ನಾಲ್ಕು ದಿನಗಳ ಬಳಿಕ ಪವರ್ಫುಲ್ 'ಮಹಾಧನಯೋಗ' ರಚನೆ, ಲಕ್ಷ್ಮಿ ಕೃಪೆಯಿಂದ ಈ ಜನರ ಮೇಲೆ ಭಾರಿ ಕನಕವೃಷ್ಟಿ!

Mahadhan Rajyog In Dhanu Rashi 2023: ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ಈ ತಿಂಗಳಾಂತ್ಯಕ್ಕೆ ಬುಧನ ಧನು ರಾಶಿ ಗೋಚರ ನೆರವೇರಲಿದ್ದು, ಇದರಿಂದ ಮಹಾಧಾನ ರಾಜಯೋಗ ನಿರ್ಮಾಣಗೊಳ್ಳಲಿದೆ. ಇದರಿಂದ ಹಲವು ರಾಶಿಗಳ ಜನರ ಭಾಗ್ಯ ಚಿನ್ನದಂತೆ ಹೊಳೆಯಲಿದೆ. ಈ ಜನರಿಗೆ ಆಕಸ್ಮಿಕ ಧನಲಾಭ ಹಾಗೂ ವ್ಯಾಪಾರದಲ್ಲಿ ಯಶಸ್ಸಿನ ಯೋಗ ರೂಪುಗೊಳ್ಳುತ್ತಿದೆ. (Spiritual News In Kannada)

ಬೆಂಗಳೂರು: ಎಲ್ಲಾ ಗ್ರಹಗಳು ಒಂದು ನಿಶ್ಚಿತ ಕಾಲಾಂತರದಲ್ಲಿ ತನ್ನ ರಾಶಿಗಳನ್ನು ಪರಿವರ್ತಿಸುವ ಮೂಲಕ ಶುಭ ಯೋಗಗಳನ್ನು ರೂಪಿಸುತ್ತವೆ ಮತ್ತು ಈ ಯೋಗಗಳು ಎಲ್ಲಾ ದ್ವಾದಶ ರಾಶಿಗಳ ಜನರ ಮೇಲೆ ಪ್ರಭಾವವನ್ನುಂಟು ಮಾಡುತ್ತವೆ. ವೈದಿಕ ಜೋತಿಷ್ಯ ಶಾಸ್ತ್ರದ ಪ್ರಕಾರ ನವೆಂಬರ್ 27, 2023 ರಂದು ಬೆಳಗ್ಗೆ 5 ಗಂಟೆ 41 ನಿಮಿಷಕ್ಕೆ ಬುಧನ ಧನು ರಾಶಿ ಗೋಚರ ನೆರವೇರಳಿದ್ದು ಬುಧ ಅಲ್ಲಿ ಡಿಸೆಂಬರ್ 28 2023 ರವರೆಗೆ ಅಲ್ಲಿಯೇ ಇರಲಿದ್ದಾನೆ. ಬುಧ ಧನು ರಾಶಿಯ ಏಕಾದಶ ಭಾವಕ್ಕೆ ಅಧಿಪತಿಯಾಗಿ ಧನಭಾವದಲ್ಲಿ ಪ್ರವೇಶಿಸಲಿದ್ದಾನೆ. ಇದರಿಂದ ಮಹಾಧಾನ ಹೆಸರಿನ ರಾಜಯೋಗ ನಿರ್ಮಾಣಗೊಳ್ಳುತ್ತಿದೆ. ಈ ಯೋಗವನ್ನು ಅತ್ಯಂತ ಶುಭ ಯೋಗವೆಂದು ಪರಿಗಣಿಸಲಾಗುತ್ತದೆ. ಈ ಯೋಗ ನಿರ್ಮಾಣದಿಂದ ಜಾತಕದವರಿಗೆ ಭೌತಿಕ ಸುಖಗಳು ಪ್ರಾಪ್ತಿಯಾಗಲಿವೆ. ಹಾಗಾದರೆ ಬನ್ನಿ ಧನು ರಾಶಿಯಲ್ಲಿ ನಿರ್ಮಾಣಗೊಳ್ಳುತ್ತಿರುವ ಈ ರಾಜಯೋಗ ಯಾವ ರಾಶಿಗಳ ಜಾತಕದವರಿಗೆ ಅತ್ಯಂತ ಉತ್ತಮ ಸಾಬೀತಾಗಲಿದೆ ತಿಳಿದುಕೊಳ್ಳೋನ, (Spiritual News In Kannada)

 

ಇದನ್ನೂ ಓದಿ-ಎಂಟು ತಿಂಗಳುಗಳ ಬಳಿಕ ರೇವತಿ ನಕ್ಷತ್ರಕ್ಕೆ ರಾಹು ಪ್ರವೇಶ, ಹೊಸ ವರ್ಷದಲ್ಲಿ ಈ ರಾಶಿಗಳ ಜನರಿಗೆ ಅಪಾರ ಧನ-ಸಂಪತ್ತು ಪ್ರಾಪ್ತಿ ಯೋಗ!

 

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://t.co/lCSPNypK2U

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ

1 /7

ಮೇಷ ರಾಶಿ: ಮಹಾಧನ ರಾಜಯೋಗ ನಿಮ್ಮ ಪಾಲಿಗೆ ಒಂದು ವರದಾನ ಸಾಬೀತಾಗಲಿದೆ. ಏಕೆಂದರೆ ಬುಧ ನಿಮ್ಮ ಗೋಚರ ಜಾತಕದ ನವಮಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ಅದೃಷ್ಟದ ಅಪಾರ ಬೆಂಬಲ ಸಿಗಲಿದೆ. ನಿಮ್ಮ ಎಲ್ಲಾ ಯೋಜನೆಗಳು ಫಲಿಸಲಿವೆ. ವಿದೇಶ ಯಾತ್ರೆ ಮಾಡುವ ನಿಮ್ಮ ಇಚ್ಛೆ ಫಲಿಸಲಿದೆ. ಈ ಅವಧಿಯಲ್ಲಿ ದೊಡ್ಡ ದೊಡ್ಡ ಕೆಲಸಗಳನ್ನು ನೀವು ಸುಲಭವಾಗಿ ಮಾಡುವಲ್ಲಿ ಯಶಸ್ವಿಯಾಗುವಿರಿ. ನೌಕರವರ್ಗದ ಜನರಿಗೆ ವೃತ್ತಿ ಜೀವನದಲ್ಲಿ ಲಾಭಗಳಿಸಲು ಅವರು ಮಾಡುವ ಪ್ರಯತ್ನಗಳು ಫಲಿಸಲಿವೆ. ನಿಮಗೆ ಪದೋನ್ನತಿ ಸಿಗುವ ಎಲ್ಲಾ ಸಂಕೇತಗಳು ಗೋಚರಿಸುತ್ತಿವೆ. ಇದಲ್ಲದೆ ಈ ಅವಧಿಯಲ್ಲಿ ನೀವು ಧಾರ್ಮಿಕ ಹಾಗೂ ಮಂಗಳ ಕಾರ್ಯಗಳಲ್ಲಿ ಪಾಲ್ಗೊಳ್ಳುವ ಸಾಧ್ಯತೆ ಇದೆ. 

2 /7

ಮಿಥುನ ರಾಶಿ: ಮಹಾಧನ ರಾಜಯೋಗ ಮಿಥುನ ಜಾತಕದವರ ಪಾಲಿಗೆ ಸಾಕಷ್ಟು ಲಾಭ ತಂದು ಕೊಡಲಿದೆ. ಧನ-ಧಾನ್ಯದಲ್ಲಿ ಅಪಾರ ವೃದ್ಧಿಯಾಗಿ, ಪ್ರತಿಯೊಂದು ಕ್ಷೇತ್ರದಲ್ಲಿ ನಿಮಗೆ ಯಶಸ್ಸು ಸಿಗಲಿದೆ. ಅವಿವಾಹಿತರಿಗೆ ವಿವಾಹ ಪ್ರಸ್ತಾಪ ಬರುವ ಸಾಧ್ಯತೆ ಇದೆ. ಕಾನೂನು ಹೋರಾಟಗಳಲ್ಲಿ ಜಯ ನಿಮ್ಮದಾಗಲಿದೆ. ಪಿತ್ರಾರ್ಜಿತ ಸಂಪತ್ತಿ ಸಿಗುವ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಆರ್ಥಿಕ ಸ್ಥಿತಿ ಬಲವಾಗಲಿದೆ. ಆದರೆ, ಅನಾವಶ್ಯಕ ವೆಚ್ಚಗಳನ್ನು ನಿಯಂತ್ರಿಸಲು ಯತ್ನಿಸಿ. 

3 /7

ಸಿಂಹ ರಾಶಿ: ಮಹಾಧನ ರಾಜಯೋಗ ಸಿಂಹ ರಾಶಿಯ ಜಾತಕದವರ ಪಂಚಮ ಭಾವದಲ್ಲಿ ನೆರವೇರುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ನಿಮ್ಮ ಅದೃಷ್ಟದ ಅಪಾರ ಬೆಂಬಲ ಸಿಗಲಿದೆ. ತರ್ಕ-ವಿತರ್ಕಗಳು ನಿಮ್ಮ ಪಾಲಿಗೆ ಲಾಭಪ್ರದ ಸಿದ್ಧ ಸಾಬೀತಾಗಲಿವೆ. ನಿಮ್ಮ ಬುದ್ಧಿಯ ಕಾರಣ ನೀವು ಪ್ರತಿಯೊಬ್ಬರ ಮನಸ್ಸನ್ನು ಗೆಲ್ಲುವಿರಿ. ಸಮಾಜದಲ್ಲಿ ಘನತೆ ಗೌರವ ಹೆಚ್ಚಾಗಲಿದೆ. ಸ್ಪರ್ಧಾತ್ಮಕ ಪರೀಕ್ಷೆ ಬರೆಯುತ್ತಿರುವ ವಿದ್ಯಾರ್ಥಿಗಳ ಪಾಲಿಗೆ ಸಮಯ ಸಾಕಷ್ಟು ಅನುಕೂಲಕರವಾಗಿದೆ. 

4 /7

ಧನು ರಾಶಿ: ನಿಮ್ಮ ಗೋಚರ ಜಾತಕದ ಲಗ್ನ ಭಾವದಲ್ಲಿ ಮಹಾಧನ ರಾಜಯೋಗ ರೂಪುಗೊಳ್ಳುತ್ತಿದೆ. ಇದರಿಂದ ನಿಮಗೆ ಭಾಗ್ಯದ ಸಂಪೂರ್ಣ ಬೆಂಬಲ ಸಿಗಲಿದೆ. ದೀರ್ಘಾವಧಿಯಿಂದ ನೆನೆಗುದಿಗೆ ಬಿದ್ದ ಕೆಲಸ ಕಾರ್ಯಗಳು ಪೂರ್ಣಗೊಳ್ಳಲಿವೆ. ನಿಮ್ಮ ತಾರ್ಕಿಕ ಶಕ್ತಿಯಿಂದ ನೀವು ಎಲ್ಲರನ್ನು ಸೋಲಿಸುವಲ್ಲಿ ಯಶಸ್ವಿಯಾಗುವಿರಿ. ನೌಕರವರ್ಗದ ಜನರಿಗೆ ಅವರ ಪರಿಶ್ರಮದ ಫಲ ಸಿಗುವ ಸಾಧ್ಯತೆ ಇದೆ. ಕುಟುಂಬ ಸದಸ್ಯರ ಜೊತೆಗೆ ಉತ್ತಮ ಕಾಲ ಕಳೆಯುವಲ್ಲಿ ಯಶಸ್ವಿಯಾಗುವಿರಿ. ಬಿಸ್ನೆಸ್ ನಲ್ಲಿ ಲಾಭ ನಿಮ್ಮದಾಗುವ ಎಲ್ಲಾ ಸಾಧ್ಯತೆಗಳಿವೆ. ಬುಧ ನಿಮ್ಮ ಜಾತಕದ ಪ್ರಥಮ ಭಾವದಲ್ಲಿರುವ ಕಾರಣ ನೀವು ಬುದ್ಧಿವಂತರಾಗುವಿರಿ, ಹೀಗಿರುವಾಗ ಹಲವು ಸುವರ್ಣಾವಕಾಶಗಳು ನಿಮಗೆ ಒದಗಿ ಬರಲಿವೆ. 

5 /7

ಕನ್ಯಾ ರಾಶಿ: ಮಹಾಧನ ರಾಜಯೋಗ ನಿಮ್ಮ  ಜಾತಕದ ಚತುರ್ಥ ಭಾವದಲ್ಲಿ ರಚನೆಯಾಗುತ್ತಿದೆ. ಹೀಗಾಗಿ ಈ ಅವಧಿಯಲ್ಲಿ ನಿಮಗೆ ವಾಹನ-ಆಸ್ತಿಪಾಸ್ತಿ ಸುಖ ಪ್ರಾಪ್ತಿಯಾಗುವ ಸಾಧ್ಯತೆ ಇದೆ. ಈ ಅವಧಿಯಲ್ಲಿ ನಿಮ್ಮ ಸುಖ ಸೌಕರ್ಯಗಳಲ್ಲಿ ವೃದ್ಧಿಯಾಗಲಿದೆ. ರಿಯಲ್ ಎಸ್ಟೇಟ್, ಪ್ರಾಪರ್ಟಿ ಡೀಲಿಂಗ್ ನಂತಹ ವ್ಯವಸಾಯಗಳಲ್ಲಿ ತೊಡಗಿರುವವರಿಗೆ ಉತ್ತಮ ಲಾಭ ಸಿಗಲಿದೆ. ಈ ಅವಧಿಯಲ್ಲಿ ನೀವು ನಿಮ್ಮ ವೃತ್ತಿ ಜೀವನದಲ್ಲಿ ಮಾಡುವ ಯಾವುದೇ ಕೆಲಸದಲ್ಲಿ ನಿಮಗೆ ಉತ್ತಮ ಧನಲಾಭ ಉಂಟಾಗಲಿದೆ. ನಿಮ್ಮ ಶಕ್ತಿ-ಸಾಹಸದಲ್ಲಿ ಅಪಾರ ವೃದ್ಧಿಯಾಗಲಿದೆ. ಬುಧ ದೇವ ನಿಮ್ಮ ರಾಶಿಗೆ ಸ್ವಯಂ ಅಧಿಪತಿಯಾದ ಕಾರಣ, ಈ ಗೋಚರ ನಿಮ್ಮ ಪಾಲಿಗೆ ಲಾಭದಾಯಕ ಸಾಬೀತಾಲಿದೆ.  

6 /7

ಕುಂಭ ರಾಶಿ: ಮಹಾಧನ ರಾಜಯೋಗದ ಈ ಅವಧಿಯಲ್ಲಿ ಬುಧ ನಿಮ್ಮ ಗೋಚರ ಜಾತಕದ ಆದಾಯ ಭಾವದಲ್ಲಿ ಸಂಚರಿಸಲಿದ್ದಾನೆ. ಹೀಗಾಗಿ ಇದರಿಂದ ನಿಮ್ಮ ಆಧಾಯದಲ್ಲಿ ಅಪಾರ ಹೆಚ್ಚಳ ಸಂಭವಿಸಲಿದೆ. ಆದಾಯದ ಹೊಸ ಮಾರ್ಗಗಳು ನಿಮಗಾಗಿ ತೆರೆದುಕೊಳ್ಳಲಿವೆ. ಕಾರ್ಯಕ್ಷೇತ್ರದಲ್ಲಿ ನೀವು ಮಾಡುವ ಎಲ್ಲಾ ಕಾರ್ಯಗಳಲ್ಲಿ ನಿಮಗೆ ಭಾರಿ ಗೌರವ ಸಿಗಲಿದೆ. ವ್ಯವಸಾಯ ಕ್ಷೇತ್ರದಲ್ಲಿ ಉತ್ತಮ ಲಾಭ ನಿಮ್ಮದಾಗಲಿದೆ. ಈ ಅವಧಿಯಲ್ಲಿ ನಿಮಗೆ ಷೇರು ಪೇಟೆ, ಲಾಟರಿಗಳಂತಹ ವ್ಯವಹಾರಗಳಲಿ ಹೆಚ್ಚಿನ ಲಾಭ ಸಿಗಲಿದೆ. ನಿಮ್ಮ ಗೋಚರ ಜಾತಕಕ್ಕೆ ಶನಿ ದೇವ ಅಧಿಪತಿಯಾಗಿದ್ದಾನೆ. ಬುಧನ ಜೊತೆಗೆ ಆತನ ಸ್ನೇಹಭಾವದ ಸಂಬಂಧವಿದೆ. ಹೀಗಾಗಿ ಈ ಗೋಚರ ನಿಮ್ಮ ಪಾಲಿಗೆ ಅತ್ಯಂತ ಶುಭವಾಗಿರಲಿದೆ. 

7 /7

(ಹಕ್ಕುತ್ಯಾಗ- ಈ ಲೇಖನದಲ್ಲಿ ನೀಡಲಾಗಿರುವ ಯಾವುದೇ ಮಾಹಿತಿಯ ನಿಖರತೆ ಅಥವಾ ಸ್ಪಷ್ಟತೆಯನ್ನು ಜೀ ಕನ್ನಡ ನ್ಯೂಸ್ ಖಚಿತಪಡಿಸುವುದಿಲ್ಲ. ಜೋತಿಷಿಗಳು, ಪಂಚಾಂಗ, ಮಾನ್ಯತೆಗಳು ಅಥವಾ ಧರ್ಮ ಗ್ರಂಥಗಳಂತಹ ವಿವಿಧ ಮಾಧ್ಯಮಗಳಿಂದ ಸಂಗ್ರಹಿಸಲಾಗಿರುವ ಮಾಹಿತಿಯನ್ನು ನಿಮ್ಮ ಬಳಿ ತಲುಪಿಸುವುದು ಮಾತ್ರ ನಮ್ಮ ಉದ್ದೇಶವಾಗಿದೆ. ಈ ಮಾಹಿತಿಯ ನೈಜತೆ ಹಾಗೂ ಸ್ಪಷ್ಟತೆಯನ್ನು ಖಚಿತಪಡಿಸಲಾಗುವುದಿಲ್ಲ. ಹೀಗಾಗಿ ಯಾವುದೇ ರೀತಿಯಲ್ಲಿ ಈ ಮಾಹಿತಿಯನ್ನು ಬಳಸುವ ಮುನ್ನ ಸಂಬಂಧಿತ ವಿಷಯ ತಜ್ಞರ ಸಲಹೆ ಪಡೆದುಕೊಳ್ಳಲು ಮರೆಯಬೇಡಿ)