Karnataka Assembly Elections 2023: ಕರ್ನಾಟಕ ವಿಧಾನಸಭಾ ಚುನಾವಣೆಗೆ ಬಹುನಿರೀಕ್ಷಿತ ಮತದಾನ ಪ್ರಕ್ರಿಯೆಗೆ ಆರಂಭವಾಗಿದೆ. ರಾಜ್ಯದ ವಿವಿಧ ಮತಗಟ್ಟೆಯಲ್ಲಿ ಮತದಾನ ಆರಂಭವಾಗಿದ್ದು, ಜನ ಮತದಾನಕ್ಕಾಗಿ ಆಗಮಿಸುತ್ತಿದ್ದಾರೆ. ಬೆಳಿಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನ ಪ್ರಕ್ರಿಯೆ ನಡೆಯಲಿದ್ದು ಮೇ 13ರಂದು ಶನಿವಾರ ಫಲಿತಾಂಶ ಪ್ರಕಟವಾಗಲಿದೆ.
Karnataka Assembly Elections 2023: ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಇಂದು (ಮೇ 10) ಒಂದೇ ಹಂತದಲ್ಲಿ ಮತದಾನ ನಡೆಯುತ್ತಿದೆ. ಈಗಾಗಲೇ ಬೆಂಗಳೂರು ಸೇರಿದಂತೆ ರಾಜ್ಯದ ಎಲ್ಲಾ ಜಿಲ್ಲೆ ಮತ್ತು ಹಳ್ಳಿಗಳಲ್ಲಿ ಶಾಂತಿಯುವ ಮತದಾನ ನಡೆಯುತ್ತಿದೆ. ಮೇ 13ರಂದು ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ. ಈ ಬಾರಿ ಮತದಾರ ಯಾರ ಕೈ ಹಿಡಿಯಲಿದ್ದಾನೆ ಅನ್ನೋದು ತೀವ್ರ ಕುತೂಹಲ ಮೂಡಿಸಿದೆ. ವಿಧಾನಸಭಾ ಚುನಾವಣೆಯ ಹಿನ್ನೆಲೆ ಕೆಲವು ಪ್ರಮುಖ ಮಾಹಿತಿ ಇಲ್ಲಿದೆ ನೋಡಿ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಆಧ್ಯಾತ್ಮ, ಜೀವನಶೈಲಿ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ರಾಜ್ಯದ 224 ಕ್ಷೇತ್ರಗಳ ವಿಧಾನಸಭಾ ಚುನಾವಣೆಗೆ ಬಹುನಿರೀಕ್ಷಿತ ಮತದಾನ ಪ್ರಕ್ರಿಯೆಗೆ ಆರಂಭವಾಗಿದೆ. ನಾಳೆ ನಡೆಯಲಿರುವ ಸಾರ್ವತ್ರಿಕ ಚುನಾವಣೆಯಲ್ಲಿ ರಾಜ್ಯ ಬಿಜೆಪಿ ಸರ್ಕಾರದ ಭ್ರಷ್ಟಾಚಾರ, ದುರಾಡಳಿತ, ಬೆಲೆಯೇರಿಕೆಯನ್ನು ಗಮನದಲ್ಲಿಟ್ಟುಕೊಂಡು ತಾವೆಲ್ಲರೂ ತೀರ್ಪು ನೀಡಬೇಕಿದೆ. ನಿಮ್ಮ ತೀರ್ಪು ಮುಂದಿನ ಐದು ವರ್ಷಗಳ ರಾಜ್ಯದ ಭವಿಷ್ಯ ನಿರ್ಧರಿಸುವುದರಿಂದ ಯಾವುದೇ ಆಸೆ, ಆಮಿಷಗಳಿಗೆ ಬಲಿಯಾಗದೆ ಪ್ರಜ್ಞಾವಂತಿಕೆಯಿಂದ ಮತ ನೀಡಿ. ನಿಮ್ಮ ಮತದ… pic.twitter.com/5LghmRvNzp — Siddaramaiah (@siddaramaiah) May 9, 2023
ರಾಜ್ಯದ ವಿವಿಧ ಮತಗಟ್ಟೆಯಲ್ಲಿ ಮತದಾನ ಆರಂಭವಾಗಿದ್ದು, ಜನರು ಮತದಾನಕ್ಕಾಗಿ ಆಗಮಿಸುತ್ತಿದ್ದಾರೆ. ಕನ್ನಡ ನಾಡಿನ ಸಮಸ್ತ ಮತದಾರ ಬಂಧುಗಳೆ ಚುನಾವಣೆ ಎನ್ನುವುದು ಪ್ರಜಾಪ್ರಭುತ್ವದ ಹಬ್ಬವಾಗಿದ್ದು, ಈ ಹಬ್ಬದಲ್ಲಿ ಈ ನಾಡಿನ ಪ್ರಜೆಗಳಾದ ನಾವು, ನೀವೆಲ್ಲರೂ ಮತದಾನ ಮಾಡುವುದು ನಮ್ಮೆಲ್ಲರ ಕರ್ತವ್ಯವಾಗಿದೆ. ಸುರಕ್ಷಿತ, ಸುಭದ್ರ ಮತ್ತು ಸಶಕ್ತ ಕರ್ನಾಟಕ ನಿರ್ಮಾಣ ಮಾಡಲು ನೀವೆಲ್ಲರೂ ತಪ್ಪದೇ ನಿಮ್ಮ ಹಕ್ಕು ಚಲಾಯಿಸಬೇಕು. ದಯವಿಟ್ಟು ನಾಳೆ (ಮೇ 10… — Basavaraj S Bommai (@BSBommai) May 9, 2023
ಬುಧವಾರ ಬೆಳಗ್ಗೆ 7 ಗಂಟೆಯಿಂದ ಸಂಜೆ 6ರವರೆಗೂ ಮತದಾನ ಪ್ರಕ್ರಿಯೆ ನಡೆಯಲಿದೆ. ಇಂದು ನನ್ನ ಸ್ವಕ್ಷೇತ್ರ ಶಿಗ್ಗಾಂವ್ ನಲ್ಲಿ ಮತದಾನಕ್ಕೆ ತೆರಳುವ ಮುನ್ನ ಹುಬ್ಬಳ್ಳಿಯ ಅಶೋಕ ನಗರದಲ್ಲಿರುವ ಶ್ರೀ ಮಾರುತಿ ದೇವಸ್ಥಾನಕ್ಕೆ ಕುಟುಂಬ ಸದಸ್ಯರೊಂದಿಗೆ ತೆರಳಿ ವಿಶೇಷ ಪೂಜೆ ಸಲ್ಲಿಸಿ ಪ್ರಾರ್ಥಿಸಿದೆನು. pic.twitter.com/5OYzc0lYLn — Basavaraj S Bommai (@BSBommai) May 10, 2023
ಮೇ 13ರ ಶನಿವಾರ ರಾಜ್ಯ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾಗಲಿದೆ. ಕರ್ನಾಟಕದ ಜನರನ್ನು ಅದರಲ್ಲೂ ಯುವ ಮತ್ತು ಮೊದಲ ಬಾರಿಗೆ ಮತ ಚಲಾಯಿಸುತ್ತಿರುವವರನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಂದು ಮತ ಹಾಕುವಂತೆ ಹಾಗು ಪ್ರಜಾಪ್ರಭುತ್ವದ ಹಬ್ಬವನ್ನು ಸಮೃದ್ಧಗೊಳಿಸುವಂತೆ ಒತ್ತಾಯಿಸುವೆ. — Narendra Modi (@narendramodi) May 10, 2023
ರಾಜ್ಯ ವಿಧಾನಸಭಾ ಚುನಾವಣೆಗೆ ಮತದಾನ ನಡೆಯುತ್ತಿದ್ದು, ತಪ್ಪದೇ ಮತದಾನ ಮಾಡುವಂತೆ ಪ್ರಧಾನಿ ಮೋದಿ ಜನರಿಗೆ ಮನವಿ ಮಾಡಿದ್ದಾರೆ. ಕರ್ನಾಟಕದ ಮತದಾರರಿಗೆ ಪ್ರಧಾನಮಂತ್ರಿ ಶ್ರೀ @narendramodi ಯವರ ಮನವಿ. pic.twitter.com/oSMm7TGMwp — BJP Karnataka (@BJP4Karnataka) May 8, 2023
ತಪ್ಪದೇ ಮತ ಚಲಾಯಿಸಿ, ಪ್ರಜಾಪ್ರಭುತ್ವದ ಈ ಸಂಭ್ರಮದ ಉತ್ಸವದಲ್ಲಿ ಪಾಲ್ಗೊಳ್ಳಿ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಹೇಳಿದ್ದಾರೆ. ನಾಡಿನ ಸಮಸ್ತ ಮತದಾರ ಬಂಧುಗಳಲ್ಲಿ, ಅದರಲ್ಲೂ ವಿಶೇಷವಾಗಿ ಮೊದಲ ಬಾರಿಗೆ ಮತದಾನ ಮಾಡುತ್ತಿರುವ ಯುವಕ ಯುವತಿಯರಲ್ಲಿ, ತಪ್ಪದೇ ಮತ ಚಲಾಯಿಸಿ, ಪ್ರಜಾಪ್ರಭುತ್ವದ ಈ ಸಂಭ್ರಮದ ಉತ್ಸವದಲ್ಲಿ ಪಾಲ್ಗೊಳ್ಳಿ ಎಂದು ಕೋರುತ್ತೇನೆ. ನಾಡಿನ ಉಜ್ವಲ ಭವಿಷ್ಯಕ್ಕಾಗಿ, ಸರ್ವಾಂಗೀಣ ಅಭಿವೃದ್ಧಿಗಾಗಿ ತಪ್ಪದೇ ಎಲ್ಲರೂ ಮತ ಚಲಾಯಿಸಿ ಎಂದು ಈ ಮೂಲಕ… — B.S.Yediyurappa (@BSYBJP) May 10, 2023