶಗಳು ಮೆದುಳಿನ ಕೋಶಗಳನ್ನು ಹಾನಿಯಾಗದಂತೆ ರಕ್ಷಿಸುತ್ತದೆ. ಇದರಿಂದ ಬುದ್ಧಿಮಾಂದ್ಯತೆಯಂತಹ ರೋಗಗಳ ಅಪಾಯವು ಕಡಿಮೆಯಾಗುತ್ತದೆ. ಹಸಿರು ಸೇಬು ಮೆದುಳಿನ ಆರೋಗ್ಯಕ್ಕೆ ಸಹಕಾರಿಯಾಗಿದೆ.

6 /6

ಹಸಿರು ಸೇಬಿನಲ್ಲಿರುವ ಫೈಬರ್‌ ಅಂಶವು ತೂಕ ನಷ್ಟಕ್ಕೆ ಸಹಾಯ ಮಾಡುತ್ತದೆ. ಇದರ ಸೇವನೆಯಿಂದ ಹೊಟ್ಟೆ ತುಂಬಿ ಬೇಗ ಹಸಿವಾಗುವುದಿಲ್ಲ. ಅನಾರೋಗ್ಯಕರ ಲಘು ಆಹಾರದ ಬದಲು ಇದು ಉತ್ತಮ ಆಯ್ಕೆಯಾಗಿದೆ. ಹೀಗಾಗಿ ನೀವು ವೇಗವಾಗಿ ತೂಕ ನಷ್ಟ ಮಾಡಿಕೊಳ್ಳಲು ಬಯಸಿದರೆ ನಿಯಮಿತವಾಗಿ ಹಸಿರು ಸೇಬು ಸೇವಿಸಬೇಕು.