Vegetables For Diabetes: ಬ್ಲಡ್ ಶುಗರ್ ಲೆವೆಲ್ ನಿಯಂತ್ರಿಸಲು ಈ ತರಕಾರಿಗಳನ್ನು ನಿಮ್ಮ ಡಯಟ್ನಲ್ಲಿ ಸೇರಿಸಿ

                                    

ಮಧುಮೇಹ ನಿಯಂತ್ರಣಕ್ಕೆ ತರಕಾರಿಗಳು: ಮಧುಮೇಹ ರೋಗಿಗಳು ತಮ್ಮ ಆಹಾರದ ಬಗ್ಗೆ ವಿಶೇಷ ಗಮನ ಹರಿಸಬೇಕು. ಅಂತಹ ಪರಿಸ್ಥಿತಿಯಲ್ಲಿ, ಡಯಾಬಿಟಿಸ್ ರೋಗಿಗಳು ತಿನ್ನಲೇಬೇಕಾದ ಮೂರು ಮುಖ್ಯ ತರಕಾರಿಗಳ ಬಗ್ಗೆ ನಿಮಗೆ ಮಾಹಿತಿ ನೀಡಲಿದ್ದೇವೆ. ಈ ತರಕಾರಿಗಳನ್ನು ಸೇವಿಸುವುದರಿಂದ ರಕ್ತದಲ್ಲಿನ ಸಕ್ಕರೆ ಅಂಶ ನಿಯಂತ್ರಣದಲ್ಲಿರುತ್ತದೆ ಎಂದು ಹೇಳಲಾಗುತ್ತದೆ. ಅಂತಹ ತರಕಾರಿಗಳು ಯಾವುವು ಎಂದು ತಿಳಿಯೋಣ...

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3hDyh4G
Apple Link - https://apple.co/3hEw2hy
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ಕಿಸಿ.

1 /4

ಡಯಾಬಿಟಿಸ್ ನಿಯಂತ್ರಿಸಲು ತರಕಾರಿಗಳು : ಬದಲಾಗುತ್ತಿರುವ ಜೀವನಶೈಲಿಯಲ್ಲಿ ಅತಿ ಚಿಕ್ಕ ವಯಸ್ಸಿನಲ್ಲಿಯೇ ಬಿಪಿ, ಶುಗರ್ ಸಮಸ್ಯೆ ಕಾಡುತ್ತದೆ. ಒಮ್ಮೆ ಡಯಾಬಿಟಿಸ್ ರೋಗಕ್ಕೆ ಗುರಿಯಾದರೆ ಅದರಿಂದ ಹೊರಬರುವುದು ತುಂಬಾ ಕಷ್ಟ. ಆದರೆ, ಆಹಾರದ ಬಗ್ಗೆ ವಿಶೇಷ ಕಾಳಜಿ ವಹಿಸುವ ಮೂಲಕ ರಕ್ತದಲ್ಲಿನ ಸಕ್ಕರೆ ಮಟ್ಟವನ್ನು ನಿಯಂತ್ರಿಸಬಹುದು. ಡಯಾಬಿಟಿಸ್ ರೋಗಿಗಳು ತಮ್ಮ ಆಹಾರದಲ್ಲಿ ಮೂರು ತರಕಾರಿಗಳನ್ನು ಸೇರಿಸುವ ಮೂಲಕ ಬ್ಲಡ್ ಶುಗರ್ ಲೆವೆಲ್ ನಿಯಂತ್ರಿಸಬಹುದು. ಆ ತರಕಾರಿಗಳು ಯಾವುವು ಎಂದು ತಿಳಿಯೋಣ...

2 /4

ಮಧುಮೇಹಿಗಳಿಗೆ ಕ್ಯಾರೆಟ್ ಹೆಚ್ಚು ಪ್ರಯೋಜನಕಾರಿ :  ಕ್ಯಾರೆಟ್ ತನ್ನದೇ ಆದ ರೀತಿಯಲ್ಲಿ ತುಂಬಾ ಪ್ರಯೋಜನಕಾರಿಯಾಗಿದೆ. ಇದು ಒಂದಲ್ಲ, ಎರಡಲ್ಲ ಹಲವು ಅನುಕೂಲಗಳನ್ನು ಹೊಂದಿದೆ. ನಿತ್ಯ ಆಹಾರದಲ್ಲಿ ಕ್ಯಾರೆಟ್ ತಿನ್ನುವುದರಿಂದ, ದೃಷ್ಟಿ ಹೆಚ್ಚಿಸುವುದರ ಜೊತೆಗೆ ದೇಹವು ಅಗತ್ಯವಾದ ಪೋಷಕಾಂಶಗಳನ್ನು ಪಡೆಯುತ್ತದೆ. ಅಷ್ಟೇ ಅಲ್ಲ, ಕ್ಯಾರೆಟ್  ತಿನ್ನುವುದರಿಂದ ರಕ್ತದಲ್ಲಿನ ಸಕ್ಕರೆಯು ನಿಯಂತ್ರಣದಲ್ಲಿರುತ್ತದೆ ಎಂದು ನಿಮಗೆ ತಿಳಿದಿದೆಯೇ? 

3 /4

ರಕ್ತದಲ್ಲಿನ ಸಕ್ಕರೆಯನ್ನು ನಿಯಂತ್ರಿಸುತ್ತದೆ ಎಲೆಕೋಸು : ಇದಲ್ಲದೆ, ಎಲೆಕೋಸು ಮಧುಮೇಹ ರೋಗಿಗಳಿಗೆ ಸಹ ಪ್ರಯೋಜನಕಾರಿಯಾಗಿದೆ. ವಾಸ್ತವವಾಗಿ, ಎಲೆಕೋಸಿನಲ್ಲಿ ಪಿಷ್ಟದ ಪ್ರಮಾಣವು ತುಂಬಾ ಕಡಿಮೆ ಇದೆ. ಎಲೆಕೋಸು ಉತ್ಕರ್ಷಣ ನಿರೋಧಕಗಳು ಮತ್ತು ವಿಟಮಿನ್ಗಳಲ್ಲಿ ಸಮೃದ್ಧವಾಗಿದೆ. ಅಂತಹ ಪರಿಸ್ಥಿತಿಯಲ್ಲಿ, ನೀವು ಈ ತರಕಾರಿಯನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳುವುದು ಒಳಿತು.

4 /4

ಡಯಾಬಿಟಿಸ್ ರೋಗಿಗಳಿಗೆ ಸೌತೆಕಾಯಿ :  ಎಲ್ಲರಿಗೂ ತಿಳಿದಿರುವಂತೆ, ಸೌತೆಕಾಯಿಯಲ್ಲಿ 90 ಪ್ರತಿಶತದಷ್ಟು ನೀರು ಇರುತ್ತದೆ. ಬೇಸಿಗೆಯಲ್ಲಿ, ನೀವು ಅದನ್ನು ನಿಮ್ಮ ಆಹಾರದಲ್ಲಿ ಸೇರಿಸಿಕೊಳ್ಳಬೇಕು. ಇದರಿಂದಾಗಿ ನಿಮ್ಮ ದೇಹದಲ್ಲಿ ನೀರಿನ ಕೊರತೆ ಆಗುವುದಿಲ್ಲ. ಡಯಾಬಿಟಿಸ್ ಸಮಸ್ಯೆ ಇರುವವರಿಗೆ ಇದು ಹೆಚ್ಚು ಪ್ರಯೋಜನಕಾರಿ.  ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಅದನ್ನು ಅಳವಡಿಸಿಕೊಳ್ಳುವ ಮೊದಲು, ಖಂಡಿತವಾಗಿಯೂ ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಿ. ZEE ಮೀಡಿಯಾ  ಇದನ್ನು ಖಚಿತಪಡಿಸುವುದಿಲ್ಲ.