Photo Gallery: ಕೆಂಪು ಕೋಟೆಯಲ್ಲಿ ಸ್ವಾತಂತ್ರ್ಯ ದಿನಾಚರಣೆ

     

  • Aug 15, 2019, 10:50 AM IST

     

1 /8

ಭಾರತ ಗುರುವಾರ 73 ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಅವರು ನವದೆಹಲಿಯ ಕೆಂಪು ಕೋಟೆಯಿಂದ ರಾಷ್ಟ್ರವನ್ನುದ್ದೇಶಿಸಿ ಮಾತನಾಡಿದರು. ಭಾರತದ ಇತಿಹಾಸದಲ್ಲಿ ಇದು ಅತ್ಯಂತ ಮಹತ್ವದ ದಿನವಾದ್ದರಿಂದ ರಾಷ್ಟ್ರದಾದ್ಯಂತ ಜನರು ಪೂರ್ಣ ಉತ್ಸಾಹದಿಂದ ಆಚರಿಸುತ್ತಿದ್ದಾರೆ. ಆಚರಣೆಗಳು ಸುಗಮವಾಗಿ ನಡೆಯುವಂತೆ ವಿವಿಧ ಸ್ಥಳಗಳಲ್ಲಿ ಬೃಹತ್ ಭದ್ರತಾ ವ್ಯವಸ್ಥೆ ಮಾಡಲಾಗಿದೆ. ರಾಜ್‌ಘಾಟ್‌ನಲ್ಲಿ ಮಹಾತ್ಮ ಗಾಂಧಿಯವರ ಸಮಾದಿಗೆ ಗೌರವ ಸಲ್ಲಿಸಿದ ಬಳಿಕ  ಪ್ರಧಾನಿ ಮೋದಿ ಕೆಂಪು ಕೋಟೆಗೆ ಆಗಮಿಸಿದರು. ಇಲ್ಲಿ, ಅವರು ರಾಷ್ಟ್ರಧ್ವಜವನ್ನು ಹಾರಿಸಿದರು. (Image Courtesy: ANI)

2 /8

ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ಕೆಂಪು ಕೋಟೆಯಲ್ಲಿ ಸೇರಿದ ಜವಾನರು. (Image Courtesy: ANI)

3 /8

ಪಿಎಂ ಮೋದಿ ಅವರು ಕೆಂಪು ಕೋಟೆಯಲ್ಲಿ ಗಾರ್ಡ್ ಆಫ್ ಆನರ್ ಅನ್ನು ಪರಿಶೀಲಿಸುತ್ತಿರುವುದು. (Image Courtesy: ANI)

4 /8

ಇದು ಕೆಂಪು ಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿಯವರ ಆರನೇ ಸ್ವಾತಂತ್ರ್ಯ ದಿನಾಚರಣೆ. (Image Courtesy: ANI)

5 /8

ಕೆಂಪು ಕೋಟೆಯಲ್ಲಿ ನಡೆದ ಸ್ವಾತಂತ್ರ್ಯೋತ್ಸವದಲ್ಲಿ ಮುಖ್ಯನ್ಯಾಯಮೂರ್ತಿ ರಂಜನ್ ಗೊಗೋಯಿ, ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಮಾಜಿ ಪ್ರಧಾನಿ ಡಾ. ಮನಮೋಹನ್ ಸಿಂಗ್ ಸೇರಿದಂತೆ ಹಲವು ಗಣ್ಯರು ಹಾಜರಿದ್ದರು. (Image Courtesy: ANI)

6 /8

ಕೆಂಪು ಕೋಟೆಯ ಕಮಾನುಗಳಿಂದ ಸ್ವಾತಂತ್ರ್ಯ ದಿನಾಚರಣೆಯ ನೋಟ. (Image Courtesy: ANI)

7 /8

73 ನೇ ಸ್ವಾತಂತ್ರ್ಯ ದಿನಾಚರಣೆಯಂದು ಪ್ರಧಾನಿ ನರೇಂದ್ರ ಮೋದಿ ಕೆಂಪು ಕೋಟೆಯಲ್ಲಿ ಮಕ್ಕಳನ್ನು ಭೇಟಿಯಾದರು. (Image Courtesy: ANI)

8 /8

ಕೆಂಪು ಕೋಟೆಯಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರೊಂದಿಗೆ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್, ನೌಕಾಪಡೆಯ ಮುಖ್ಯಸ್ಥ ಅಡ್ಮಿರಲ್ ಕರಂಬೀರ್ ಸಿಂಗ್ ಮತ್ತು ಏರ್ ಚೀಫ್ ಮಾರ್ಷಲ್ ಬಿಎಸ್ ಧನೋವಾ. (Image Courtesy: ANI)