Easy Hair crae tips :ಮನೆಯಲ್ಲಿ ಕೆಲವು ಪರಿಹಾರ ಕ್ರಮಗಳನ್ನು ಅನುಸರಿಸುವುದರಿಂದ ಕೂದಲಿನ ಆರೋಗ್ಯ, ಸೌಂದರ್ಯವನ್ನು ಕಾಪಾಡಿಕೊಳ್ಳಬಹುದು.
Easy Hair crae tips : ಕೂದಲು ಮುಖದ ಸೌಂದರ್ಯ ಹೆಚ್ಚಿಸುತ್ತದೆ. ಕೂದಲಿನ ಮೇಲೆ ಪ್ರತಿಯೊಬ್ಬರಿಗೂ ಒಂದು ರೀತಿಯ ಮೋಹ ಇದ್ದೇ ಇರುತ್ತದೆ. ಒಮ್ಮೊಮ್ಮೆ ಕೂದಲಿಗೆ ಸಂಬಂಧಿಸಿದ ಕೆಲವು ಸಮಸ್ಯೆಗಳು ಕಾಡತೊಡಗುತ್ತದೆ. ಸಾಮಾನ್ಯವಾಗಿ ಕಾಡುವ ಸಮಸ್ಯೆಯೆಂದರೆ ಕೂದಲು ಉದುರುವುದು. ಕೂದಲು ಉದುರುತ್ತಾ ತೆಳ್ಳಗಾದರೆ ಕೂದಲಿನ ಸೌಂದರ್ಯ ಸಂಪೂರ್ಣವಾಗಿ ಹಾಳಾಗುತ್ತದೆ. ಆದರೆ, ಮನೆಯಲ್ಲಿ ಕೆಲವು ಪರಿಹಾರ ಕ್ರಮಗಳನ್ನು ಅನುಸರಿಸುವುದರಿಂದ ಕೂದಲಿನ ಆರೋಗ್ಯ, ಸೌಂದರ್ಯವನ್ನು ಕಾಪಾಡಿಕೊಳ್ಳಬಹುದು.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://www.youtube.com/watch?v=xFI-KJNrEP8
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.
ಕೂದಲು ಉದುರದಂತೆ ತಡೆಯಬೇಕಾದರೆ ಕೂದಲಿಗೆ ಬುಡದಿಂದ ತುದಿಯವರೆಗೆ ಪೌಷ್ಟಿಕಾಂಶ ನೀಡಬೇಕಾಗುತ್ತದೆ. ಕೂದಲನ್ನು ಬುಡದಿಂದಲೇ ಸದೃಢವಾಗಿ ಮಾಡಲು ಬಾಳೆಹಣ್ಣಿನ ಹೇರ್ ಮಾಸ್ಕ್ ಅನ್ನು ಹಚ್ಚಬಹುದು. ಇದು ಕೂದಲಿನ ಬೆಳವಣಿಗೆಯನ್ನು ಹೆಚ್ಚಿಸುವುದಲ್ಲದೆ, ಕೂದಲನ್ನು ಹೊಳೆಯುವಂತೆ ಮಾಡುತ್ತದೆ.
ಮೊಸರಿನ ಹೇರ್ ಮಾಸ್ಕ್ ಕೂದಲಿಗೆ ತುಂಬಾ ಪ್ರಯೋಜನಕಾರಿಯಾಗಿದೆ.ಇದು ತಲೆಹೊಟ್ಟಿನ ಸಮಸ್ಯೆಗೆ ಪರಿಹಾರ ನೀಡುತ್ತದೆ. ಒಮ್ಮೆ ತಲೆಹೊಟ್ಟು ಕಡಿಮೆಯಾದರೆ ಕೂದಲು ಬೆಳವಣಿಗೆ ಕೂಡಾ ಆರಂಭವಾಗುತ್ತದೆ.
ಈರುಳ್ಳಿ ಹೇರ್ ಮಾಸ್ಕ್ ನಿಮ್ಮ ಕೂದಲನ್ನು ಸರಿಯಾಗಿ ಪೋಷಿಸಲು ಸಹಾಯ ಮಾಡುತ್ತದೆ. ಇದನ್ನು ತಿಂಗಳಿಗೊಮ್ಮೆ ಅಥವಾ ಎರಡು ಬಾರಿ ಕೂದಲಿಗೆ ಹಚ್ಚಬಹುದು.
ವಾರಕ್ಕೆ ಎರಡು ಬಾರಿ ನಿಮ್ಮ ಕೂದಲಿಗೆ ಮೊಟ್ಟೆಯ ಹೇರ್ ಮಾಸ್ಕ್ ಹಚ್ಚಬೇಕು. ಹೀಗೆ ಮಾಡುವುದರಿಂದ ಕೂದಲಿಗೆ ಅಗತ್ಯ ಪ್ರೊಟೀನ್ ಸಿಗುತ್ತದೆ.ಕೂದಲು ಬುಡದಿಂದ ತುದಿಯವರೆಗೂ ಬಲಗೊಳ್ಳುತ್ತದೆ
ಅಲೋವೆರಾ ಮತ್ತು ಮೊಟ್ಟೆಯ ಹೇರ್ ಮಾಸ್ಕ್ ನಿಮ್ಮ ಕೂದಲಿಗೆ ತುಂಬಾ ಪ್ರಯೋಜನಕಾರಿಯಾಗಿದೆ. ವಾರಕ್ಕೊಮ್ಮೆ ಈ ಮಾಸ್ಕ್ ಅನ್ನು ಕೂದಲಿಗೆ ಹಚ್ಚಿದರೆ ಹಲವಾರು ರೀತಿಯ ಪ್ರಯೋಜನಗಳಾಗುವುದು. (ಸೂಚನೆ :ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ಪಡೆಯಲು ಮರೆಯದಿರಿ. Zee Media ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)