ಲೋಕಸಭಾ ಚುನಾವಣೆ: ಮತ ಚಲಾಯಿಸಿದ ಹಲವು ನಾಯಕರು See Pics

11 ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ 95 ಲೋಕಸಭಾ ಕ್ಷೇತ್ರಗಳಲ್ಲಿ ಲೋಕಸಭಾ ಚುನಾವಣೆಯ ಎರಡನೇ ಹಂತದ ಮತದಾನ ಗುರುವಾರ ಬೆಳಿಗ್ಗೆ 7 ಗಂಟೆಯಿಂದ ಆರಂಭವಾಗಿದೆ.

     

1 /7

ಬೆಂಗಳೂರು ಉತ್ತರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಿ.ವಿ. ಸದಾನಂದ ಗೌಡ  ಭೂಪಸಂದ್ರ ಮತಗಟ್ಟೆ ಸಂಖ್ಯೆ 56ರಲ್ಲಿ ಕುಟುಂಬ ಸದಸ್ಯರ ಜೊತೆಗೆ ಮತದಾನ ಮಾಡಿದರು.

2 /7

ಮುಖ್ಯಮಂತ್ರಿ ಹೆಚ್.ಡಿ. ಕುಮಾರಸ್ವಾಮಿ ಅವರು ಪತ್ನಿ ಅನಿತಾ ಕುಮಾರಸ್ವಾಮಿ ಹಾಗೂ ಮಗ ನಿಖಿಲ್ ಕುಮಾರಸ್ವಾಮಿಯವರೊಂದಿಗೆ ಬೆಂಗಳೂರು ಗ್ರಾಮೀಣಾ ಲೋಕಸಭಾ ಕ್ಷೇತ್ರದ ಕೇತಿಗಾನಹಳ್ಳಿ ಮತಗಟ್ಟೆಯಲ್ಲಿ ಮತ ಚಲಾಯಿಸಿದರು. (Pic Courtesy: ANI)

3 /7

ಉಪಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ ಹಾಗೂ ಕನ್ನಿಕಾ ಪರಮೇಶ್ವರ ತುಮಕೂರಿನ ಸಿದ್ದಾರ್ಥ ನಗರದ ಸರಕಾರಿ ಕಾಲೇಜಿನಲ್ಲಿ ಮತ ಚಲಾಯಿಸಿದರು. (Pic Courtesy: ANI)

4 /7

ಮೈಸೂರು ರಾಜವಂಶಸ್ಥ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್ ಅವರು ಪತ್ನಿ ತ್ರಿಷಿಕಾ ಕುಮಾರಿ ಅವರೊಂದಿಗೆ ಬಂದು ಶ್ರೀಕಾಂತ ಮಹಿಳಾ ಪದವಿ ಪೂರ್ವ ಕಾಲೇಜಿನ ಮತಗಟ್ಟೆ ಸಂಖ್ಯೆ 179ರಲ್ಲಿ ಮತ ಚಲಾಯಿಸಿದರು.

5 /7

ಬೆಂಗಳೂರು ಸೆಂಟ್ರಲ್ ಕ್ಷೇತ್ರದಿಂದ ಪಕ್ಷೇತರರ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ಪ್ರಕಾಶ್ ರಾಜ್ ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. (Pic Courtesy: ANI)

6 /7

ಲೋಕೋಪಯೋಗಿ ಸಚಿವ ಹೆಚ್.ಡಿ. ರೇವಣ್ಣ ಹಾಗೂ ಪತ್ನಿ ಭವಾನಿ ರೇವಣ್ಣ ಮತದಾನಕ್ಕೂ ಮೊದಲು ಹಾಸನದ ಪಡುವಾಲಾಹಿಪ್ಪ ಗ್ರಾಮದ ದೇವಾಲಯವೊಂದರಲ್ಲಿ ಪ್ರಾರ್ಥನೆ ಸಲ್ಲಿಸಿದರು. (Pic Courtesy: ANI)

7 /7

ಬೆಂಗಳೂರು ದಕ್ಷಿಣ ಲೋಕಸಭಾ ಕ್ಷೇತ್ರದ ಮತಗಟ್ಟೆ ಸಂಖ್ಯೆ 54 ರಲ್ಲಿ ರಕ್ಷಣಾ ಸಚಿವ ನಿರ್ಮಲಾ ಸೀತಾರಾಮನ್ ಅವರು ಮತ ಚಲಾಯಿಸಿದರು. (Pic Courtesy: ANI)