ಶುಕ್ರನ ಸಂಕ್ರಮಣವು 3 ರಾಶಿಯವರಿಗೆ ತುಂಬಾ ಮಂಗಳಕರವಾಗಿದೆ. ಜುಲೈ 7, 2023 ರವರೆಗೆ ಶುಕ್ರನು ಕರ್ಕಾಟಕದಲ್ಲಿಯೇ ಇರುತ್ತಾನೆ. ಇದು ಮೂರು ರಾಶಿಯವರ ಅದೃಷ್ಟವನ್ನು ಬೆಳಗುವಂತೆ ಮಾಡುತ್ತದೆ
ಬೆಂಗಳೂರು : ಜ್ಯೋತಿಷ್ಯದ ಪ್ರಕಾರ, ಪ್ರತಿ ಗ್ರಹವು ನಿರ್ದಿಷ್ಟ ಸಮಯದಲ್ಲಿ ತನ್ನ ರಾಶಿಯನ್ನು ಬದಲಾಯಿಸುತ್ತದೆ. ಗ್ರಹಗಳ ಸಂಚಾರವು ಎಲ್ಲಾ ರಾಶಿಯವರ ಜೀವನದ ಮೇಲೆ ಮಂಗಳಕರ ಮತ್ತು ಅಶುಭ ಪರಿಣಾಮಗಳನ್ನು ಬೀರುತ್ತದೆ. ಮೇ 30, 2023 ರಂದು, ಸಂಪತ್ತು-ಐಷಾರಾಮಿ, ಪ್ರೀತಿ-ಪ್ರಣಯದ ಅಂಶವಾದ ಶುಕ್ರನು ಕರ್ಕ ರಾಶಿಯನ್ನು ಪ್ರವೇಶಿಸಿದ್ದಾನೆ. ಚಂದ್ರನ ರಾಶಿಯಲ್ಲಿ ಶುಕ್ರನ ಸಂಕ್ರಮಣವು ಎಲ್ಲಾ ರಾಶಿಯವರ ಜೀವನದ ಮೇಲೆ ಪರಿಣಾಮ ಬೀರುತ್ತದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://bit.ly/3LwfnhK
Instagram Link - https://bit.ly/3LyfY2l
Sharechat Link - https://bit.ly/3LCjokI ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ
ಶುಕ್ರನ ಸಂಕ್ರಮಣವು 3 ರಾಶಿಯವರಿಗೆ ತುಂಬಾ ಮಂಗಳಕರವಾಗಿದೆ. ಜುಲೈ 7, 2023 ರವರೆಗೆ ಶುಕ್ರನು ಕರ್ಕಾಟಕದಲ್ಲಿಯೇ ಇರುತ್ತಾನೆ. ಇದು ಮೂರು ರಾಶಿಯವರ ಅದೃಷ್ಟವನ್ನು ಬೆಳಗುವಂತೆ ಮಾಡುತ್ತದೆ. ಶುಕ್ರನ ಸಂಕ್ರಮಣದಿಂದಾಗಿ, ಮುಂದಿನ 37 ದಿನಗಳು ಈ ರಾಶಿಯವರ ಇಚ್ಛೆ ಈಡೇರುವುದು.
ಮೇಷ ರಾಶಿ : ಮೇಷ ರಾಶಿಯವರಿಗೆ ಶುಕ್ರ ಸಂಕ್ರಮಣ ಶುಭಕರವಾಗಿರುತ್ತದೆ. ಈ ರಾಶಿಯವರು ಹೊಸ ಮನೆ-ಕಾರು, ಜೀವನದಲ್ಲಿ ಸೌಕರ್ಯಗಳನ್ನು ಪಡೆಯಬಹುದು. ಕಠಿಣ ಪರಿಶ್ರಮದ ಫಲ ಈ ಸಮಯದಲ್ಲಿ ಪ್ರಾಪ್ತಿಯಾಗುವುದು. ವೃತ್ತಿಜೀವನ ಉತ್ತಮವಾಗಿರಲಿದೆ. ಪ್ರೇಮ ಜೀವನ - ವೈವಾಹಿಕ ಜೀವನ ಉತ್ತಮವಾಗಿರುತ್ತದೆ. ಮನೆಯ ದೇವರ ಕೋಣೆಯಲ್ಲಿ ಕರ್ಪೂರವನ್ನು ಬೆಳಗುವುದರಿಂದ ಅನೇಕ ಲಾಭಗಳಾಗುವುದು.
ಮಿಥುನ ರಾಶಿ : ಶುಕ್ರನ ರಾಶಿ ಬದಲಾವಣೆಯು ಮಿಥುನ ರಾಶಿಯವರಿಗೆ ಲಾಭವನ್ನು ನೀಡುತ್ತದೆ. ದಿಢೀರ್ ಹಣಕಾಸಿನ ಲಾಭವಾಗುವುದು. ಆರ್ಥಿಕ ಸ್ಥಿತಿ ಉತ್ತಮವಾಗಲಿದೆ. ಆದಾಯ ಹೆಚ್ಚಾಗುತ್ತದೆ. ವ್ಯಾಪಾರಿಗಳಿಗೆ ಕೂಡಾ ಪ್ರತಿ ವ್ಯಾಪಾರದಲ್ಲಿ ಹೆಚ್ಚಿನ ಲಾಭವಾಗಲಿದೆ. ದೇವಸ್ಥಾನದಲ್ಲಿ ತುಪ್ಪದ ದೀಪವನ್ನು ಬೆಳಗಿಸುವುದರಿಂದ ಲಾಭ ಹೆಚ್ಚಾಗುತ್ತದೆ.
ಮೀನ ರಾಶಿ : ಶುಕ್ರನ ಸಂಕ್ರಮಣವು ಮೀನ ರಾಶಿಯವರ ಜೀವನದಲ್ಲಿ ಸಂತೋಷವನ್ನು ತರುತ್ತದೆ. ಹೆಜ್ಜೆ ಹೆಜ್ಜೆಯಲ್ಲಿಯೂ ಪ್ರಗತಿ, ಸಮೃದ್ದಿ ನಿಮ್ಮದಾಗುವುದು. ಪ್ರಗತಿಯ ಹಾದಿ ತೆರೆದುಕೊಳ್ಳುತ್ತಾ ಹೋಗುತ್ತದೆ. ಪ್ರೇಮ ಜೀವನ ಚೆನ್ನಾಗಿರುತ್ತದೆ. ಆದಾಯ ಹೆಚ್ಚಲಿದೆ. ಎಲ್ಲಿಂದಲಾದರೂ ಇದ್ದಕ್ಕಿದ್ದಂತೆ ಹಣ ಸಿಗುತ್ತದೆ. ಕುಟುಂಬದಲ್ಲಿ ಪ್ರೀತಿ ಹೆಚ್ಚಾಗುತ್ತದೆ. ( ಸೂಚನೆ : ಇಲ್ಲಿ ನೀಡಲಾದ ಮಾಹಿತಿಯು ಸಾಮಾನ್ಯ ನಂಬಿಕೆಗಳು ಮತ್ತು ಮಾಹಿತಿಯನ್ನು ಆಧರಿಸಿದೆ. ZEE NEWS ಅದನ್ನು ಖಚಿತಪಡಿಸುವುದಿಲ್ಲ.)