Surya Grahan: ಇನೈದು ದಿನಗಳಲ್ಲಿ ವರ್ಷದ ಕೊನೆಯ ಸೂರ್ಯಗ್ರಹಣ: ಈ ರಾಶಿಯವರಿಗೆ ಭಾರೀ ಅದೃಷ್ಟ

Surya Grahan: ಇನ್ನೂ ಐದು ದಿನಗಳಲ್ಲಿ ಎಂದರೆ ಅಕ್ಟೋಬರ್ 14, 2023ರಂದು ವರ್ಷದ ಕೊನೆಯ ಸೂರ್ಯಗ್ರಹಣ ಸಂಭವಿಸಲಿದೆ. ಇದರ ಪರಿಣಾಮ ಎಲ್ಲಾ 12 ರಾಶಿಯವರ ಮೇಲೂ ಕಂಡು ಬರುತ್ತದೆ. ಆದರೂ, ಈ ಸಮಯವನ್ನು ಐದು ರಾಶಿಯವರಿಗೆ ಅದೃಷ್ಟದ ಸಮಯ ಎಂದು ಹೇಳಲಾಗುತ್ತಿದೆ. 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://tinyurl.com/7jmvv2nz

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.

1 /9

ಹಿಂದೂ ಧರ್ಮದಲ್ಲಿ ಪ್ರಮುಖ ಖಗೋಳ ವಿದ್ಯಮಾನಗಳಾದ ಸೂರ್ಯ-ಚಂದ್ರ ಗ್ರಹಣಗಳಿಗೂ ವಿಶೇಷ ಪ್ರಾಮುಖ್ಯತೆ ಇದೆ. ಈ ವರ್ಷದ ಕೊನೆಯ ಸೂರ್ಯಗ್ರಹಣವು 2023ರ ಅಕ್ಟೋಬರ್ 14ರಂದು ಶನಿವಾರದ ದಿನ ಸಂಭವಿಸಲಿದೆ. 

2 /9

ಈ ಗ್ರಹಣದಲ್ಲಿ ಮೊದಲ ಬಾರಿಗೆ ರಿಂಗ್ ಆಫ್ ಫೈರ್ ಗೋಚರಿಸುತ್ತದೆ. ಹಾಗಾಗಿ ಇದನ್ನು ವಿಶೇಷ ಸೂರ್ಯ ಗ್ರಹಣ ಎಂದು ಕರೆಯಲಾಗುತ್ತದೆ. 

3 /9

ಪ್ರಮುಖ ಖಗೋಳ ವಿದ್ಯಮಾನಗಳಲ್ಲಿ ಒಂದಾದ ಸೂರ್ಯ ಗ್ರಹಣಕ್ಕೆ ಜ್ಯೋತಿಷ್ಯ ಶಾಸ್ತ್ರದಲ್ಲಿಯೂ ವಿಶೇಷ ಮಹತ್ವವಿದೆ. ಜ್ಯೋತಿಷ್ಯ ಶಾಸ್ತ್ರದ ಪ್ರಕಾರ, ಸೂರ್ಯ ಗ್ರಹಣದ ಧನಾತ್ಮಕ ಮತ್ತು ಋಣಾತ್ಮಕ ಪರಿಣಾಮಗಳು ದ್ವಾದಶ ರಾಶಿಗಳ ಮೇಲೆ ಕಂಡು ಬರುತ್ತದೆ. 

4 /9

ಅಕ್ಟೋಬರ್ 14, 2023ರಂದು ಸಂಭವಿಸಲಿರುವ ವರ್ಷದ ಕೊನೆಯ ಸೂರ್ಯ ಗ್ರಹಣವು ಐದು ರಾಶಿಯವರಿಗೆ ಭಾರೀ ಅದೃಷ್ಟವನ್ನು ತರಲಿದ್ದು ಸಂಪತ್ತಿನ ಹೊಳೆಯನ್ನೇ ಹರಿಸಲಿದೆ ಎಂದು ಹೇಳಲಾಗುತ್ತಿದೆ. ಆ ಅದೃಷ್ಟದ ರಾಶಿಗಳೆಂದರೆ... 

5 /9

ವರ್ಷದ ಕೊನೆಯ ಸೂರ್ಯ ಗ್ರಹಣವು ಮಿಥುನ ರಾಶಿಯವರ ಜೀವನದಲ್ಲಿ ಹಣಕಾಸಿನ ಸ್ಥಿತಿಯನ್ನು ಸುಧಾರಿಸಲಿದೆ. ಈ ಸಮಯದಲ್ಲಿ ವೃತ್ತಿ, ವ್ಯವಹಾರದಲ್ಲಿ ಪ್ರಗತಿಯನ್ನೂ ಕಾಣಬಹುದು. 

6 /9

ವರ್ಷದ ಕೊನೆಯ ಸೂರ್ಯ ಗ್ರಹಣವು ಕರ್ಕಾಟಕ ರಾಶಿಯವರ ಜೀವನದಲ್ಲಿ ಒಳ್ಳೆಯ ದಿನಗಳನ್ನು ತರಲಿದೆ. ಈ ಸಮಯದಲ್ಲಿ ವ್ಯಾಪಾರ-ವ್ಯವಹಾರದಲ್ಲಿ ಏಳ್ಗೆ ಕಂಡು ಬರಲಿದ್ದು, ನಿಮ್ಮ ಮಾನಸಿಕ ಒತ್ತಡ ಕಡಿಮೆ ಆಗಲಿದೆ. 

7 /9

ಅಕ್ಟೋಬರ್ 14ರಂದು ಸಂಭವಿಸಲಿರುವ ಈ ವರ್ಷದ ಅಂತಿಮ ಸೂರ್ಯ ಗ್ರಹಣವು ವೃಶ್ಚಿಕ ರಾಶಿಯವರಿಗೆ ಕೆಲಸದಲ್ಲಿ ಯಶಸ್ಸು, ವ್ಯಾಪಾರದಲ್ಲಿ ಲಾಭವನ್ನು ನೀಡುತ್ತದೆ. ನಿಮ್ಮ ಕೆಲಸ ಕಾರ್ಯಗಳಲ್ಲಿ ಸಂಗಾತಿಯು ಬೆನ್ನೆಲುಬಾಗಿ ನಿಲ್ಲಲಿದ್ದಾರೆ. 

8 /9

ಸೂರ್ಯ ಗ್ರಹಣದ ಶುಭ ಪರಿಣಾಮದ ಫಲವಾಗಿ ಧನು ರಾಶಿಯವರು ಉದ್ಯೋಗ ಕ್ಷೇತ್ರದಲ್ಲಿ ಪ್ರಗತಿಯನ್ನು ಕಾಣುವಿರಿ. ಇದಲ್ಲದೆ, ಸ್ವಂತ ವ್ಯಾಪಾರ ಮಾಡುವವರಿಗೂ ಶುಭ ಸಮಯ. 

9 /9

ಸೂರ್ಯ ಗ್ರಹಣದ ಪರಿಣಾಮವಾಗಿ ಮಕರ ರಾಶಿಯವರಿಗೆ ಹಿಂದೆ ಮಾಡಿದ ಹೂಡಿಕೆಗಳಿಂದ ಲಾಭವಾಗಲಿದೆ. ಸಮಾಜದಲ್ಲಿ ಕೀರ್ತಿ-ಗೌರವವನ್ನೂ ಗಳಿಸುವಿರಿ.  ಸೂಚನೆ: ಇಲ್ಲಿ ನೀಡಲಾದ ಎಲ್ಲಾ ಮಾಹಿತಿಯು ಸಾಮಾಜಿಕ ಮತ್ತು ಧಾರ್ಮಿಕ ನಂಬಿಕೆಗಳನ್ನು ಆಧರಿಸಿದೆ. Zee ಮೀಡಿಯಾ ಇದನ್ನು ಖಚಿತಪಡಿಸುವುದಿಲ್ಲ.