Karnataka Legislative Assembly election 2023: ರಾಜ್ಯದಲ್ಲಿ ಚುನಾವಣಾ ನೀತಿಸಂಹಿತೆ ಜಾರಿಯಾದ ದಿನದಿಂದ ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ಕೋಟಿ ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಬೆಂಗಳೂರು: ರಾಜ್ಯ ವಿಧಾನಸಭಾ ಚುನಾವಣೆ ಘೋಷಣೆಯಾದ ಬೆನ್ನಲ್ಲೇ ಪ್ರಮುಖ ರಾಜಕೀಯ ಪಕ್ಷಗಳು ಮತದಾರರನ್ನು ಸೆಳೆಯಲು ಇನ್ನಿಲ್ಲದ ಕಸರತ್ತು ನಡೆಸುತ್ತಿವೆ. ವಿವಿಧ ರೀತಿಯ ಆಮಿಷ ಒಡ್ಡುವ ಮೂಲಕ ಮತಗಳನ್ನು ಬುಟ್ಟಿಗೆ ಹಾಕಿಕೊಳ್ಳಲು ಮಾಸ್ಟರ್ ಪ್ಲಾನ್ ಮಾಡುತ್ತಿವೆ. ರಾಜ್ಯದಲ್ಲಿ ಚುನಾವಣಾ ನೀತಿಸಂಹಿತೆ ಜಾರಿಯಾದ ದಿನದಿಂದ ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ಕೋಟಿ ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಆಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು Twitter, Facebook, Youtube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.
ರಾಜ್ಯದಲ್ಲಿ ಚುನಾವಣಾ ನೀತಿಸಂಹಿತೆ ಜಾರಿಯಾದ ದಿನದಿಂದ ಚುನಾವಣಾ ಅಕ್ರಮಕ್ಕೆ ಸಂಬಂಧಿಸಿದಂತೆ ಕೋಟಿ ಕೋಟಿ ಮೌಲ್ಯದ ನಗದು, ಮದ್ಯ, ಡ್ರಗ್ಸ್, ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಳೆದ ವಾರ ಅಕ್ರಮವಾಗಿ ಸಾಗಾಟ ಮಾಡುತ್ತಿದ್ದ 27.38 ಕೋಟಿ ರೂ. ನಗದು, 26.38 ಕೋಟಿ ರೂ. ಮೌಲ್ಯದ ಮದ್ಯ, 87.8 ಲಕ್ಷ ರೂ. ಮೌಲ್ಯದ ಡ್ರಗ್ಸ್, 9.87 ಕೋಟಿ ರೂ. ಮೌಲ್ಯದ 25.24 ಕೆಜಿ ಚಿನ್ನ ಮತ್ತು ಇತರ ಬೆಲೆಬಾಳುವ ವಸ್ತುಗಳನ್ನು ವಶಪಡಿಸಿಕೊಂಡಿವೆ ಎಂದು ಚುನಾವಣಾ ಆಯೋಗದ ಬುಲೆಟಿನ್ ತಿಳಿಸಿದೆ.
ಗುರುವಾರ ನಿಪ್ಪಾಣಿ, ಭದ್ರಾವತಿ, ಗದಗ ಮತ್ತು ನರಗುಂದದಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ 4.45 ಕೋಟಿ ರೂ. ನಗದು ವಶಕ್ಕೆ ತೆಗೆದುಕೊಳ್ಳಲಾಗಿದೆ.
ಇದಲ್ಲದೇ ಸುಮಾರು 1.89 ಕೋಟಿ ರೂ. ಮೌಲ್ಯದ 62,826 ಲೀಟರ್ ಮದ್ಯವನ್ನು ಅಬಕಾರಿ ಇಲಾಖೆ ಜಪ್ತಿ ಮಾಡಿದೆ. ಚುನಾವಣಾ ಅಕ್ರಮಗಳಲ್ಲಿ ಭಾಗಿಯಾದ ಆರೋಪದಡಿ ನೂರಾರು ವಾಹನಗಳನ್ನು ಮುಟ್ಟುಗೋಲು ಹಾಕಿಕೊಳ್ಳಲಾಗಿದೆ
ಧಾರವಾಡ ಜಿಲ್ಲೆಯಲ್ಲಿ ಸ್ಟಾಟಿಕ್ ಸರ್ವೆಲೆನ್ಸ್ ತಂಡವು ಸುಮಾರು 45 ಲಕ್ಷ ರೂ. ಮೌಲ್ಯದ 725 ಗ್ರಾಂ ಚಿನ್ನವನ್ನು ವಶಪಡಿಸಿಕೊಂಡರೆ, ಫ್ಲೈಯಿಂಗ್ ಸ್ಕ್ವಾಡ್ ತಂಡವು ಬೆಂಗಳೂರು ನಗರದ ಬ್ಯಾಟರಾಯನಪುರ ಕ್ಷೇತ್ರದಲ್ಲಿ 34 ಲಕ್ಷಕ್ಕೂ ಹೆಚ್ಚು ಮೌಲ್ಯದ ಉಚಿತ ವಸ್ತುಗಳನ್ನು ವಶಪಡಿಸಿಕೊಂಡಿದೆ ಎಂದು ತಿಳಿದುಬಂದಿದೆ.