Samsung Galaxy F34 5G Smartphone: ಸ್ಯಾಮ್ಸಂಗ್ ಗ್ಯಾಲಕ್ಸಿ F34 5G ಫೋನ್ ಸ್ಯಾಮ್ಸಂಗ್ ಎಕ್ಸಿನೋಸ್ 1280 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಈ ಫೋನ್ ಆಂಡ್ರಾಯ್ಡ್ 13OS ಸಪೋರ್ಟ್ ಸಹ ಪಡೆದುಕೊಂಡಿದೆ.
Samsung Galaxy F34 5G: ಪ್ರಸಿದ್ಧ ಇ-ಕಾಮರ್ಸ್ ಪ್ಲಾಟ್ಫಾರ್ಮ್ ಫ್ಲಿಪ್ಕಾರ್ಟ್ನಲ್ಲಿ ಮೊಬೈಲ್ಗಳ ಮೇಲೆ ಆಕರ್ಷಕ ಡಿಸ್ಕೌಂಟ್ ಲಭ್ಯವಿದೆ. ಈ ಪೈಕಿ ಅದ್ಭುತ ಫೀಚರ್ಸ್ ಹೊಂದಿರುವ ಸ್ಯಾಮ್ಸಂಗ್ ಗ್ಯಾಲಕ್ಸಿ F34 5G ಸ್ಮಾರ್ಟ್ಫೋನ್ ನಿಮಗೆ ಆಕರ್ಷಕ ರಿಯಾಯಿತಿ ದರದಲ್ಲಿ ಸಿಗಲಿದೆ. ಈ ಫೋನ್ ಮೇಲೆ ಶೇ.46%ರಷ್ಟು ಡಿಸ್ಕೌಂಟ್ ನೀಡುತ್ತಿದ್ದು, ಕೇವಲ 12,999 ರೂ.ಗಳ ಆಫರ್ ಬೆಲೆಯಲ್ಲಿ ಗ್ರಾಹಕರು 6GB RAM + 128GB ವೇರಿಯಂಟ್ ಫೋನ್ ಖರೀದಿಸಬಹುದು. ಇದಲ್ಲದೇ ಹೆಚ್ಚುವರಿಯಾಗಿ ಆಯ್ದ ಬ್ಯಾಂಕ್ಗಳಿಂದ ಮತ್ತಷ್ಟು ರಿಯಾಯಿತಿ ಸಹ ದೊರೆಯಲಿದೆ. ಇದರ ಫೀಚರ್ಸ್ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
ಸ್ಯಾಮ್ಸಂಗ್ ಗ್ಯಾಲಕ್ಸಿ F34 5G ಸ್ಮಾರ್ಟ್ಫೋನ್ 6,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್ಅಪ್ ಸೌಲಭ್ಯ ಹೊಂದಿದೆ. ಅದೇ ರೀತಿ ಸ್ಯಾಮ್ಸಂಗ್ ಎಕ್ಸಿನೋಸ್ 1280 SoC ಪ್ರೊಸೆಸರ್ ಮೂಲಕ ಇದು ಕಾರ್ಯನಿರ್ವಹಿಸಲಿದೆ. ಮೊಬೈಲ್ನ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯವಿದೆ. ಇದು 6.5 ಇಂಚಿನ FULL HD ಸೂಪರ್ AMOLED ಮಾದರಿಯ ಡಿಸ್ಪ್ಲೇ ಹೊಂದಿದೆ. ಇದರ ಈ ಡಿಸ್ಪ್ಲೇ 1080 x 2400 ಪಿಕ್ಸೆಲ್ ಸ್ಕ್ರೀನ್ ರೆಸಲ್ಯೂಶನ್ ಸಾಮರ್ಥ್ಯವನ್ನು ಹೊಂದಿದ್ದು, 120Hz ರಿಫ್ರೆಶ್ ರೇಟ್ ಸಪೋರ್ಟ್ ಇದೆ. ಇದರ ಡಿಸ್ಪ್ಲೇ ವಾಟರ್ಡ್ರಾಪ್ ನಾಚ್ ವಿನ್ಯಾಸ ಹೊಂದಿದೆ.
ಸ್ಯಾಮ್ಸಂಗ್ ಗ್ಯಾಲಕ್ಸಿ F34 5G ಫೋನ್ ಸ್ಯಾಮ್ಸಂಗ್ ಎಕ್ಸಿನೋಸ್ 1280 SoC ಪ್ರೊಸೆಸರ್ ಸಾಮರ್ಥ್ಯದಲ್ಲಿ ಕಾರ್ಯ ನಿರ್ವಹಿಸಲಿದೆ. ಇದಕ್ಕೆ ಅನುಗುಣವಾಗಿ ಈ ಫೋನ್ ಆಂಡ್ರಾಯ್ಡ್ 13OS ಸಪೋರ್ಟ್ ಸಹ ಪಡೆದುಕೊಂಡಿದೆ. ಇದು 6GB + 128GB ಹಾಗೂ 8GB + 128GB ಸ್ಟೋರೇಜ್ ವೇರಿಯಂಟ್ ಆಯ್ಕೆಗಳಲ್ಲಿ ಲಭ್ಯವಿದೆ. ಇದರೊಂದಿಗೆ ಇದು SD ಕಾರ್ಡ್ ಮೂಲಕ 1TBವರೆಗೆ ಬಾಹ್ಯ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸುವುದಕ್ಕೆ ಅವಕಾಶ ನೀಡಲಾಗಿದೆ.
ಸ್ಯಾಮ್ಸಂಗ್ ಗ್ಯಾಲಕ್ಸಿ F34 5G ಫೋನ್ ಟ್ರಿಪಲ್ ರಿಯರ್ ಕ್ಯಾಮೆರಾ ರಚನೆ ಹೊಂದಿದ್ದು, ಇದರಲ್ಲಿ ಮೊದಲ ಕ್ಯಾಮೆರಾ 50 ಮೆಗಾ ಪಿಕ್ಸೆಲ್ ಸೆನ್ಸಾರ್ ಹೊಂದಿದೆ. ೨ನೇ ಕ್ಯಾಮೆರಾ 8 ಮೆಗಾಪಿಕ್ಸಲ್ ಹೊಂದಿದ್ದು, ತೃತೀಯ ಕ್ಯಾಮೆರಾ 2 ಮೆಗಾಪಿಕ್ಸಲ್ ಸಾಮರ್ಥ್ಯದಲ್ಲಿವೆ. ಇನ್ನು ಮುಂಭಾಗದಲ್ಲಿ 16 ಮೆಗಾ ಪಿಕ್ಸೆಲ್ ಸೆನ್ಸಾರ್ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ನೀಡಲಾಗಿದೆ.
ಸ್ಯಾಮ್ಸಂಗ್ ಗ್ಯಾಲಕ್ಸಿ F34 5G ಮೊಬೈಲ್ 6,000mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್ಅಪ್ ಆಯ್ಕೆ ಹೊಂದಿದ್ದು, 25W ಫಾಸ್ಟ್ ಚಾರ್ಜಿಂಗ್ ಸಪೋರ್ಟ್ ಮಾಡುತ್ತದೆ. ಇದರ ಜೊತೆಗೆ ಕನೆಕ್ಟಿವಿಟಿ ಆಯ್ಕೆಗಳಲ್ಲಿ ಹಾಟ್ಸ್ಪಾಟ್, ವೈಫೈ, USB ಟೈಪ್ C ಪೊರ್ಟ್, ಹೆಡ್ಫೋನ್ ಜ್ಯಾಕ್ ಸೌಲಭ್ಯಗಳನ್ನು ಸಹ ಒಳಗೊಂಡಿದೆ.
ಈ ಸ್ಮಾರ್ಟ್ಫೋನ್ ಬ್ಲ್ಯಾಕ್ ಹಾಗೂ ಗ್ರೀನ್ ಕಲರ್ ಆಯ್ಕೆಗಳಲ್ಲಿ ಲಭ್ಯವಿದೆ. ಗ್ರಾಹಕರು ಈ ಫೋನ್ ಅನ್ನು ಫ್ಲಿಪ್ಕಾರ್ಟ್ ಇ ಕಾಮರ್ಸ್ ಪ್ಲಾಟ್ಫಾರ್ಮ್ ಮೂಲಕ ಖರೀದಿ ಮಾಡಬಹುದು. ಸದ್ಯ ಈ ಫೋನ್ ಮೇಲೆ ಭರ್ಜರಿ ಡಿಸ್ಕೌಂಟ್ ಲಭ್ಯವಿದ್ದು, ಗ್ರಾಹಕರು ಇದರ ಲಾಭ ಪಡೆದುಕೊಳ್ಳಬಹುದು.