Home Remedy For White Hair: ಬಿಳಿ ಕೂದಲನ್ನು ಕಪ್ಪಾಗಿಸಲು ಹೇರ್ ಡೈ ಬಳಸುವುದರಿಂದ ಕೆಲವರಲ್ಲಿ ಇದು ಅಡ್ಡಪರಿಣಾಮಗಳನ್ನು ಕೂಡ ಉಂಟು ಮಾಡುತ್ತದೆ.
Natural Hair Dye: ಯಾವುದೇ ರೀತಿಯ ಸೈಡ್ ಎಫೆಕ್ಟ್ಸ್ ಇಲ್ಲದೆಯೇ ಬಿಳಿ ಕೂದಲನ್ನು ಕಪ್ಪಾಗಿಸಲು ನಿಮ್ಮ ಅಡುಗೆ ಮನೆಯಲ್ಲಿರುವ ಕೆಲವು ಪದಾರ್ಥಗಳು ತುಂಬಾ ಪ್ರಯೋಜನಕಾರಿ ಆಗಿವೆ.
ಇತ್ತೀಚಿನ ಅಪ್ಡೇಟ್ ಸುದ್ದಿಗಳನ್ನು ವೀಕ್ಷಿಸಲು ನಮ್ಮ Youtube Link - https://www.youtube.com/@ZeeKannadaNews/featured ಸಬ್ ಸ್ಕ್ರೈಬ್ಆಗಿರಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ದೇಹದಲ್ಲಿ ಪೋಷಕಾಂಶಗಳ ಕೊರತೆ ಜೊತೆಗೆ ಬದಲಾದ ವಾತಾವರಣ, ಧೂಳು, ಆಹಾರ ಪದ್ದತಿಯಿಂದಾಗಿ ಕೂದಲು ಬೆಳ್ಳಗಾಗಬಹುದು.
ಬಿಳಿ ಕೂದಲನ್ನು ಕಪ್ಪಾಗಿಸಲು ಮಾರುಕಟ್ಟೆಯಲ್ಲಿ ನಾನಾ ಬಗೆಯ ಹೇರ್ ಡೈ ಗಳು ಲಭ್ಯವಿವೆ. ಆದರೆ, ಇವುಗಳ ಬಳಕೆಯಿಂದ ಕೆಲವರಲ್ಲಿ ಚರ್ಮ ಮತ್ತು ಕೂದಲಿಗೆ ಸಂಬಂಧಿಸಿದಂತೆ ಕೆಲವು ಅಡ್ಡಪರಿಣಾಮಗಳು ಉಂಟಾಗಬಹುದು.
ಆದರೆ, ನಿಮ್ಮ ಮನೆಯಲ್ಲಿಯೇ ಇರುವ ಪದಾರ್ಥಗಳನ್ನು ಬಳಸಿ ನ್ಯಾಚುರಲ್ ಹೇರ್ ಡೈ ತಯಾರಿಸಿ ಬಳಸುವುದರಿಂದ ಕೂದಲು ಕಪ್ಪಾಗುವುದರ ಜೊತೆಗೆ ಸೊಂಪಾಗಿಯೂ ಬೆಳೆಯುತ್ತದೆ.
ನಿಮ್ಮ ಮನೆಯಲ್ಲಿ ಸುಲಭವಾಗಿ ಲಭ್ಯವಿರುವ ಆಮ್ಲಾ ಪೌಡರ್, ಟೀ ಪುಡಿ, ಕಾಫಿ ಪುಡಿ, ಕಪ್ಪು ಜೀರಿಗೆಯನ್ನು ಬಳಸಿ ಬಿಳಿ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸಬಹುದು.
ಮೊದಲಿಗೆ 2 ಸ್ಪೂನ್ ಕಪ್ಪು ಜೀರಿಗೆಯನ್ನು ತೆಗೆದುಕೊಂಡು ನುಣ್ಣಗೆ ಪುಡಿ ಮಾಡಿ. ನಂತರ ಒಂದು ಕಬ್ಬಿಣದ ಬಾಣಲೆಯಲ್ಲಿ ಒಂದು ಗ್ಲಾಸ್ ನೀರು ಹಾಕಿ ಕಾಯಲು ಬಿಡಿ. ನೀರು ಸಣ್ಣ ಕುದಿ ಬರುತ್ತಿದ್ದಂತೆ 2 ಸ್ಪೂನ್ ಆಮ್ಲಾ ಪುಡಿ, 1 ಸ್ಪೂನ್ ಟೀ ಪುಡಿ, 1 ಸ್ಪೂನ್ ಕಾಫಿ ಪುಡಿ, ಪುಡಿಮಾಡಿಟ್ಟ ಕಪ್ಪು ಜೀರಿಗೆಯನ್ನು ಹಾಕಿ ಸಣ್ಣ ಉರಿಯಲ್ಲಿ ಅದು ಗಟ್ಟಿಯಾಗುವವರೆಗೂ ಕಾಯಿಸಿ.
ಈ ರೀತಿ ತಯಾರಿಸಿದ ನ್ಯಾಚುರಲ್ ಹೇರ್ ಡೈ ತಣ್ಣಗಾದ ಬಳಿಕ ಕೂದಲಿನ ಬುಡದಿಂದ ತುದಿಯವರೆಗೂ ಲೇಪಿಸಿ. ಒಂದು ಗಂಟೆ ಬಳಿಕ ಸೌಮ್ಯ ಶಾಂಪೂವಿನಿಂದ ಹೇರ್ ವಾಶ್ ಮಾಡಿದರೆ ಕೂದಲನ್ನು ಶಾಶ್ವತವಾಗಿ ಕಪ್ಪಾಗಿಸಬಹುದು. ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.