Kubera Wealth: ನಿಮಗೆ ಇದ್ದಕ್ಕಿದ್ದಂತೆ ಹಣಕಾಸಿನ ಸಮಸ್ಯೆ ಹೆಚ್ಚಾಗಿದ್ದರೆ, ನೀವು ಮಲಗುವ ದಿಂಬಿನ ಕೆಳಗೆ ಕೆಲವು ವಸ್ತುಗಳನ್ನಿಟ್ಟು ಮಲಗುವುದರಿಂದ ಸುಲಭವಾಗಿ ಪರಿಹಾರ ದೊರೆಯಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ನಿಮ್ಮ ಜೀವನದಲ್ಲಿ ಇದ್ದಕ್ಕಿದ್ದಂತೆ ಹಣಕಾಸಿನ ಸಮಸ್ಯೆ ಹೆಚ್ಚಾಗಿದ್ದರೆ ಅಥವಾ ನೀವು ಸಹ ಶ್ರೀಮಂತರಾಗಿ ಬದುಕುವ ಇಚ್ಛೆ ಹೊಂದಿದ್ದರೆ, ಕಷ್ಟ ಪಟ್ಟು ದುಡಿಯುವುದರ ಜೊತೆಗೆ ಅದೃಷ್ಟದ ಬೆಂಬಲವೂ ಅಗತ್ಯ.
ವಾಸ್ತು ಶಾಸ್ತ್ರದ ಪ್ರಕಾರ, ನೀವು ಮಲಗುವ ದಿಂಬಿನ ಕೆಳಗೆ ಕೆಲವು ವಸ್ತುಗಳನ್ನು ಇಟ್ಟು ಮಲಗುವುದು ಕೂಡ ನಿಮಗೆ ಅದೃಷ್ಟವನ್ನು ತರಬಹುದು ಎಂದು ನಿಮಗೆ ತಿಳಿದಿದೆಯೇ?
ಚಿಕ್ಕ ವಯಸ್ಸಿನಲ್ಲಿ ಪುಸ್ತಕದೊಳಗೆ ನವಿಲುಗರಿ ಇಡುವ ಅಭ್ಯಾಸ ಬಹುತೇಕ ಜನರಿಗೆ ಇರುತ್ತೆ. ಆದರೆ, ನೀವು ನಿಮ್ಮ ದಿಂಬಿನ ಕೆಳಗೆ ನವಿಲುಗರಿ ಇಟ್ಟು ಮಲಗುವುದರಿಂದ ಅಷ್ಟ ದಿಕ್ಕುಗಳಿಂದಲೂ ಶುಭ ಸುದ್ದಿ ಪಡೆಯಬಹುದು ಎಂದು ಹೇಳಲಾಗುತ್ತದೆ.
ದಿಂಬಿನ ಕೆಳಗೆ ಬೆಳ್ಳುಳ್ಳಿ, ಲವಂಗವನ್ನು ಇಟ್ಟು ಮಲಗುವುದರಿಂದ ಶೀತದಿಂದ ಪರಿಹಾರ ದೊರೆಯುವುದು ಮಾತ್ರವಲ್ಲ, ವ್ಯಕ್ತಿಯ ಅದೃಷ್ಟದ ಬಾಗಿಲುಗಳು ಕೂಡ ತೆರೆಯುತ್ತವೆ.
ಹಿಂದೂ ಧರ್ಮದಲ್ಲಿ ಪೂಜನೀಯ ಸ್ಥಾನ ಪಡೆದಿರುವ ತುಳಸಿ ದಳವನ್ನು ದಿಂಬಿನ ಕೆಳಗೆ ಇಟ್ಟು ಮಲಗುವುದರಿಂದ ತಾಯಿ ಲಕ್ಷ್ಮಿಯ ಆಶೀರ್ವಾದ ದೊರೆಯುತ್ತದೆ ಎನ್ನಲಾಗುತ್ತದೆ.
ಅರಿಶಿನದ ಕೊಂಬನ್ನು ದಿಂಬಿನ ಕೆಳಗಿಟ್ಟು ಮಲಗುವುದರಿಂದ ಜೀವನದಲ್ಲಿ ಪ್ರಗತಿಯ ಬಾಗಿಲುಗಳು ತೆರೆಯುತ್ತವೆ ಎಂದು ಹೇಳಲಾಗುತ್ತದೆ.
ಒಂದು ರೂಪಾಯಿ ನಾಣ್ಯವನ್ನು ನೀವು ಮಲಗುವ ದಿಂಬಿನ ಕೆಳಗೆ ಇಟ್ಟು ಮಲಗುವುದರಿಂದ ಹಣಕಾಸಿನ ಸಮಸ್ಯೆ ದೂರವಾಗುತ್ತದೆ ಎಂದು ನಂಬಲಾಗಿದೆ.
ವಾಸ್ತು ಶಾಸ್ತ್ರದ ಪ್ರಕಾರ, ದಿಂಬಿನ ಕೆಳಗೆ ಬೆಳ್ಳಿ ಮೀನನ್ನು ಇಟ್ಟು ಮಲಗುವುದರಿಂದ ಜೀವನದಲ್ಲಿ ಎಂದಿಗೂ ಹಣದ ಕೊರತೆ ಎದುರಾಗುವುದಿಲ್ಲ ಎಂದು ನಂಬಲಾಗಿದೆ. ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.