ಹೈ ಬಿಪಿಯ ಲಕ್ಷಣಗಳಿವು! ಈ ನಾಲ್ಕು ಸಂಕೇತಗಳನ್ನು ಎಂದಿಗೂ ನಿರ್ಲಕ್ಷಿಸದಿರಿ

ಶೀತದಿಂದಾಗಿ, ರಕ್ತ ಪರಿಚಲನೆಗೆ ಸಹಾಯ ಮಾಡುವ ಅಪಧಮನಿಗಳು ಮತ್ತು ರಕ್ತನಾಳಗಳು ಕುಗ್ಗಲು ಪ್ರಾರಂಭಿಸುತ್ತವೆ. ಇದರಿಂದಾಗಿ ದೇಹದ ವಿವಿಧ ಭಾಗಗಳಿಗೆ ಸರಿಯಾಗಿ ರಕ್ತ ಪೂರೈಕೆ ಸಾಧ್ಯವಾಗುವುದಿಲ್ಲ.

High Blood Pressure Symptoms : ದೀರ್ಘಕಾಲದ ಕಾಯಿಲೆಗಳಿಂದ ಬಳಲುತ್ತಿರುವ ಜನರ ಸಮಸ್ಯೆಗಳು ಚಳಿಗಾಲದಲ್ಲಿ ಹೆಚ್ಚಾಗಬಹುದು. ಶೀತದಿಂದಾಗಿ, ರಕ್ತ ಪರಿಚಲನೆಗೆ ಸಹಾಯ ಮಾಡುವ ಅಪಧಮನಿಗಳು ಮತ್ತು ರಕ್ತನಾಳಗಳು ಕುಗ್ಗಲು ಪ್ರಾರಂಭಿಸುತ್ತವೆ. ಇದರಿಂದಾಗಿ ದೇಹದ ವಿವಿಧ ಭಾಗಗಳಿಗೆ ಸರಿಯಾಗಿ ರಕ್ತ ಪೂರೈಕೆ ಸಾಧ್ಯವಾಗುವುದಿಲ್ಲ. ಅಲ್ಲದೆ, ಚಳಿಗಾಲದಲ್ಲಿ ರಕ್ತವು ದಪ್ಪವಾಗಲು ಪ್ರಾರಂಭಿಸುತ್ತದೆ. ಇದರಿಂದಾಗಿ ಈ ಸಮಸ್ಯೆಯು ಮತ್ತಷ್ಟು ಹೆಚ್ಚಾಗುತ್ತದೆ. ಈ ಎಲ್ಲಾ ಕಾರಣಗಳಿಂದಾಗಿ ಮೆದುಳು ಮತ್ತು ಹೃದಯದ ಮೇಲೆ ರಕ್ತದೊತ್ತಡ ಹೆಚ್ಚಾಗಲು ಪ್ರಾರಂಭಿಸುತ್ತದೆ ಮತ್ತು ಇದು ದೇಹದಲ್ಲಿ ಹಲವಾರು ಸಮಸ್ಯೆಗಳನ್ನು ಉಂಟುಮಾಡುತ್ತದೆ.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

 

1 /5

ಅಧಿಕ ರಕ್ತದೊತ್ತಡ ಪಾರ್ಶ್ವವಾಯು ಮತ್ತು ಹೃದಯಾಘಾತದ ಅಪಾಯವನ್ನು ಹೆಚ್ಚಿಸುತ್ತದೆ.ಆದರೆ, ರಕ್ತದೊತ್ತಡದ ಮಟ್ಟ ಹೆಚ್ಚಾಗಿದೆ ಎನ್ನುವುದನ್ನು  ಅರ್ಥಮಾಡಿಕೊಳ್ಳಲು ಕೆಲವು ಲಕ್ಷಣಗಳನ್ನು ಅರಿತುಕೊಳ್ಳಬೇಕು. 

2 /5

ಚಳಿಗಾಲದಲ್ಲಿ ಬೆಳಗ್ಗೆ ಎದ್ದ ನಂತರ ತಲೆನೋವು ಕಾಣಿಸಿಕೊಳ್ಳುತ್ತದೆ.ಕೆಲವೊಮ್ಮೆ ಇದು ದೀರ್ಘಕಾಲದವರೆಗೆ ಮಲಗುವುದರಿಂದ ಅಥವಾ ದೇಹದಲ್ಲಿ ನೀರಿನ ಕೊರತೆಯಿಂದಲೂ ಸಂಭವಿಸಬಹುದು. ಆದರೆ, ಪ್ರತಿದಿನ ಅಥವಾ ಒಂದೇ ದಿನದಲ್ಲಿ ಪದೇ ಪದೇ ತಲೆನೋವು ಕಾಣಿಸಿಕೊಳ್ಳುತ್ತಿದ್ದರೆ ರಕ್ತದೊತ್ತಡದ ಮಟ್ಟವು ಹೆಚ್ಚಾಗಿರುವ ಸಾಧ್ಯತೆಯಿದೆ.

3 /5

ಒತ್ತಡದಿಂದಾಗಿ ಅನೇಕ ಬಾರಿ ರಕ್ತದೊತ್ತಡದ ಮಟ್ಟವು ಹೆಚ್ಚಾಗುತ್ತದೆ. ಈ ಸ್ಥಿತಿಯಲ್ಲಿ ಅತಿಯಾದ ಬೆವರುವಿಕೆ, ನರಗಳಲ್ಲಿ ಜುಮ್ಮೆನ್ನುವುದು ಮುಂತಾದ ಸಮಸ್ಯೆಗಳೂ ಬರಬಹುದು.   

4 /5

ಬಿಪಿ ಹಠಾತ್ ಹೆಚ್ಚಳದಿಂದಾಗಿ, ಜೀರ್ಣಾಂಗ ವ್ಯವಸ್ಥೆಯ ಮೇಲೂ ಪರಿಣಾಮ ಬೀರುತ್ತದೆ. ಇದು ಹೊಟ್ಟೆಗೆ ಸಂಬಂಧಿಸಿದ ಗಂಭೀರ ಸಮಸ್ಯೆಗಳನ್ನು ಉಂಟುಮಾಡಬಹುದು.

5 /5

ಬಿಪಿ ಮಟ್ಟ ಹೆಚ್ಚಾಗುವುದರಿಂದ ಉಸಿರಾಟಕ್ಕೆ ಸಂಬಂಧಿಸಿದ ಸಮಸ್ಯೆಗಳೂ ಹೆಚ್ಚಾಗಬಹುದು.