Nimma Sarkara Namma Guarantee: ಕಾಂಗ್ರೆಸ್ ಸರ್ಕಾರದ 5 ಗ್ಯಾರಂಟಿಗಳ ಸಂಪೂರ್ಣ ಮಾಹಿತಿ ಇಲ್ಲಿದೆ

Nimma Sarkara Namma Guarantee: ಕಾಂಗ್ರೆಸ್ ಸರ್ಕಾರವು ಗೃಹ ಜ್ಯೋತಿ, ಗೃಹ ಲಕ್ಷ್ಮಿ, ಅನ್ನ ಭಾಗ್ಯ, ಶಕ್ತಿ ಯೋಜನೆ ಮತ್ತು ಯುವ ನಿಧಿ ಯೋಜನೆಗಳನ್ನು ಜಾರಿಗೆ ತರುತ್ತಿದೆ.

ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆಗೆ ಕಾಂಗ್ರೆಸ್ ಪಕ್ಷವು ತನ್ನ ಪ್ರಣಾಳಿಕೆಯಲ್ಲಿ 5 ಗ್ಯಾರಂಟಿ ಯೋಜನೆಗಳನ್ನು ಘೋಷಿಸಿತ್ತು. ಇದೀಗ ಒಂದೊಂದೆ ಯೋಜನೆಯನ್ನು ಜಾರಿ ಮಾಡುವುದಾಗಿ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹೇಳಿದೆ. ಮಹಿಳೆಯರಿಗೆ ಉಚಿತ ಬಸ್ ಪ್ರಯಾಣ, ಗೃಹ ಲಕ್ಷ್ಮಿ ಯೋಜನೆಯಡಿ ಮನೆ ಯಜಮಾನಿಗೆ ತಿಂಗಳಿಗೆ 2 ಸಾವಿರ ರೂ., ಅನ್ನ ಭಾಗ್ಯ ಯೋಜನೆಡಿ ಬಿಪಿಎಲ್ ಕಾರ್ಡ್ ಇರುವ ಕುಟುಂಬದ ಪ್ರತಿ ಸದಸ್ಯನಿಗೆ ತಿಂಗಳಿಗೆ 10 ಕೆಜಿ ಅಕ್ಕಿ, ಗೃಹ ಜ್ಯೋತಿ ಯೋಜನೆಯಡಿ ರಾಜ್ಯದ ಪ್ರತಿ ಮನೆಗೆ 200 ಯುನಿಟ್ ಉಚಿತ ವಿದ್ಯುತ್ ಹಾಗೂ ಯುವ ನಿಧಿ ಯೋಜನೆಯಡಿ ನಿರುದ್ಯೋಗಿ ಪದವೀಧರರು ಹಾಗೂ ಡಿಪ್ಲೊಮಾ ಮಾಡಿದವರಿಗೆ ಭತ್ಯೆ ನೀಡುವ ಯೋಜನೆಗಳನ್ನು ಕಾಂಗ್ರೆಸ್ ಸರ್ಕಾರ ಜಾರಿಗೆ ತರುತ್ತಿದೆ. ಈ ಯೋಜನೆಗಳ ಸಂಪೂರ್ಣ ಮಾಹಿತಿ ಇಲ್ಲಿದೆ ನೋಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://bit.ly/3LwfnhK 

Instagram Link -  https://bit.ly/3LyfY2l 
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಬೆಲೆ ಏರಿಕೆಯಿಂದ ಬಸವಳಿದ ಜನತೆಗೆ ನಮ್ಮ ಗೃಹಲಕ್ಷ್ಮಿ ಯೋಜನೆ ನೆರವಾಗಿ ನಿಲ್ಲಲಿದೆ. ಪ್ರತಿ ಕುಟುಂಬದ ಶಕ್ತಿಯೇ ಹೆಣ್ಣು, ಆ ಹೆಣ್ಣುಮಕ್ಕಳ ಕೈ ಬಲಪಡಿಸುವುದೇ ನಮ್ಮ ಉದ್ದೇಶವೆಂದು ಕಾಂಗ್ರೆಸ್ ಹೇಳಿದೆ.

2 /5

ಉದ್ಯೋಗವನ್ನು ಕೊಡುತ್ತೇವೆ, ಉದ್ಯೋಗ ಸಿಗುವವರೆಗೆ ನಿರುದ್ಯೋಗ ಭತ್ಯೆಯನ್ನು ಕೊಡುತ್ತೇವೆ. ನಿರುದ್ಯೋಗದಿಂದ ಕಂಗೆಟ್ಟಿರುವ ಯುವಜನತೆಗೆ ಯುವನಿಧಿಯ ಮೂಲಕ ನೆರವು ನೀಡಲಾಗುವುದು ಎಂದು ಕಾಂಗ್ರೆಸ್ ಸರ್ಕಾರ ಹೇಳಿದೆ.   

3 /5

ವಿದ್ಯಾರ್ಥಿನೀಯರಿಗೆ, ಉದ್ಯೋಗಸ್ಥ ಮಹಿಳೆಯರಿಗೆ ನೆರವಾಗುವ ಹಾಗೂ ಸ್ತ್ರೀ ಸಬಲೀಕರಣಕ್ಕೆ ಒತ್ತು ನೀಡುವ ಉಚಿತ ಪ್ರಯಾಣ ಯೋಜನೆ ಸಾಮಾಜಿಕ ಕ್ರಾಂತಿಗೆ ಕಾರಣವಾಗಲಿದೆ ಎಂದು ಕಾಂಗ್ರೆಸ್ ಹೇಳಿಕೊಂಡಿದೆ.

4 /5

200 ಯೂನಿಟ್ ಉಚಿತ ವಿದ್ಯುತ್ ನೀಡುವ ಮೂಲಕ ನಮ್ಮ ಸರ್ಕಾರ ರಾಜ್ಯದ ಜನತೆಯ ಮೇಲಿನ ಆರ್ಥಿಕ ಹೊರೆಯನ್ನು ಇಳಿಸುವ ಪ್ರಯತ್ನ ಮಾಡಿದೆ ನಮ್ಮ ಸರ್ಕಾರ. ನಾವು ನುಡಿದಂತೆ ನಡೆದಿದ್ದೇವೆ ಎಂದು ಕಾಂಗ್ರೆಸ್ ಹೇಳಿದೆ.

5 /5

ರಾಜ್ಯದ ಶ್ರಮಜೀವಿ ವರ್ಗಕ್ಕೆ, ಬಡವರಿಗೆ ಅನ್ನಭಾಗ್ಯ ಯೋಜನೆಯಲ್ಲಿ 10 ಕೆಜಿ ಅಕ್ಕಿ ನೀಡುವ ಮೂಲಕ ಜಗಜ್ಯೋತಿ ಬಸವಣ್ಣನವರ ದಾಸೋಹ ತತ್ವದ ಆಶಯವನ್ನು ಸಾಕಾರಗೊಳಿಸುತ್ತಿದೆ ಎಂದು ಕಾಂಗ್ರೆಸ್ ಸರ್ಕಾರ ಹೇಳಿದೆ.