IPL 2024: ಅತಿ ಹೆಚ್ಚು ಸಂಭಾವನೆ ಪಡೆಯುತ್ತಿರುವ ಟಾಪ್‌ 5 ಭಾರತೀಯ ಆಟಗಾರರು!

Indian Premier League 2024: 2008ರಿಂದ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಡುತ್ತಿದ್ದಾರೆ. RCB ಮ್ಯಾನೇಜ್ಮೆಂಟ್ ಕೊಹ್ಲಿಯನ್ನು ಉಳಿಸಿಕೊಂಡಿದ್ದು, 15 ಕೋಟಿ ರೂ. ಸಂಭಾವನೆ ನೀಡುತ್ತಿದೆ.

IPL 2024: ನಾಳೆಯಿಂದ ಟಾಟಾ ಐಪಿಎಲ್‌ 2024ರ ಹಬ್ಬ ಆರಂಭವಾಗಲಿದೆ. ಶುಕ್ರವಾರ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ರಾಯಲ್ ಚಾಲೆಂಜರ್ಸ್ ಬೆಂಗಳೂರು ನಡುವೆ ಉದ್ಘಾಟನಾ ಪಂದ್ಯ ನಡೆಯಲಿದೆ. ಈ ಬಾರಿ ಯಾರಿಗೆ ಐಪಿಎಲ್‌ ಟ್ರೋಫಿ ಸಿಗುತ್ತದೆ ಅನ್ನೋದರ ಬಗ್ಗೆ ಅಭಿಮಾನಿಗಳು ಲೆಕ್ಕಾಚಾರ ಹಾಕುತ್ತಿದ್ದಾರೆ. ಪ್ರತಿಯೊಂದು ಐಪಿಎಲ್‌ ಪಂದ್ಯವನ್ನು ಕಣ್ತುಂಬಿಕೊಳ್ಳಲು ಕ್ರಿಕೆಟ್‌ ಪ್ರೇಮಿಗಳು ಕಾತುರದಿಂದ ಕಾಯುತ್ತಿದ್ದಾರೆ. ಈ ಬಾರಿಯ ಐಪಿಎಲ್‌ ಟೂರ್ನಿಯಲ್ಲಿ ಅತಿಹೆಚ್ಚು ಸಂಭಾವನೆ ಪಡೆಯುತ್ತಿರುವ ಟಾಪ್‌ 5 ಭಾರತೀಯ ಆಟಗಾರರ ಮಾಹಿತಿ ಇಲ್ಲಿದೆ ನೋಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /6

ಲಖನೌ ಸೂಪರ್ ಜೈಂಟ್ಸ್ ತಂಡವು ಕನ್ನಡಿಗ ಕೆ.ಎಲ್.ರಾಹುಲ್‌ರನ್ನು ಉಳಿಸಿಕೊಂಡಿದ್ದು, 17 ಕೋಟಿ ರೂ. ಸಂಭಾವನೆ ನೀಡುತ್ತಿದೆ. ಸದ್ಯದ ಮಟ್ಟಿಗೆ ರಾಹುಲ್ ಭಾರತೀಯ ಆಟಗಾರರ ಪೈಕಿ ಅತಿಹೆಚ್ಚು ಸಂಭಾವನೆ ಪಡೆಯುತ್ತಿರುವ ಅಗ್ರ ಆಟಗಾರನಾಗಿದ್ದಾರೆ.

2 /6

ಚೆನ್ನೈ ಸೂಪರ್ ಕಿಂಗ್ಸ್ ಸಹ ಆಲ್‌ರೌಂಡರ್ ರವೀಂದ್ರ ಜಡೇಜಾರನ್ನು ಉಳಿಸಿಕೊಂಡಿದ್ದು, 16 ಕೋಟಿ ರೂ. ಸಂಭಾವನೆ ನೀಡುತ್ತಿದೆ. 2023ರಲ್ಲಿ ಚೆನ್ನೈ ತಂಡವು ಚಾಂಪಿಯನ್ ಆಗುವಲ್ಲಿ ಜಡೇಜಾ ಪ್ರಮುಖ ಪಾತ್ರವಹಿಸಿದ್ದರು.

3 /6

ಕಳೆದ ವರ್ಷ ಸಂಭವಿಸಿದ್ದ ಅಪಘಾತ ಕಾರಣ ಗಂಭೀರ ಗಾಯಗೊಂಡು ಆಸ್ಪತ್ರೆ ಸೇರಿದ್ದ ರಿಷಬ್‌ ಪಂತ್‌ ಈಗ ಫಿಟ್‌ ಅಂಡ್‌ ಫೈನ್‌ ಆಗಿದ್ದಾರೆ. ಇಷ್ಟುದಿನ ತಂಡದಿಂದ ದೂರ ಉಳಿದಿದ್ದ ನಾಯಕ ಮತ್ತು ವಿಕೆಟ್ ಕೀಪರ್-ಬ್ಯಾಟರ್ ಪಂತ್‌ರನ್ನು ಉಳಿಸಿಕೊಂಡಿದ್ದು, ಅವರಿಗೆ 16 ಕೋಟಿ ರೂ. ಸಂಭಾವನೆ ನೀಡುತ್ತಿದೆ.

4 /6

ಮುಂಬೈ ಇಂಡಿಯನ್ಸ್ ತಂಡವು ರೋಹಿತ್ ಶರ್ಮಾರನ್ನು ಉಳಿಸಿಕೊಂಡಿದ್ದು, 16 ಕೋಟಿ ರೂ. ಸಂಭಾವನೆ ನೀಡುತ್ತಿದೆ. ಆದರೆ ಈ ಬಾರಿ ತಂಡವನ್ನು ರೋಹಿತ್ ಬದಲು ಹಾರ್ದಿಕ್‌ ಪಾಂಡ್ಯ ಮುನ್ನಡೆಸುತ್ತಿದ್ದಾರೆ.

5 /6

2022ರಲ್ಲಿ ನಡೆದ ಮೆಗಾ ಹರಾಜಿನಲ್ಲಿ ಮುಂಬೈ ಇಂಡಿಯನ್ಸ್ ಫ್ರಾಂಚೈಸಿಯು ಯುವ ವಿಕೆಟ್ ಕೀಪರ್ ಬ್ಯಾಟರ್ ಇಶಾನ್ ಕಿಶನ್‌ರನ್ನು 15.25 ಕೋಟಿ ರೂ. ನೀಡಿ ಖರೀದಿಸಿದೆ.

6 /6

2008ರಿಂದ ವಿರಾಟ್ ಕೊಹ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡದಲ್ಲಿ ಆಡುತ್ತಿದ್ದಾರೆ. RCB ಮ್ಯಾನೇಜ್ಮೆಂಟ್ ಕೊಹ್ಲಿಯನ್ನು ಉಳಿಸಿಕೊಂಡಿದ್ದು, 15 ಕೋಟಿ ರೂ. ಸಂಭಾವನೆ ನೀಡುತ್ತಿದೆ.