iQOO Z6 Lite 5G: ಅತ್ಯಂತ ಕಡಿಮೆ ಬೆಲೆಗೆ ಅದ್ಭುತ ಫೀಚರ್ಸ್‌ ಹೊಂದಿರುವ ಸ್ಮಾರ್ಟ್‌ಫೋನ್‌!

iQOO Z6 Lite 5G Smartphone: ದೇಶಿಯ ಮಾರುಕಟ್ಟೆಯಲ್ಲಿ iQOO Z6 Lite 5G ಸ್ಮಾರ್ಟ್‌ಫೋನ್ 4GB + 64GB ಹಾಗೂ 6GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಈ ಸ್ಮಾರ್ಟ್‌ಫೋನ್‌ ಗ್ರೀನ್‌ ಹಾಗೂ ಬ್ಲ್ಯಾಕ್‌ ಕಲರ್‌ನಲ್ಲಿ ಖರೀದಿಗೆ ಲಭ್ಯವಿದೆ.  

iQOO Z6 Lite 5G Smartphone: ಜನಪ್ರಿಯ ಇ-ಕಾಮರ್ಸ್‌ ಪ್ಲಾಟ್‌ಫಾರ್ಮ್‌ ಫ್ಲಿಪ್‌ಕಾರ್ಟ್‌ನಲ್ಲಿ iQOO Z6 Lite 5G ಸಾರ್ಟ್‌ಫೋನ್‌ ಮೇಲೆ ಶೇ.40% ರಷ್ಟು ರಿಯಾಯಿತಿ ಲಭ್ಯವಿದೆ. ಈ ಫೋನಿನ 6GB RAM + 128GB ಸ್ಟೋರೇಜ್‌ ವೇರಿಯಂಟ್‌ ಕೇವಲ 11,999 ರೂ.ಗೆ ಲಭ್ಯವಿದೆ. ಇದರ ಜೊತೆಗೆ ಖರೀದಿದಾರರು ಎಕ್ಸ್‌ಚೆಂಜ್‌ ಆಫರ್‌ ಹಾಗೂ ಇತರೆ ರಿಯಾಯಿತಿ ಪಡೆದುಕೊಂಡರೆ ಈ ಮೊಬೈಲ್‌ ಮೇಲೆ ಮತ್ತಷ್ಟು ಡಿಸ್ಕೌಂಟ್‌ ದೊರೆಯಲಿದೆ. iQOOನ ಈ ಫೋನ್‌ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 4 ಜೆನ್‌ 1 ಪ್ರೊಸೆಸರ್‌ ಪವರ್‌ ಹೊಂದಿದ್ದು, 5,000mAh ಸಾಮರ್ಥ್ಯದ ಬಿಗ್ ಬ್ಯಾಟರಿ ಬ್ಯಾಕ್‌ಅಪ್‌ ಸೌಲಭ್ಯವನ್ನು ಸಹ ಒಳಗೊಂಡಿದೆ. iQOO Z6 Lite 5G ಮೊಬೈಲ್‌ನ ಇತರೆ ಫೀಚರ್ಸ್‌ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /5

iQOO Z6 Lite 5G ಸ್ಮಾರ್ಟ್‌ಫೋನ್‌ 6.58 ಇಂಚಿನ LCD ಡಿಸ್‌ಪ್ಲೇ ಹೊಂದಿದ್ದು, ಈ ಡಿಸ್‌ಪ್ಲೇ 1080 x 2408 ಪಿಕ್ಸೆಲ್‌ ಸ್ಕ್ರೀನ್‌ ರೆಸಲ್ಯೂಶನ್‌ ಸಾಮರ್ಥ್ಯವನ್ನು ಪಡೆದಿದೆ. ಇದರ ಡಿಸ್‌ಪ್ಲೇ 20:9 ರಚನೆಯ ಅನುಪಾತವನ್ನು ಪಡೆದಿದ್ದು, 401 PPI ಪಿಕ್ಸೆಲ್‌ ಸಾಂದ್ರತೆಯನ್ನು ಒಳಗೊಂಡಿದೆ. ಜೊತೆಗೆ ಈ ಡಿಸ್‌ಪ್ಲೇ 120Hz ರಿಫ್ರೆಶ್ ರೇಟ್‌ ಸಹ ಹೊಂದಿದೆ.

2 /5

iQOO Z6 Lite 5G ಸ್ಮಾರ್ಟ್‌ಫೋನ್‌ ಕ್ವಾಲ್ಕಮ್‌ ಸ್ನ್ಯಾಪ್‌ಡ್ರಾಗನ್‌ 4 ಜೆನ್‌ 1 ಪ್ರೊಸೆಸರ್‌ ಸಾಮರ್ಥ್ಯವನ್ನು ಒಳಗೊಂಡಿದ್ದು, ಇದಕ್ಕೆ ಪೂರಕವಾಗಿ ಆಂಡ್ರಾಯ್ಡ್‌ 12 ಬೆಂಬಲದೊಂದಿಗೆ ಕಾರ್ಯ ನಿರ್ವಹಿಸಲಿದೆ. ಈ ಫೋನ್ 4GB + 64GB ಮತ್ತು 6GB + 128GB ಸ್ಟೋರೇಜ್‌ ಹೊಂದಿದೆ. ಮೆಮೊರಿ ಕಾರ್ಡ್‌ ಮೂಲಕ 1TBವರೆಗೆ ಸಂಗ್ರಹ ಸಾಮರ್ಥ್ಯವನ್ನು ವಿಸ್ತರಿಸಿಕೊಳ್ಳಬಹುದಾಗಿದೆ.

3 /5

iQOO Z6 Lite 5G ಸ್ಮಾರ್ಟ್‌ಫೋನ್‌ ಡ್ಯುಯಲ್‌ ರಿಯರ್‌ ಕ್ಯಾಮೆರಾ ಸೆಟ್‌ಅಪ್‌ ಹೊಂದಿದ್ದು, ಮುಖ್ಯ ಕ್ಯಾಮೆರಾವು 50 ಮೆಗಾ ಪಿಕ್ಸಲ್‌ ಸೆನ್ಸಾರ್‌ ಸಾಮರ್ಥ್ಯದಲ್ಲಿದೆ. ಸೆಕೆಂಡರಿ ಕ್ಯಾಮೆರಾವು 2 ಮೆಗಾ ಪಿಕ್ಸಲ್‌ ಹೊಂದಿದೆ. ಜೊತೆಗೆ 8 ಮೆಗಾ ಪಿಕ್ಸೆಲ್‌ ಸೆನ್ಸಾರ್‌ ಸಾಮರ್ಥ್ಯದ ಸೆಲ್ಫಿ ಕ್ಯಾಮೆರಾ ಹೊಂದಿದ್ದು, ಬೇಸಿಕ್ ಎಡಿಟಿಂಗ್ ಆಯ್ಕೆಗಳಿವೆ.

4 /5

iQOO Z6 Lite 5G ಸ್ಮಾರ್ಟ್‌ಫೋನ್ 5000 mAh ಸಾಮರ್ಥ್ಯದ ಬ್ಯಾಟರಿ ಬ್ಯಾಕ್‌ಅಪ್‌ ಒಳಗೊಂಡಿದ್ದು, 18W ವೇಗದ ಚಾರ್ಜಿಂಗ್‌ ಸೌಲಭ್ಯವಿದೆ. ಕನೆಕ್ಟಿವಿಟಿ ಸೌಲಭ್ಯಗಳ ಪೈಕಿ ಹಾಟ್‌ಸ್ಪಾಟ್‌, ಬ್ಲೂಟೂತ್‌, ವೈಫೈ, 5G ನೆಟ್‌ವರ್ಕ್‌ ಸಪೋರ್ಟ್ ಮಾಡುತ್ತದೆ. ಲೈಟ್‌ ಸೆನ್ಸಾರ್‌, ಪ್ರಾಕ್ಸಿಮಿಟಿ ಸೆನ್ಸಾರ್‌, ಅಕ್ಸಿಲೆರೊಮೀಟರ್ ಸೆನ್ಸಾರ್‌ ಸಹ ಹೊಂದಿದೆ.

5 /5

ದೇಶಿಯ ಮಾರುಕಟ್ಟೆಯಲ್ಲಿ iQOO Z6 Lite 5G ಸ್ಮಾರ್ಟ್‌ಫೋನ್ 4GB + 64GB ಹಾಗೂ 6GB + 128GB ಸ್ಟೋರೇಜ್‌ ವೇರಿಯಂಟ್‌ ಆಯ್ಕೆಗಳಲ್ಲಿ ಖರೀದಿಗೆ ಲಭ್ಯವಿದೆ. ಈ ಸ್ಮಾರ್ಟ್‌ಫೋನ್‌ ಗ್ರೀನ್‌ ಹಾಗೂ ಬ್ಲ್ಯಾಕ್‌ ಕಲರ್‌ನಲ್ಲಿ ಖರೀದಿಗೆ ಲಭ್ಯವಿದೆ.