ರಾಷ್ಟ್ರಪತಿ ಚುನಾವಣೆ: ಬೆಂಗಳೂರಿಗೆ ಬಂದ NDA ಅಭ್ಯರ್ಥಿ ದ್ರೌಪದಿ ಮುರ್ಮು

ಬೆಂಗಳೂರಿಗೆ ಆಗಮಿಸಿದ ದ್ರೌಪದಿ ಮುರ್ಮು ಅವರನ್ನು ಸಿಎಂ ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಆತ್ಮೀಯ ಸ್ವಾಗತ ಕೋರಿದರು.

ಬೆಂಗಳೂರು: ರಾಷ್ಟ್ರಪತಿ ಸ್ಥಾನಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿರುವ ದ್ರೌಪದಿ ಮುರ್ಮು ಭಾನುವಾರ ಸಿಲಿಕಾನ್ ಸಿಟಿ ಬೆಂಗಳೂರಿಗೆ ಆಗಮಿಸಿದರು. ಮಧ್ಯಾಹ್ನ ವಿಮಾನ ನಿಲ್ದಾಣಕ್ಕೆ ಬಂದ ಅವರನ್ನು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಸೇರಿದಂತೆ ಬಿಜೆಪಿ ನಾಯಕರು ಆತ್ಮೀಯವಾಗಿ ಸ್ವಾಗತಿಸಿದರು.

1 /5

ರಾಷ್ಟ್ರಪತಿ ಸ್ಥಾನಕ್ಕೆ ಎನ್‌ಡಿಎ ಅಭ್ಯರ್ಥಿಯಾಗಿ ಸ್ಪರ್ಧಿಸಿರುವ ದ್ರೌಪದಿ ಮುರ್ಮುಗೆ ಭಾನುವಾರ ಬೆಂಗಳೂರಿಗೆ ಆಗಮಿಸಿದರು. ವಿಮಾನ ನಿಲ್ದಾಣದಲ್ಲಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರು ಆತ್ಮೀಯವಾಗಿ ಸ್ವಾಗತಿಸಿದರು. ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ನಳಿನ್‌ ಕುಮಾರ್‌ ಕಟೀಲ್ ಸೇರಿದಂತೆ ಇತರ ನಾಯಕರು ಈ ವೇಳೆ ಉಪಸ್ಥಿತರಿದ್ದರು.

2 /5

ಬೆಂಗಳೂರಿಗೆ ಆಗಮಿಸಿದ ದ್ರೌಪದಿ ಮುರ್ಮು ಅವರು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು. ಈ ವೇಳೆ ಸಿಎಂ ಬಸವರಾಜ್ ಬೊಮ್ಮಾಯಿ, ಕೇಂದ್ರ ಸಚಿವರಾದ ಪ್ರಹ್ಲಾದ್ ಜೋಷಿ ಮತ್ತು ಕಿಶನ್ ರೆಡ್ಡಿ ಉಪಸ್ಥಿತರಿದ್ದರು.  

3 /5

ಬೆಂಗಳೂರಿಗೆ ಬಂದ ನಂತರ ದ್ರೌಪದಿ ಮುರ್ಮು ಅವರು ನಗರದ ಶಾಂಗ್ರೀಲಾ ಹೋಟೆಲ್‌ಗೆ ತೆರಳಿದರು. ಈ ವೇಳೆ ಆದಿವಾಸಿ ಕಲಾತಂಡಗಳು ಅವರನ್ನು ಭರಮಾಡಿಕೊಂಡರು.  

4 /5

ಶಾಂಗ್ರೀಲಾ ಹೋಟೆಲ್‌ನಲ್ಲಿ ದ್ರೌಪದಿ ಮುರ್ಮು ಅವರು ಬಿಜೆಪಿ ಶಾಸಕರು, ಸಂಸದರೊಂದಿಗೆ ಸಭೆ ನಡೆಸಲಿದ್ದಾರೆ. ಈ ವೇಳೆ ತಮ್ಮ ಪರ ಮತಯಾಚಿಸಲಿದ್ದಾರೆ. ಬಳಿಕ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಮತ್ತು ಮಂಡ್ಯ ಸಂಸದೆ ಸುಮಲತಾರನ್ನು ಭೇಟಿ ಮಾಡಿ ಬೆಂಬಲ ಕೋರುವ ಸಾಧ್ಯತೆ ಇದೆ ಎಂದು ಬಿಜೆಪಿ ಮೂಲಗಳು ತಿಳಿಸಿವೆ.

5 /5

ಭಾರತದ 16ನೇ ರಾಷ್ಟ್ರಪತಿ ಚುನಾವಣೆ ಜುಲೈ 18ರಂದು ನಡೆಯಲಿದ್ದು, ಜುಲೈ 21ರಂದು ಮತ ಎಣಿಕೆ ನಡೆಯಲಿದೆ. ನಾಮಪತ್ರಗಳ ಪರಿಶೀಲನೆಗೆ ಜೂನ್ 30 ಮತ್ತು ಉಮೇದುವಾರಿಕೆ ಹಿಂಪಡೆಯಲು ಜುಲೈ 2 ಕೊನೆಯ ದಿನಾಂಕವಾಗಿದೆ. ಭಾರತದ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರ ಅವಧಿಯು ಜುಲೈ 24 ರಂದು ಕೊನೆಗೊಳ್ಳುತ್ತದೆ. ಎನ್ಡಿಎ ಅಭ್ಯರ್ಥಿಯಾಗಿ ದ್ರೌಪದಿ ಮುರ್ಮು ಹಾಗೂ ವಿಪಕ್ಷದ ಅಭ್ಯರ್ಥಿಯಾಗಿ ಯಶವಂತ್ ಸಿನ್ಹಾ ಅಧಿಕೃತ ಅಭ್ಯರ್ಥಿಗಳಾಗಿದ್ದಾರೆ.