ಈ ಐದು ರೋಗಗಳನ್ನು ಬುಡಸಮೇತ ಕಿತ್ತೆಸೆಯುವ ಶಕ್ತಿ ಹಲಸಿನ ಬೀಜಕ್ಕಿದೆ ! ಎಸೆಯುವ ಮುನ್ನ ಯೋಚಿಸಿ

ಹಲಸಿನ ಹಣ್ಣು ಮಾತ್ರವಲ್ಲ ಈ ಹಣ್ಣಿನ ಬೀಜ ಕೂಡಾ ಪೌಷ್ಟಿಕಾಂಶಗಳ ಆಗರ. ಇದರಲ್ಲಿ ವಿಟಮಿನ್ ಎ, ಪ್ರೋಟೀನ್, ಫೈಬರ್, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ನಂತಹ ಪೋಷಕಾಂಶಗಳು ಕಂಡುಬರುತ್ತವೆ. 
 

ಬೆಂಗಳೂರು : ಹಲಸಿನ ಹನ್ನುತಿನ್ನಲು ಬಲು ರುಚಿ. ಹಲಸಿನ ಹಣ್ಣನ್ನು ಬಳಸಿ ಅನೇಕ ಖಾದ್ಯಗಳನ್ನು ಮಾಡಲಾಗುತ್ತದೆ.  ಈ ಹಣ್ಣು ಅತಿ ಹೆಚ್ಚಿನ ಪೌಷ್ಟಿಕಾಂಶಕವನ್ನು ಹೊಂದಿರುತ್ತದೆ. ಈ ಹಣ್ಣು ಮಾತ್ರವಲ್ಲ ಈ ಹಣ್ಣಿನ ಬೀಜ ಕೂಡಾ ಪೌಷ್ಟಿಕಾಂಶಗಳ ಆಗರ. ಇದರಲ್ಲಿ ವಿಟಮಿನ್ ಎ, ಪ್ರೋಟೀನ್, ಫೈಬರ್, ಮೆಗ್ನೀಸಿಯಮ್ ಮತ್ತು ಪೊಟ್ಯಾಸಿಯಮ್ ನಂತಹ ಪೋಷಕಾಂಶಗಳು ಕಂಡುಬರುತ್ತವೆ. ಇದು ದೇಹವನ್ನು ಫಿಟ್ ಆಗಿಡಲು ಸಹಾಯ ಮಾಡುತ್ತದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/watch?v=uzXzteRDY-k

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /5

ಹಲಸಿನ ಬೀಜಗಳು ಆರೋಗ್ಯಕ್ಕೆ ತುಂಬಾ ಪ್ರಯೋಜನಕಾರಿ. ಅನೇಕ ಪೋಷಕಾಂಶಗಳು ಈ ಬೀಜಗಳಲ್ಲಿ ಕಂಡುಬರುತ್ತವೆ. ಇದು ಮಧುಮೇಹವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ. 

2 /5

ಹಲಸಿನ ಬೀಜಗಳಲ್ಲಿ ಪೊಟ್ಯಾಸಿಯಮ್ ಸಾಕಷ್ಟು ಪ್ರಮಾಣದಲ್ಲಿ ಕಂಡುಬರುತ್ತದೆ. ಇದು ಹೃದಯವನ್ನು ಆರೋಗ್ಯವಾಗಿಡಲು ಸಹಾಯ ಮಾಡುತ್ತದೆ. ಇದರ ಬಳಕೆಯಿಂದ ಹೃದಯವು ಉತ್ತಮ ರೀತಿಯಲ್ಲಿ ಕೆಲಸ ಮಾಡಲು ಸಾಧ್ಯವಾಗುತ್ತದೆ. ಅಧಿಕ ರಕ್ತದೊತ್ತಡದ ಸಮಸ್ಯೆಯನ್ನು ಹೋಗಲಾಡಿಸುವಲ್ಲಿ ಹಲಸಿನ ಬೀಜ ಪ್ರಮುಖ ಪತ್ರ ವಹಿಸುತ್ತದೆ. 

3 /5

ವಿಟಮಿನ್ ಬಿ ಕಾಂಪ್ಲೆಕ್ಸ್ ಮತ್ತು ಕಾರ್ಬೋಹೈಡ್ರೇಟ್‌ಗಳು ಹಲಸಿನ ಬೀಜಗಳಲ್ಲಿ ಸಾಕಷ್ಟು ಪ್ರಮಾಣದಲ್ಲಿ ಕಂಡುಬರುತ್ತವೆ. ಇದರಿಂದಾಗಿ ಆಹಾರವು ಸುಲಭವಾಗಿ ಜೀರ್ಣವಾಗುತ್ತದೆ. ಇದರಿಂದ ದೇಹದಲ್ಲಿ ಕೊಬ್ಬು ಸಂಗ್ರಹವಾಗುವುದಿಲ್ಲ ಮತ್ತು ದೇಹವು ಫಿಟ್ ಆಗಿರುತ್ತದೆ. 

4 /5

ಜೀರ್ಣಾಂಗ ವ್ಯವಸ್ಥೆಯನ್ನು ಸದೃಢವಾಗಿಡುವಲ್ಲಿ ಹಲಸಿನ ಬೀಜಗಳು ಅದ್ಭುತವಾದ ಪಾತ್ರವನ್ನು ವಹಿಸುತ್ತವೆ. ನಾರಿನಂಶವು ಇದರಲ್ಲಿ ಯಥೇಚ್ಛವಾಗಿ ಕಂಡುಬರುತ್ತದೆ. ಇದರಿಂದಾಗಿ ಹೊಟ್ಟೆಗೆ ಸಂಬಂಧಿಸಿದ ಸಮಸ್ಯೆಗಳಿಂದ ಪರಿಹಾರ ಸಿಗುತ್ತದೆ. ಇದನ್ನು ನಿಯಮಿತವಾಗಿ ಸೇವಿಸುವುದರಿಂದ ಅಜೀರ್ಣ ಮತ್ತು ಮಲಬದ್ಧತೆಯಂತಹ ಸಮಸ್ಯೆಗಳೂ ದೂರವಾಗುತ್ತವೆ. 

5 /5

ರಕ್ತಹೀನತೆ ಇರುವವರು ಹಲಸಿನ ಬೀಜಗಳನ್ನು ಸೇವಿಸಲು ಸಲಹೆ ನೀಡುತ್ತಾರೆ. ಅದರಲ್ಲಿ ಕಬ್ಬಿಣವು ಸಾಕಷ್ಟು ಪ್ರಮಾಣದಲ್ಲಿ ಕಂಡುಬರುತ್ತದೆ. ಇದರಿಂದಾಗಿ ದೇಹದಲ್ಲಿ ರಕ್ತವು ರೂಪುಗೊಳ್ಳುತ್ತದೆ ಮತ್ತು ರಕ್ತಹೀನತೆಯನ್ನು ತಡೆಯುತ್ತದೆ. ವಿಶೇಷವಾಗಿ ಮಹಿಳೆಯರು ಇದನ್ನು ಸೇವಿಸಬೇಕು.   ( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. ZEE NEWS ಅದನ್ನು ಖಚಿತಪಡಿಸುವುದಿಲ್ಲ.)