Egg for Hair Care: ಕೂದಲು ಕೆರಾಟಿನ್, ಅಮೈನೋ ಆಮ್ಲಗಳಿಂದ ಮಾಡಲ್ಪಟ್ಟಿದೆ. ಇತರ ರಾಸಾಯನಿಕಗಳಿಗೆ ಒಡ್ಡಿಕೊಳ್ಳುವುದು, ಮಾಲಿನ್ಯ ಮತ್ತು ಸೂರ್ಯನ ಬೆಳಕಿಗೆ ದೀರ್ಘಕಾಲದವರೆಗೆ ಒಡ್ಡಿಕೊಳ್ಳುವುದರಿಂದ ಕೂದಲಿನ ನೈಸರ್ಗಿಕ ಸಿದ್ಧ ಪ್ರೋಟೀನ್ ಕಡಿಮೆಯಾಗಬಹುದು. ಇದರಿಂದ ಕೂದಲು ಬೇರಿನಿಂದ ದುರ್ಬಲವಾಗುತ್ತದೆ ಜೊತೆಗೆ ಹೊಳಪು ಕಳೆದುಕೊಳ್ಳುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/live/RNn4I7iIaYE?si=3G4W5dh0oCdFnu-T
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ತಲೆ ಬಾಚುವಾಗ ಬಹಳಷ್ಟು ಕೂದಲು ಉದುರುತ್ತದೆಯೇ? ಇದಕ್ಕೆ ಮುಖ್ಯ ಕಾರಣವೆಂದರೆ ಆಹಾರದಲ್ಲಿ ಅಗತ್ಯವಾದ ಪೋಷಕಾಂಶಗಳ ಕೊರತೆ. ಆರೋಗ್ಯಕರ ಕೂದಲಿಗೆ ಸಮತೋಲಿತ ಆಹಾರ ಅತ್ಯಗತ್ಯ.
ಆರೋಗ್ಯಕರ ಹೊಳೆಯುವ ಕೂದಲಿಗೆ ಮನೆಯಲ್ಲಿ ತಯಾರಿಸಿದ ಪ್ರೋಟೀನ್ ಪ್ಯಾಕ್’ಗಳನ್ನು ಪ್ರಯತ್ನಿಸಿ. ವರ್ಷವಿಡೀ ಕೂದಲ ರಕ್ಷಣೆಗೆ ಅವು ಉಪಯುಕ್ತವಾಗಿವೆ. ಮೊಟ್ಟೆಗಳು ಪ್ರೋಟೀನ್’ಗಳಲ್ಲಿ ಸಮೃದ್ಧವಾಗಿವೆ. ಕೂದಲಿನ ಆರೋಗ್ಯವನ್ನು ಕಾಪಾಡುವಲ್ಲಿ ಇವು ಪ್ರಮುಖ ಪಾತ್ರವಹಿಸುತ್ತವೆ.
ಮೊಟ್ಟೆಯ ಬಿಳಿಭಾಗ, ತೆಂಗಿನೆಣ್ಣೆ ಅಥವಾ ಆಲಿವ್ ಎಣ್ಣೆ ಮತ್ತು ಜೇನುತುಪ್ಪದ ಪ್ಯಾಕ್ ಮಾಡಿ. ಈ ಪೇಸ್ಟ್ ಅನ್ನು ತಲೆ ಮತ್ತು ನೆತ್ತಿಯ ಭಾಗಗಳಿಗೆ ಹಚ್ಚಿ, ಅರ್ಧ ಘಂಟೆಯವರೆಗೆ ಇರಿಸಿ. ನಂತರ ತಲೆಯನ್ನು ಶಾಂಪೂ ಬಳಸಿ ತೊಳೆಯಿರಿ.
ತಲೆಹೊಟ್ಟು ಸಮಸ್ಯೆ ಇದ್ದರೆ ಅದಕ್ಕೆ ನಿಂಬೆ ರಸವನ್ನು ಕೂಡ ಸೇರಿಸಬಹುದು. ವಾರಕ್ಕೊಮ್ಮೆ ಈ ಟಿಪ್ಸ್ ಫಾಲೋ ಮಾಡಿದರೆ ಕೂದಲು ಬಿಳಿಯಾಗುವುದು, ಕೂದಲು ಉದುರುವಿಕೆ, ತಲೆಹೊಟ್ಟು ಹೀಗೆ ಅನೇಕ ಸಮಸ್ಯೆಗಳಿಂದ ಪರಿಹಾರ ಪಡೆಯಬಹುದು.
ಸೂಚನೆ: ಸಲಹೆ ಸೇರಿದಂತೆ ಈ ವಿಷಯವು ಸಾಮಾನ್ಯ ಮಾಹಿತಿಯನ್ನು ಮಾತ್ರ ಒದಗಿಸುತ್ತದೆ. ಇದು ಅರ್ಹ ವೈದ್ಯಕೀಯ ಅಭಿಪ್ರಾಯಕ್ಕೆ ಯಾವುದೇ ರೀತಿಯಲ್ಲಿ ಪರ್ಯಾಯವಾಗಿಲ್ಲ. ಹೆಚ್ಚಿನ ಮಾಹಿತಿಗಾಗಿ ಯಾವಾಗಲೂ ತಜ್ಞ ಅಥವಾ ನಿಮ್ಮ ವೈದ್ಯರನ್ನು ಸಂಪರ್ಕಿಸಿ. ಈ ಮಾಹಿತಿಯ ಹೊಣೆಯನ್ನು Zee Kannada News ಖಚಿತಪಡಿಸಿಕೊಳ್ಳುವುದಿಲ್ಲ.