Guru Vakri Effect 2023: ವೈದಿಕ ಜ್ಯೋತಿಷ್ಯದ ಪ್ರಕಾರ, ಕಾಲಕಾಲಕ್ಕೆ ಗ್ರಹಗಳ ಹಿಮ್ಮುಖ ಚಲನೆಯು ಎಲ್ಲಾ ರಾಶಿಗಳ ಜೀವನದ ಮೇಲೆ ಪರಿಣಾಮ ಬೀರುತ್ತದೆ. ಸೆಪ್ಟೆಂಬರ್ 4 ರ ಬಳಿಕ ಗುರುವು ಮೇಷ ರಾಶಿಯಲ್ಲಿ ಹಿಮ್ಮುಖ ಸ್ಥಿತಿಯಲ್ಲಿ ಚಲಿಸುತ್ತಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://t.co/lCSPNypK2U
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಗುರು ಗ್ರಹದ ಹಿಮ್ಮುಖ ಚಲನೆಯಿಂದಾಗಿ, ಕೆಲ ರಾಶಿಗಳಿಗೆ ಅಪಾರ ಧನಲಾಭವುಂಟಾಗಲಿದೆ. ಜೊತೆಗೆ ಶುಭ ಫಲಿತಾಂಶಗಳು ಸಿಗಲಿದೆ. ಇನ್ನು ಗುರುವು 4 ತಿಂಗಳ ಕಾಲ ಹಿಮ್ಮುಖ ಸ್ಥಿತಿಯಲ್ಲಿ ಚಲಿಸಲಿದೆ. ಹೀಗಿರುವಾಗ ರಾಶಿಚಕ್ರದ 3 ರಾಶಿಗಳ ಜನರು ವಿಶೇಷ ಫಲಿತಾಂಶಗಳನ್ನು ಪಡೆಯುತ್ತಾರೆ. ಆ ಜನರ ಎಲ್ಲಾ ಇಷ್ಟಾರ್ಥಗಳು ಈಡೇರುತ್ತವೆ. ಅಂತಹ ರಾಶಿಗಳು ಯಾವುವು ಎಂದು ತಿಳಿಯೋಣ.
ಸಿಂಹ ರಾಶಿ: ಮೇಷ ರಾಶಿಯಲ್ಲಿ ಗುರುವಿನ ಹಿಮ್ಮುಖ ಚಲನೆಯು ಸಿಂಹ ರಾಶಿಯ ಜನರ ಜೀವನದಲ್ಲಿ ವಿಶೇಷವಾಗಿ ಮಂಗಳಕರವಾಗಿರುತ್ತದೆ. ಈ ರಾಶಿಯ ಒಂಬತ್ತನೇ ಮನೆಯಲ್ಲಿ ಗುರುವು ಹಿಮ್ಮುಖವಾಗಿದೆ. ಜೊತೆಗೆ ಐದನೇ ಮತ್ತು ಎಂಟನೇ ಮನೆಯ ಅಧಿಪತಿಯಾಗಿದ್ದಾರೆ. ಈ ಸಂದರ್ಭದಲ್ಲಿ ಕಲ್ಯಾಣ ಯೋಗ ಇರಲಿದೆ. ಅದೃಷ್ಟವು ನಿಮಗೆ ಅನುಕೂಲಕರವಾಗಿರುತ್ತದೆ. ಬಾಕಿ ಉಳಿದಿರುವ ಕೆಲಸಗಳು ಪೂರ್ಣಗೊಳ್ಳಲಿವೆ. ಸಂಪತ್ತು ಹೆಚ್ಚಾಗುವ ಸಾಧ್ಯತೆಗಳಿವೆ. ವಿದ್ಯಾರ್ಥಿಗಳಿಗೆ ಇದು ಉತ್ತಮ ಸಮಯ.
ಧನು ರಾಶಿ: ಜ್ಯೋತಿಷ್ಯಶಾಸ್ತ್ರದ ಪ್ರಕಾರ, ಧನು ರಾಶಿಯ ಹಿಮ್ಮುಖ ಚಲನೆಯು ಧನು ರಾಶಿಯ ಜನರಿಗೆ ಅನುಕೂಲಕರವಾಗಿರುತ್ತದೆ. ಈ ಅವಧಿಯಲ್ಲಿ ಆತ್ಮವಿಶ್ವಾಸ ಹೆಚ್ಚುತ್ತದೆ. ವ್ಯಕ್ತಿತ್ವವು ಸುಧಾರಿಸುತ್ತದೆ. ಹಣ ಉಳಿತಾಯ ಮಾಡುವಿರಿ, ಕೈ ಇಟ್ಟ ಪ್ರತೀ ಕೆಲಸದಲ್ಲಿ ಯಶಸ್ವಿಯಾಗುತ್ತೀರಿ.
ಮಕರ ರಾಶಿ: ಮಕರ ರಾಶಿಯ ಜನರಿಗೆ, ಮೇಷ ರಾಶಿಯಲ್ಲಿ ಗುರು ಹಿಮ್ಮುಖ ಚಲನೆಯು ಪ್ರಯೋಜನಕಾರಿಯಾಗಿದೆ. ಈ ಅವಧಿಯಲ್ಲಿ ಧೈರ್ಯ ಮತ್ತು ಶೌರ್ಯವು ಹೆಚ್ಚಾಗುತ್ತದೆ. ಪೂರ್ವಿಕರ ಆಸ್ತಿಯಿಂದ ಲಾಭವನ್ನು ಪಡೆಯುತ್ತೀರಿ. ಕೌಟುಂಬಿಕ ಸಂಬಂಧಗಳ ದೃಷ್ಟಿಯಿಂದಲೂ ಇದು ಬಹಳ ಒಳ್ಳೆಯ ಸಮಯ. ಐಷಾರಾಮಿ ವಸ್ತು ಇತ್ಯಾದಿಗಳನ್ನು ಖರೀದಿಸುವ ಸಾಧ್ಯತೆ ಇದೆ.
(ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಇದನ್ನು ಖಚಿತಪಡಿಸುವುದಿಲ್ಲ.)