Realme 14 Pro 5G: ರಿಯಲ್‌ಮಿ 14 ಪ್ರೊ 5G ಫೋನ್ 50 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಎನರ್ಜಿ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಫೋನಿನಲ್ಲಿ 6.77 ಇಂಚಿನ ಬಾಗಿದ ಡಿಸ್ಪ್ಲೇ ಜೊತೆಗೆ 8GB RAM + 256GB ಸ್ಟೋರೇಜ್, 6000mAh ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್ ಸೇರಿದಂತೆ ಹಲವಾರು ವೈಶಿಷ್ಟ್ಯಗಳಿವೆ.
Realme 14 Pro Specifications: ಬಹುನಿರೀಕ್ಷಿತ ರಿಯಲ್‌ಮಿ 14 ಪ್ರೊ 5G ಸ್ಮಾರ್ಟ್‌ಫೋನ್ ಭಾರತೀಯ ಮಾರುಕಟ್ಟೆಗೆ ಬಿಡುಗಡೆಯಾಗಿದೆ. ಇದನ್ನು ರಿಯಲ್‌ಮಿ 14 ಪ್ರೊ ಸರಣಿಯಡಿ ಪರಿಚಯಿಸಲಾಗಿದೆ. ಕಂಪನಿಯು ರಿಯಲ್‌ಮಿ 14 ಪ್ರೊ ಮತ್ತು ರಿಯಲ್‌ಮಿ 14 ಪ್ರೊ+ ಫೋನ್‌ಗಳನ್ನ ಭಾರತೀಯ ಮಾರುಕಟ್ಟೆಗೆ ಪರಿಚಯಿಸಿದೆ. ರಿಯಲ್‌ಮಿ 14 ಪ್ರೊ ಮೊಬೈಲ್ ಮಧ್ಯಮ ಶ್ರೇಣಿಯ ಸ್ಮಾರ್ಟ್‌ಫೋನ್‌ಗಳಿಗೆ ಟಕ್ಕರ್ ನೀಡಲು ಸಿದ್ಧವಾಗಿದ್ದು, ಇದೇ ಜನವರಿ 23ರಂದು ತನ್ನ ಮೊದಲ ಮಾರಾಟವನ್ನ ಪ್ರಾರಂಭಿಸಲಿದೆ.
ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ, ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು
Twitter Link - https://bit.ly/3n6d2R8
Facebook Link - https://bit.ly/3Hhqmcj
Youtube Link - https://tinyurl.com/7jmvv2nz
Instagram Link - https://bit.ly/3LyfY2l
Sharechat Link - https://bit.ly/3LCjokI
Threads Link- https://www.threads.net/@zeekannadanews
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್.
ರಿಯಲ್‌ಮಿ 14 ಪ್ರೊ 5G ಫೋನ್ 50 ಮೆಗಾಪಿಕ್ಸೆಲ್ ಕ್ಯಾಮೆರಾ ಹೊಂದಿದೆ. ಇದು ಮೀಡಿಯಾ ಟೆಕ್ ಡೈಮೆನ್ಸಿಟಿ 7300 ಎನರ್ಜಿ ಪ್ರೊಸೆಸರ್‌ನಲ್ಲಿ ಕಾರ್ಯನಿರ್ವಹಿಸುತ್ತದೆ. ಈ ಫೋನಿನಲ್ಲಿ 6.77 ಇಂಚಿನ ಬಾಗಿದ ಡಿಸ್ಪ್ಲೇ ಜೊತೆಗೆ 8GB RAM + 256GB ಸ್ಟೋರೇಜ್, 6000mAh ಬ್ಯಾಟರಿ ಮತ್ತು 45W ವೇಗದ ಚಾರ್ಜಿಂಗ್ ಸೇರಿದಂತೆ ಹಲವಾರು ವೈಶಿಷ್ಟ್ಯಗಳಿವೆ. ಈ ಫೋನಿನ ಬೆಲೆ ಮತ್ತು ವಿಶೇಷತೆಗಳ ಬಗ್ಗೆ ಮತ್ತಷ್ಟು ಮಾಹಿತಿ ಇಲ್ಲಿದೆ ನೋಡಿ...
ರಿಯಲ್‌ಮಿ 14 ಪ್ರೊ 5G ಮೊಬೈಲ್ 6.77 ಇಂಚಿನ ಅಮೋಲೆಡ್ ಡಿಸ್ಪ್ಲೇ ಹೊಂದಿದೆ. ಇದು 412×1080 ಪಿಕ್ಸೆಲ್ ರೆಸಲ್ಯೂಶನ್, 4500 ನಿಟ್ಸ್ ಗರಿಷ್ಠ ಬ್ರೈಟ್‌ನೆಸ್ 240Hz ಟಚ್ ಸ್ಯಾಂಪ್ಲಿಂಗ್ ರೇಟ್ ಮತ್ತು 120Hz ರಿಫ್ರೆಶ್ ರೇಟ್ ಬೆಂಬಲ ಹೊಂದಿದೆ. ಈ ಡಿಸ್ಪ್ಲೇಯು ಗೊರಿಲ್ಲಾ ಗ್ಲಾಸ್ 7i ರಕ್ಷಣೆ ಹೊಂದಿದೆ. ಈ ಸ್ಮಾರ್ಟ್‌ಫೋನ್ ಮೀಡಿಯಾಟೆಕ್ ಡೈಮೆನ್ಸಿಟಿ 7300 ಎನರ್ಜಿ ಪ್ರೊಸೆಸರ್‌ನೊಂದಿಗೆ ಬಿಡುಗಡೆಯಾಗಿದೆ. ಇದು ಗ್ರಾಫಿಕ್ಸ್‌ಗಾಗಿ ಮಾಲಿ G615 ಜಿಪಿಯು ಸಹ ಹೊಂದಿದೆ. ಈ ಸ್ಮಾರ್ಟ್‌ಫೋನ್ ಆಂಡ್ರಾಯ್ಡ್ 15 ಆಧಾರಿತ ರಿಯಲ್‌ಮಿ UI 6.0 ಜೊತೆಗೆ ಕೆಲಸ ಮಾಡುತ್ತದೆ.
ರಿಯಲ್‌ಮಿ 14 ಪ್ರೊ 5G ಫೋನಿನಲ್ಲಿ OIS ಜೊತೆಗೆ 50 ಮೆಗಾಪಿಕ್ಸೆಲ್ ಸೋನಿ ಮುಖ್ಯ ಕ್ಯಾಮೆರಾ ಲಭ್ಯವಿದೆ. ಜೊತೆಗೆ 8 ಮೆಗಾಪಿಕ್ಸೆಲ್ ದ್ವಿತೀಯ ಕ್ಯಾಮೆರಾ ಹೊಂದಿದೆ. ಸೆಲ್ಫಿ ಮತ್ತು ವಿಡಿಯೋ ಕರೆಗಾಗಿ ಈ ಫೋನಿನಲ್ಲಿ 16 ಮೆಗಾಪಿಕ್ಸೆಲ್ ಸೆಲ್ಫಿ ಕ್ಯಾಮೆರಾ ಲಭ್ಯವಿದೆ. ಈ ರಿಯಲ್‌ಮಿ ಫೋನ್ 12GB RAM ಹೊಂದಿದೆ. ಜೊತೆಗೆ 14GB ವರ್ಚುವಲ್ RAM ಬೆಂಬಲ ಸಹ ಹೊಂದಿದೆ. ಈ ಫೋನಿನಲ್ಲಿ 128GB ಮತ್ತು 256GB ಸ್ಟೋರೇಜ್ ಆಯ್ಕೆ ಲಭ್ಯವಿದೆ.
ರಿಯಲ್‌ಮಿ 14 ಪ್ರೊ 5G ಮೊಬೈಲ್ 6000mAh ಸಾಮರ್ಥ್ಯದ ದೊಡ್ಡ ಬ್ಯಾಟರಿ ಹೊಂದಿದೆ. ಈ ಮೊಬೈಲ್ 45W ವೇಗದ ಚಾರ್ಜಿಂಗ್ ಸೌಲಭ್ಯ ಒಳಗೊಂಡಿದೆ. ಈ ಸ್ಮಾರ್ಟ್‌ಫೋನ್ ಇನ್ ಡಿಸ್ಪ್ಲೇ ಫಿಂಗರ್‌ಪ್ರಿಂಟ್ ಸೆನ್ಸಾರ್ ಹೊಂದಿದೆ. ಧೂಳು ಮತ್ತು ನೀರಿನ ವಿರುದ್ಧ ರಕ್ಷಣೆಗಾಗಿ IP66+IP68+IP69 ರೇಟಿಂಗ್ ಪಡೆದಿದೆ. ಕನೆಕ್ಟಿವಿಟಿ ಆಯ್ಕೆಗಳಲ್ಲಿ 5G, 4G LTE, ವೈ-ಫೈ 6, ಬ್ಲೂಟೂತ್ 5.2 ಮತ್ತು USB ಟೈಪ್ C, ಸ್ಟಿರಿಯೊ ಸ್ಪೀಕರ್‌ಗಳು ಸೇರಿದಂತೆ ಹಲವಾರು ಸೌಲಭ್ಯಗಳನ್ನು ಒಳಗೊಂಡಿದೆ.
ರಿಯಲ್‌ಮಿ 14 ಪ್ರೊ 5G ಫೋನ್ ಎರಡು ಸ್ಟೋರೇಜ್ ರೂಪಾಂತರಗಳಲ್ಲಿ ಮಾರಾಟವಾಗಲಿದೆ. ಈ ಫೋನಿನ 8GB RAM + 128GB ಸ್ಠೋರೇಜ್ ಬೆಲೆ 22,999 ರೂ. ಮತ್ತು 8GB RAM + 25GB ಸ್ಟೋರೇಜ್ ಬೆಲೆ 24,999 ರೂ. ಆಗಿದೆ. ಕಂಪನಿಯು ಮೊದಲ ಮಾರಾಟದ ಪ್ರಯುಕ್ತ ಹಲವು ಆಫರ್‌ಗಳನ್ನು ನೀಡುತ್ತಿದೆ. ನೀವು 2000 ರೂ. ಬ್ಯಾಂಕ್ ಆಫರ್, 1000 ರೂ. ಎಕ್ಸ್‌ಚೇಂಜ್ ಬೋನಸ್ ಮತ್ತು 12 ತಿಂಗಳ ನೋ ಕಾಸ್ಟ್ EMI ಸೌಲಭ್ಯ ಲಾಭ ಪಡೆಯಬಹುದು. ಈ ಫೋನ್ ಪರ್ಲ್ ವೈಟ್, ಪಿಂಕ್ ಮತ್ತು ಸ್ಯೂಡ್ ಗ್ರೇ ಬಣ್ಣಗಳಲ್ಲಿ ಖರೀದಿಗೆ ಲಭ್ಯವಿದೆ. ಜನವರಿ 23ರ ಮಧ್ಯಾಹ್ನ 12 ಗಂಟೆಗೆ ಈ ಮೊಬೈಲ್ ತನ್ನ ಮೊದಲ ಮಾರಾಟವನ್ನ ಶುರು ಮಾಡಲಿದೆ. ನೀವು ಕಂಪನಿಯ ಅಧಿಕೃತ ವೆಬ್‌ಸೈಟ್ ಮತ್ತು ಫ್ಲಿಪ್‌ಕಾರ್ಟ್ ಮೂಲಕ ಖರೀದಿಸಬಹುದು.