Gruhalakshmi Yojana: ಗೃಹಲಕ್ಷ್ಮಿ ಹಣಕ್ಕಾಗಿ ಕಾಯುತ್ತಿರುವ ಮಹಿಳೆಯರಿಗೆ ಶಾಕಿಂಗ್ ಸುದ್ದಿಯೊಂದಿದೆ. ಗೃಹಲಕ್ಷ್ಮಿ ಯೋಜನೆಯಿಂದ ಸುಮಾರು 2 ಲಕ್ಷ ಮಹಿಳೆಯರ ಹೆಸರನ್ನು ಕೈಬಿಡಲಾಗಿದೆ.
Gruhalakshmi Yojana Cancel: ಕರ್ನಾಟಕ ರಾಜ್ಯ ಸರ್ಕಾರದ 'ಪಂಚ ಗ್ಯಾರಂಟಿ' ಯೋಜನೆಗಳಲ್ಲಿ "ಗೃಹ ಲಕ್ಷ್ಮಿ" ಯೋಜನೆಯೂ ಒಂದು. ನೀವು ಎರಡ್ಮೂರು ತಿಂಗಳಿನಿಂದ ಗೃಹಲಕ್ಷ್ಮಿ ಹಣ ಬಂದಿಲ್ಲ ಅಂತಾ ಕಾಯ್ತಾ ಇದ್ದೀರಾ... ಇಲ್ಲಿದೆ ಒಂದು ಶಾಕಿಂಗ್ ನ್ಯೂಸ್...
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಎರಡ್ಮೂರು ತಿಂಗಳಿಂದ ಗೃಹಲಕ್ಷ್ಮೀ ಯೋಜನೆಯ ಹಣ ಫಲಾನುಭವಿಗಳ ಖಾತೆಗೆ ಪಾವತಿಯಾಗಿಲ್ಲ. ಏಕೆ ತಡವಾಗುತ್ತಿರಬಹುದು ಎಂಬ ಕುರಿತು ವ್ಯಾಪಕವಾಗಿ ಚರ್ಚೆ ಆಗುತ್ತಿದೆ. ಅದರ ನಡುವೆ ಈಗ ಈ ಮಹತ್ವದ ಯೋಜನೆಯಿಂದ 2 ಲಕ್ಷಕ್ಕೂ ಹೆಚ್ಚು ಮಹಿಳೆಯರ ಹೆಸರನ್ನು ಕೈಬಿಡಲಾಗುತ್ತದೆ ಎಂಬ ವಿಷಯ ಕೇಳಿಬರುತ್ತಿದೆ.
ಗ್ರಾಮೀಣ ಮಹಿಳೆಯರ, ಮನೆ ಕೆಲಸದಲ್ಲೇ ನಿರತರಾಗಿದ್ದವರ, ಹಣಕ್ಕಾಗಿ ಪುರುಷರ ಮೇಲೆ ಅವಲಂಬಿತವಾಗಿದ್ದ ಮಹಿಳೆಯರ ಗೃಹಲಕ್ಷ್ಮೀ ಯೋಜನೆಯ ಹಣಕ್ಕೆ ಕತ್ತರಿ ಹಾಕುತ್ತಿರುವುದು ರಾಜ್ಯ ಸರ್ಕಾರವಲ್ಲ, ಆದಾಯ ತೆರಿಗೆ ಇಲಾಖೆ.
ಸುಮಾರು 2 ಲಕ್ಷ ಮಹಿಳೆಯರು ಇಲ್ಲಿಯವರೆಗೆ ಗೃಹಲಕ್ಷ್ಮಿ ಯೋಜನೆಯಿಂದ ಎಷ್ಟು ಹಣ ಪಡೆದ್ದಿದ್ದಾರೋ ಅದೇ ಅವರ ಪಾಲಿಗೆ 'ಪಂಚಾಮೃತ'. ಇದೀಗ ಆದಾಯ ತೆರಿಗೆ ಹಾಗೂ ಜಿಎಸ್ಟಿ ಸಂಖ್ಯೆ ಹೊಂದಿರುವ ಮಹಿಳೆಯರನ್ನು ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಪಟ್ಟಿಯಿಂದ ಕೈಬಿಡಲಾಗುತ್ತದೆ.
ಈಗಾಗಲೇ ಐಟಿ - ಜಿಎಸ್ಟಿ ಪಾವತಿದಾರರ ಪಟ್ಟಿ ಸಿದ್ಧವಾಗಿದ್ದು ಅದರ ಪ್ರಕಾರ 2 ಲಕ್ಷಕ್ಕೂ ಹೆಚ್ಚು ಮಹಿಳೆಯರಿಗೆ ಗೃಹಲಕ್ಷ್ಮಿ ಯೋಜನೆಯನ್ನು ಸ್ಥಗಿತಗೊಳಿಸಲಾಗಿದೆ.
ರಾಜ್ಯದಲ್ಲಿ 1.28 ಕೋಟಿ ಮಹಿಳೆಯರು ಗೃಹಲಕ್ಷ್ಮೀ ಯೋಜನೆಯ ಫಲಾನುಭವಿಗಳಿದ್ದಾರೆ. ಇದರಲ್ಲಿ ಸುಮಾರು 2 ಲಕ್ಷ ಮಹಿಳೆಯರು ಆದಾಯ ತೆರಿಗೆ ಪಾವತಿಸುತ್ತಿದ್ದಾರೆ ಮತ್ತು ಕೆಲವರು ಕೆಲವು ವ್ಯವಹಾರಗಳನ್ನು ಮಾಡುತ್ತಾ ಜಿಎಸ್ಟಿ ಪಾವತಿ ಸಂಖ್ಯೆಯನ್ನು ಹೊಂದಿದ್ದಾರೆ. ಅಂತಹ ಮಹಿಳೆಯರನ್ನು ಗೃಹಲಕ್ಷ್ಮೀ ಯೋಜನೆ ಫಲಾನುಭವಿಗಳ ಪಟ್ಟಿಯಿಂದ ಕೈಬಿಡಲಾಗಿದೆ.
ಅರ್ಹರಿಗೆ ಮಾತ್ರವೇ ಗೃಹಲಕ್ಷ್ಮಿ ಯೋಜನೆಯ ಹಣ ಸಂದಾಯವಾಗಬೇಕು ಎನ್ನುವ ಕಾರಣಕ್ಕೆ ಈ ರೀತಿ ಮಾಡಲಾಗಿದೆ ಎನ್ನಲಾಗುತ್ತಿದೆ.
ಐಟಿ ಮತ್ತು ಜಿಎಸ್ಟಿ ಪಾವತಿದಾರ ಮಹಿಳೆಯರು ತಮಗೆ ಗೃಹಲಕ್ಷ್ಮೀ ಯೋಜನೆಯ ಹಣ ಬಂದಿಲ್ಲವೆಂದು ಅಲೆದಾಡುವುದು ಬೇಡ. ನಿಮಗೆ ಗೃಹಲಕ್ಷ್ಮೀ ಯೋಜನೆ ಸೌಲಭ್ಯ ಸಿಗುವುದಿಲ್ಲ ಎಂದು ಅಧಿಕೃತವಾಗಿ ಹಿಂಬರಹ ನೀಡಬೇಕೆಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
2-3 ತಿಂಗಳಿಂದ ಗೃಹಲಕ್ಷ್ಮೀ ಯೋಜನೆಯ ಹಣ ಪಾವತಿಯಾಗಿಲ್ಲದಿದ್ದರೆ ಇವತ್ತು - ನಾಳೆ ಹಣ ಬರಬಹುದು ಎಂದು ನಿರೀಕ್ಷೆ ಇಟ್ಟುಕೊಳ್ಳುವುದು ಬೇಡ. ಬ್ಯಾಂಕ್ಗಳಿಗೆ ಪದೇಪದೆ ಅಲೆಯುವುದು ಬೇಡ. ಸ್ಥಳೀಯ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಕಾರ್ಯಾಲಯದಲ್ಲಿ ವಿಚಾರಿಸಿ.
ಆಧಾರ್ ಲಿಂಕ್, ಬ್ಯಾಂಕ್ ಖಾತೆ ಜೋಡಣೆ ಮೊದಲಾದ ಸಣ್ಣಪುಟ್ಟ ತಾಂತ್ರಿಕ ಸಮಸ್ಯೆ ಕಾರಣದಿಂದ ಯೋಜನೆ ಹಣ ಬರದಿದ್ದರೆ ಅಪ್ಡೇಟ್ ಮಾಡಿಸಿಕೊಂಡ ಹಾಗೂ ಸಮಸ್ಯೆ ಬಗೆಹರಿದ ಕೂಡಲೇ ಅರ್ಹ ಫಾಲಾನುಭವಿಗಳ ಖಾತೆಗೆ ಗೃಹಲಕ್ಷ್ಮೀ ಯೋಜನೆಯ ಹಣ ಜಮೆ ಆಗಲಿದೆ.