Lakshmi Narayana Rajyog 2024: ಜನವರಿ 18ಕ್ಕೆ ಲಕ್ಷ್ಮಿನಾರಾಯಣ ರಾಜಯೋಗ ರಚನೆ, ಬುಧ-ಶುಕ್ರರ ಕೃಪೆಯಿಂದ ಈ ಜನರಿಗೆ ಅಪಾರ ಧನಪ್ರಾಪ್ತಿ!

Lakshmi Narayana Rajyog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲೇ ಲಕ್ಷ್ಮಿ ನಾರಾಯಣ ರಾಜಯೋಗ ರಚನೆಯಾಗುತ್ತಿದ್ದು, ಇದರಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಧನದಾತ ಶುಕ್ರ ಹಾಗೂ ಬುಧನ ಕೃಪೆಯಿದ ಅಪಾರ ಧನ-ಸಂಪತ್ತು ಹರಿದುಬರಲಿದೆ.  (Spiritual News In Kannada)
 

ಬೆಂಗಳೂರು: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಜನವರಿ 18 ರಂದು ಧನು ರಾಶಿಯಲ್ಲಿ ಧನದಾತ ಶುಕ್ರ ಹಾಗೂ ಬುಧನ ಮೈತ್ರಿ ನೆರವೇರಲಿದೆ. ಬುಧ ಹಾಗೂ ಶುಕ್ರರ ಈ ಮೈತ್ರಿಯಿಂದ ಧನು ರಾಶಿಯಲ್ಲಿ ಲಕ್ಷ್ಮಿ ನಾರಾಯಣ ರಾಜಯೋಗ ರಚನೆಯಾಗಲಿದೆ. ಈ ರಾಜಯೋಗ ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವ ಬೀರಲಿದ್ದು, ಮೂರು ರಾಶಿಗಳ ಜನರ ಮೇಲೆ ಬುಧ-ಶುಕ್ರರ ಅಪಾರ ಕೃಪೆಯಿಂದ ಭಾರಿ ಧನವೃಷ್ಟಿಯಾಗಲಿದೆ. ಸ್ಥಾನಮಾನ ಘನತೆ ಗೌರವ ಪ್ರಾಪ್ತಿಯಾಗಲಿದೆ. ಆ ಅದೃಷ್ಟವಂತ ರಾಶಿಗಳು ಯಾವುವು ತಿಳಿದುಕೊಳ್ಳೋಣ ಬನ್ನಿ, (Spiritual News In Kannada)

 

ಇದನ್ನೂ ಓದಿ-Gajkesari Rajyog 2024: ಹದಿನೈದು ದಿನಗಳ ಬಳಿಕ 'ಗಜಕೇಸರಿ ರಾಜಯೋಗ' ಈ ರಾಶಿಗಳ ಜನರ ಜೀವನದಲ್ಲಿ ಗೋಲ್ಡನ್ ಟೈಮ್ ಆರಂಭ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /5

Lakshmi Narayana Rajyog 2024: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಶೀಘ್ರದಲ್ಲೇ ಲಕ್ಷ್ಮಿ ನಾರಾಯಣ ರಾಜಯೋಗ ರಚನೆಯಾಗುತ್ತಿದ್ದು, ಇದರಿಂದ ಕೆಲ ರಾಶಿಗಳ ಜನರ ಜೀವನದಲ್ಲಿ ಧನದಾತ ಶುಕ್ರ ಹಾಗೂ ಬುಧನ ಕೃಪೆಯಿದ ಅಪಾರ ಧನ-ಸಂಪತ್ತು ಹರಿದುಬರಲಿದೆ.  (Spiritual News In Kannada)

2 /5

ವೃಶ್ಚಿಕ ರಾಶಿ: ಈ ರಾಜಯೋಗ ರಚನೆ ನಿಮ್ಮ ಪಾಲಿಗೆ ಆರ್ಥಿಕ ದೃಷ್ಟಿಯಿಂದ ಅತ್ಯಂತ ಶುಭವಾಗಿರಲಿದೆ. ಇದು ನಿಮ್ಮ ಗೋಚರ ಜಾತಕದ ಧನ ಹಾಗೂ ವಾಣಿಯ ಭಾವದಲ್ಲಿ ರಚನೆಯಾಗುತ್ತಿದೆ. ಹೀಗಾಗಿ ಕೆಲಸ ವ್ಯಾಪಾರದಲ್ಲಿ ನಿಮಗೆ ಆಕಸ್ಮಿಕ ಧನ ಲಾಭ ಉಂಟಾಗಲಿದೆ. ವ್ಯಾಪಾರಿಗಳಿಗೆ ಅವರಿಗೆ ಬರಬೇಕಾದ ಹಣ ಸಿಗಲಿದೆ. ಇದರಿಂದ ಈ ಅವಧಿಯಲ್ಲಿ ನಿಮ್ಮ ಆರ್ಥಿಕ ಸ್ಥಿತಿ ಸಾಕಷ್ಟು ಬಲಿಷ್ಠವಾಗಲಿದೆ. 

3 /5

ಕುಂಭ ರಾಶಿ: ನಿಮ್ಮ ಗೋಚರ ಜಾತಕದ ಆದಾಯ ಹಾಗೂ ಲಾಭ ಸ್ಥಾನದಲ್ಲಿ ಈ ಲಕ್ಷ್ಮಿನಾರಾಯಣ ರಾಜಯೋಗ ರಚನೆಯಾಗುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮ್ಮ ಆದಾಯ ಹಲವು ಪಟ್ಟು ಹೆಚ್ಚಾಗಲಿದೆ. ಈ ಅವಧಿಯಲ್ಲಿ ಯಾವುದಾದರೊಂದು ಯೋಜನೆಯಲ್ಲಿ ನೀವು ಹಣವನ್ನು ಹೂಡಿಕೆ ಮಾಡಿದರೆ, ಅದು ಮುಂದೆ ಹೋಗಿ ನಿಮಗೆ ಸಾಕಷ್ಟು ಲಾಭವನ್ನು ತಂದುಕೊಡಲಿದೆ. ನಿಮ್ಮ ಆಸೆ ಆಕಾಂಕ್ಷೆಗಳು ಈಡೇರಲಿದ್ದು, ಹೊಸ ಹೊಸ ಮೂಲಗಳಿಂದ ನೀವು ಹಣವನ್ನು ಸಂಪಾದಿಸುವಿರಿ. ಮಕ್ಕಳಿಗೆ ಸಂಬಂಧಿಸಿದಂತೆ ಶುಭ ಸಮಾಚಾರ ಪ್ರಾಪ್ತಿಯಾಗಲಿದೆ. ಮಗುವಿನ ನಿರೀಕ್ಷೆ ಇರುವವರಿಗೆ ಸಂತಾನ ಭಾಗ್ಯ ಪ್ರಾಪ್ತಿಯಾಗಲಿದೆ. 

4 /5

ಮೀನ ರಾಶಿ: ನಿಮ್ಮ ಗೋಚರ ಜಾತಕದ ಕರ್ಮ ಭಾವದಲ್ಲಿ ಲಕ್ಷ್ಮಿನಾರಾಯಣ ರಾಜಯೋಗ ನಿರ್ಮಾಣಗೊಳ್ಳಲಿರುವ ಕಾರಣ ನಿಮ್ಮ ಜೀವನದಲ್ಲಿ ಒಳ್ಳೆಯ ದಿನಗಳು ಆರಂಭಗೊಳ್ಳಲಿವೆ. ನೌಕರ ವರ್ಗದ ಜನರ ವೇತನ ಹಾಗೂ ಹುದ್ದೆ ಎರಡರಲ್ಲೂ ಉನ್ನತಿ ಇರಲಿದೆ. ಘನತೆ-ಗೌರವ-ಧನ ಎಲ್ಲವೂ ಹೆಚ್ಚಾಗಲಿದೆ. ನಿರುದ್ಯೋಗಿಗಳಿಗೆ ನೌಕರಿ ಭಾಗ್ಯ ಪ್ರಾಪ್ತಿಯಾಗಲಿದೆ. ವ್ಯಾಪಾರವರ್ಗದ ಜನರಿಗೆ ಈ ಅವಧಿಯಲ್ಲಿ ಭಾರಿ ಧನಲಾಭವಾಗಲಿದ್ದು, ವ್ಯಾಪಾರ ವಿಸ್ತರಣೆಯ ಅವರ ಕನಸು ನನಸಾಗಲಿದೆ. 

5 /5

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)