Uric Acid Control Tips :ಹೆಚ್ಚುತ್ತಿರುವ ಯೂರಿಕ್ ಆಸಿಡ್ ಅನ್ನು ನಿಯಂತ್ರಿಸಬೇಕಾದರೆ ನಾವು ಸೇವಿಸುವ ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸಬೇಕು.
Uric Acid Control Tips : ದೇಹದಲ್ಲಿ ಪ್ಯೂರಿನ್ ಎಂಬ ವಸ್ತುವು ವಿಭಜನೆಯಾದಾಗ ರೂಪುಗೊಳ್ಳುವ ರಾಸಾಯನಿಕವೇ ಯೂರಿಕ್ ಆಸಿಡ್. ಇದರ ಪ್ರಮಾಣ ದೇಹದಲ್ಲಿ ಹೆಚ್ಚಾದಾಗ ಅದು ಸಂಧು ಸಂಧುಗಳಲ್ಲಿ ಹರಳಿನ ರೂಪದಲ್ಲಿ ಸೇರಿಕೊಳ್ಳುತ್ತವೆ. ಇದು ವಿಪರೀತ ನೋಪ್ವಿಗೆ ಕಾರಣವಾಗುತ್ತದೆ. ಚಳಿಗಾಲದಲ್ಲಿಯಂತೂ ಇದು ಅತಿಯಾಗಿ ಬಾಧಿಸುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಯೂರಿಕ್ ಆಸಿಡ್ ಹೆಚ್ಚಾದಾಗ ಮೊದಲು ಕೈ ಕಾಲುಗಳ ಗಂಟು, ಕೀಲುಗಳು ಊದಿ ಕೊಳ್ಳುತ್ತದೆ. ಜೊತೆಗೆ ವಿಪರೀತ ನೋವು ಕಾಣಿಸಿಕೊಳ್ಳುತ್ತದೆ. ಚಳಿಗಾಲದಲ್ಲಿ ಈ ನೋವು ಸ್ವಲ್ಪ ಹೆಚ್ಚಾಗಿಯೇ ಕಾಡುತ್ತದೆ.
ಕೆಲವು ಆಹಾರ ಪದಾರ್ಥಗಳನ್ನು ಸರಿಯಾದ ರೀತಿಯಲ್ಲಿ ಮತ್ತು ಸರಿಯಾದ ಪ್ರಮಾಣದಲ್ಲಿ ಸೇವಿಸುವ ಮೂಲಕ ಯೂರಿಕ್ ಆಸಿಡ್ ಅನ್ನು ಸುಲಭವಾಗಿ ಕರಗಿಸಬಹುದು.
ಕೆಲವು ಮನೆ ಮದ್ದು ಯುರಿಕ್ ಆಸಿಡ್ ಅನ್ನು ಕರಗಿಸಿ ಮೂತ್ರದ ಮೂಲಕವೇ ದೇಹದಿಂದ ಹೊರ ಹೋಗಲು ಸಹಾಯ ಮಾಡುತ್ತದೆ.
ಪ್ರತಿದಿನ ನಿಂಬೆ ರಸ ಕುಡಿಯುವುದರಿಂದ ರಕ್ತದಲ್ಲಿನ ಯೂರಿಕ್ ಆಸಿಡ್ ನ್ನು ಕಡಿಮೆ ಮಾಡಬಹುದು. ಇದು ಸಂಧಿವಾತದ ಅಪಾಯವನ್ನು ಕಡಿಮೆ ಮಾಡಬಹುದು ಎಂದು ಕೆಲವು ಅಧ್ಯಯನಗಳು ತೋರಿಸಿವೆ.
ನಿಂಬೆ ಹಣ್ಣಿನಲ್ಲಿ ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ ಸಿ ಕಂಡುಬರುತ್ತವೆ. ಇದು ದೇಹದಲ್ಲಿ ಯೂರಿಕ್ ಆಸಿಡ್ ಅನ್ನು ನಿಯಂತ್ರಣದಲ್ಲಿ ಇಟ್ಟುಕೊಳ್ಳಲು ಸಹಾಯ ಮಾಡುತ್ತದೆ.
ಒಂದು ಲೋಟ ನೀರು, 1 ಟೀಸ್ಪೂನ್ ನಿಂಬೆ ರಸ ಮತ್ತು 5 ರಿಂದ 10 ತುಳಸಿ ಎಲೆಗಳನ್ನು ಹಾಕಿ ಚೆನ್ನಾಗಿ ಕುದಿಸಬೇಕು. ನಂತರ ಈ ನೀರನ್ನು ಹಾಗೆಯೇ ತಣ್ಣಗಾಗಲು ಬಿಡಿ. ಸ್ವಲ್ಪ ಜೇನುತುಪ್ಪ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ ಖಾಲಿ ಹೊಟ್ಟೆಯಲ್ಲಿ ಸೇವಿಸಬೇಕು.
ನಿತ್ಯ ಈ ನೀರನ್ನು ಕುಡಿಯುತ್ತಾ ಬಂದರೆ ಯೂರಿಕ್ ಆಸಿಡ್ ಕರಗುವುದರೊಂದಿಗೆ ಕಿಡ್ನಿ ಸ್ಟೋನ್ ಕೂಡಾ ಪುಡಿಯಾಗುವುದು. ಒಂದೇ ಔಷಧಿಯಲ್ಲಿ ಎರಡು ಕಾಯಿಲೆಯನ್ನು ಸುಲಭವಾಗಿ ಗುಣಪಡಿಸಬಹುದು.
ಸೂಚನೆ :ಇಲ್ಲಿ ನೀಡಲಾದ ಮಾಹಿತಿ ಮತ್ತು ಮನೆಮದ್ದುಗಳು ಸಾಮಾನ್ಯ ಮಾಹಿತಿಯನ್ನು ಆಧರಿಸಿವೆ. ZEE KANNADA NEWS ಅದನ್ನು ಅನುಮೋದಿಸುವುದಿಲ್ಲ.