Health Benefits of Ashwagandha: ಅಶ್ವಗಂಧದ ಪುಡಿಯನ್ನು ಹಾಲಿನೊಂದಿಗೆ ಸೇರಿಸಿ ಕುಡಿದರೆ ನಿದ್ದೆಯ ಸಮಸ್ಯೆಯಿಂದ ಮುಕ್ತಿ ಸಿಗುತ್ತದೆ. ಅಶ್ವಗಂಧದ ಕಷಾಯವನ್ನು ನಿಯಮಿತವಾಗಿ ಸೇವನೆ ಮಾಡುತ್ತಿದ್ದರೆ ಜೀರ್ಣಕ್ರಿಯೆಗೆ ಸಂಬಂಧಪಟ್ಟ ಎಲ್ಲಾ ಸಮಸ್ಯೆಗಳು ದೂರವಾಗುತ್ತವೆ.
Health Benefits of Ashwagandha: ಆಯುರ್ವೇದ ಔಷಧಗಳ ತಯಾರಿಕೆಯಲ್ಲಿ ಹೇರಳವಾಗಿ ಬಳಸುವ ಅಶ್ವಗಂಧ ಎಲ್ಲಾ ರೀತಿಯ ಕಾಯಿಲೆಗಳಿಗೆ ಪವರ್ಫುಲ್ ಮನೆಮದ್ದಾಗಿದೆ. ಇದರ ಬೇರು, ತೊಗಟೆ, ಬೀಜ ಹಾಗೂ ಹಣ್ಣುಗಳಲ್ಲಿ ಔಷಧೀಯ ಗುಣವು ಹೇರಳವಾಗಿದೆ. ಹಿರೇಮದ್ದು ಅಂತಲೂ ಕರೆಸಿಕೊಳ್ಳುವ ಅಶ್ವಗಂಧ ಸೇವನೆಯಿಂದ ನೀವು ಹಲವಾರು ಆರೋಗ್ಯಕರ ಪ್ರಯೋಜನ ಪಡೆಯುತ್ತೀರಿ. ಅಶ್ವಗಂಧವು ಸರ್ವರೋಗಗಳಿಗೂ ರಾಮಬಾಣವಾಗಿದ್ದು, ಇದರ ಆರೋಗ್ಯ ಪ್ರಯೋಜನಗಳ ಬಗ್ಗೆ ತಿಳಿಯಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
ಅಶ್ವಗಂಧವನ್ನು ಹಾಲಿನಲ್ಲಿ ಬೇಯಿಸಿ ಒಣಗಿಸಿ ಪುಡಿ ಮಾಡಿಕೊಳ್ಳಬೇಕು. ಈ ಪುಡಿಯನ್ನು ಹಾಲು ಮತ್ತು ಜೇನುತುಪ್ಪದೊಂದಿಗೆ ಸೇವಿಸಿದರೆ ಬೆನ್ನುನೋವಿನ ಸಮಸ್ಯೆ ಗುಣಮುಖವಾಗುತ್ತದೆ.
ಅಶ್ವಗಂಧದ ಬೇರನ್ನು ಕುಟ್ಟಿ ಪುಡಿ ಮಾಡಿ ಹಾಲಿನಲ್ಲಿ ಅಥವಾ ಜೇನು ತುಪ್ಪದಲ್ಲಿ ಬೆರೆಸಿಕೊಂಡು ಸೇವಿಸಿದರೆ ರಕ್ತ ಹೀನತೆ ಸಮಸ್ಯೆ ದೂರವಾಗುತ್ತದೆ.
ಅಶ್ವಗಂಧ ಮತ್ತು ಶತಾವರಿಯನ್ನು ಸಮಪ್ರಮಾಣದಲ್ಲಿ ತೆಗೆದುಕೊಂಡು ಕಷಾಯ ಮಾಡಿ, ಹಾಲು ಬೆರೆಸಿ ಕುಡಿಯುವುದರಿಂದ ಲೈಂಗಿಕ ಸಮಸ್ಯೆ ನಿವಾರಣೆಯಾಗುತ್ತದೆ.
ಒಂದು ಚಮಚ ಅಶ್ವಗಂಧ ಪುಡಿಯನ್ನು ಹಾಲಿನಲ್ಲಿ ಬೆರೆಸಿ ಬೆಳಗ್ಗೆ ಮತ್ತು ಸಂಜೆ ಸೇವಿಸುವುದರಿಂದ ಮಹಿಳೆಯರಲ್ಲಿ ಮುಟ್ಟು ನಿಲ್ಲುವ ಸಮಯದಲ್ಲಿ ಎದುರಾಗುವ ತೊಂದರೆಗಳು ಶಮನವಾಗುತ್ತವೆ.
ಅಶ್ವಗಂಧವನ್ನು ಲೈಂಗಿಕ ದೌರ್ಬಲ್ಯಕ್ಕೆ ಉತ್ತಮ ಮನೆಮದ್ದು ಎಂದು ಪರಿಗಣಿಸಲಾಗಿದೆ. ಇದರ ಪುಡಿಯನ್ನು ಹಾಲಿಗೆ ಬೆರೆಸಿ ದಿನಕ್ಕೆ ಎರಡು ಬಾರಿ ಸೇವಿಸಿದರೆ ಪುರುಷರ ಲೈಂಗಿಕ ದೌರ್ಬಲ್ಯವು ದೂರವಾಗುತ್ತದೆ.