ಸೌತ್ ಸಿನಿಮಾರಂಗದ ಖ್ಯಾತ ನಟಿ ಕಾಜಲ್ ಅಗರ್ವಾಲ್ ತಾಯಿಯಾಗಿದ್ದಾರೆ. ಕಾಜಲ್ ಇಂದು (ಏಪ್ರಿಲ್ 18) ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಸೌತ್ ಸಿನಿಮಾರಂಗದ ಖ್ಯಾತ ನಟಿ ಕಾಜಲ್ ಅಗರ್ವಾಲ್ ತಾಯಿಯಾಗಿದ್ದಾರೆ. ಕಾಜಲ್ ಇಂದು (ಏಪ್ರಿಲ್ 18) ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ. ಇತ್ತೀಚೆಗೆ ನಟಿ ಕಾಜಲ್ ಅಗರ್ವಾಲ್ ಅವರ ಸೀಮಂತ ಸಮಾರಂಭ ಸರಳವಾಗಿ ಮತ್ತು ಸಾಂಪ್ರದಾಯಿಕವಾಗಿ ನೆರವೇರಿತ್ತು. ಕಾಜಲ್ ಅಗರ್ವಾಲ್ ಅವರ ಸೀಮಂತಕ್ಕೆ ಕುಟುಂಬಸ್ಥರು ಹಾಗೂ ಆತ್ಮೀಯರು ಮಾತ್ರ ಭಾಗವಹಿಸಿದ್ದರು.
ಸೌತ್ ಸಿನಿಮಾರಂಗದ ಖ್ಯಾತ ನಟಿ ಕಾಜಲ್ ಅಗರ್ವಾಲ್ ತಾಯಿಯಾಗಿದ್ದಾರೆ. ಕಾಜಲ್ ಇಂದು (ಏಪ್ರಿಲ್ 18) ಖಾಸಗಿ ಆಸ್ಪತ್ರೆಯಲ್ಲಿ ಗಂಡು ಮಗುವಿಗೆ ಜನ್ಮ ನೀಡಿದ್ದಾರೆ.
ಮೊದಲ ಮಗುವನ್ನು ಕಾಜಲ್ ಮತ್ತು ಗೌತಮ್ ದಂಪತಿ ಸ್ವಾಗತಿಸಿದ್ದಾರೆ. ತಾಯಿ ಮತ್ತು ಮಗು ಇಬ್ಬರೂ ಆರೋಗ್ಯವಾಗಿದ್ದಾರೆ ಎಂದು ಕುಟುಂಬ ಮೂಲಗಳು ಮಾಹಿತಿ ನೀಡಿದೆ ಎಂದು ಆಂಗ್ಲ ಮಾಧ್ಯಮ ವರದಿ ಮಾಡಿದೆ. ದಂಪತಿಗೆ ಅಭಿಮಾನಿಗಳು ಮತ್ತು ಆಪ್ತರು ಶುಭಹಾರೈಸುತ್ತಿದ್ದಾರೆ.
ಸಾಮಾಜಿಕ ಜಾಲತಾಣದಲ್ಲಿ ಸಖತ್ ಆಕ್ಟೀವ್ ಆಗಿರುವ ಕಾಜಲ್ ಬೇಬಿ ಬಂಪ್ ಫೋಟೋಗಳನ್ನು ಶೇರ್ ಮಾಡುತ್ತಿದ್ದರು.
ನಟಿ ಕಾಜಲ್ ಅರ್ಗವಾಲ್ ಮಗಧೀರ, ಆರ್ಯ 2 ಸೇರಿದಂತೆ ತೆಲುಗು ಹಾಗೂ ತಮಿಳಿನಲ್ಲಿ ಅನೇಕ ಸೂಪರ್ ಹಿಟ್ ಸಿನಿಮಾಗಳನ್ನು ನೀಡಿದ್ದಾರೆ. 2020ರಲ್ಲಿ ಬಹುಕಾಲದ ಗೆಳೆಯ ಗೌತಮ್ ಕೀಚಲು ಜೊತೆ ಸಪ್ತಪದಿ ತುಳಿದರು.
ಕಾಜಲ್ ಮಗುವಿಗೆ ಜನ್ಮ ನೀಡಿದ ಬಗ್ಗೆ ನಟಿಯಾಗಲಿ ಅಥವಾ ಪತಿ ಗೌತಮ್ ಯಾವುದೇ ಮಾಹಿತಿ ಹಂಚಿಕೊಂಡಿಲ್ಲ.