World's Richest Cricketer: ಕ್ರಿಕೆಟ್ ಅನ್ನು ವಿಶ್ವದ ಶ್ರೀಮಂತ ಕ್ರೀಡೆಗಳಲ್ಲಿ ಒಂದೆಂದು ಪರಿಗಣಿಸಲಾಗಿದೆ. ಕ್ರಿಕೆಟ್’ನಲ್ಲಿ ಖ್ಯಾತಿಯ ಜೊತೆಗೆ ಸಾಕಷ್ಟು ಹಣವೂ ಮಾಡಬಹುದು. ಸದ್ಯದ ಮಟ್ಟಿಗೆ ಶ್ರೀಮಂತ ಕ್ರಿಕೆಟಿಗ ಯಾರು ಎಂದು ತಿಳಿಯೋಣ. ಆದರೆ ವಿಶೇಷವೆಂದರೆ ಈ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ ಮತ್ತು ಎಂಎಸ್ ಧೋನಿ ಅವರಿಗಿಂತ 15 ವರ್ಷಗಳ ಹಿಂದೆ ನಿವೃತ್ತಿ ಹೊಂದಿದ ಆಟಗಾರನ ಹೆಸರಿದೆ.
ಸಿಇಒ ವರ್ಲ್ಡ್ ಮ್ಯಾಗಜೀನ್ ಪ್ರಕಾರ, ಆಸ್ಟ್ರೇಲಿಯಾದ ವಿಕೆಟ್ ಕೀಪರ್-ಬ್ಯಾಟ್ಸ್ಮನ್ ಆಡಮ್ ಗಿಲ್ ಕ್ರಿಸ್ಟ್ ವಿಶ್ವದ ಅತ್ಯಂತ ಶ್ರೀಮಂತ ಕ್ರಿಕೆಟಿಗರಾಗಿದ್ದಾರೆ. ಗಿಲ್ ಕ್ರಿಸ್ಟ್ ಅವರ ನಿವ್ವಳ ಮೌಲ್ಯವು ವಿರಾಟ್ ಕೊಹ್ಲಿ, ಸಚಿನ್ ತೆಂಡೂಲ್ಕರ್ ಮತ್ತು ಎಂಎಸ್ ಧೋನಿಗಿಂತಲೂ ಹೆಚ್ಚು. ಸುಮಾರು 3130 ಕೋಟಿಯ ಒಡೆಯ ಗಿಲ್ಕ್ರಿಸ್ಟ್.
ಕ್ರಿಕೆಟ್ ದೇವರು ಎಂದು ಕರೆಯಲ್ಪಡುವ ಸಚಿನ್ ತೆಂಡೂಲ್ಕರ್ ಈ ಪಟ್ಟಿಯಲ್ಲಿ ಎರಡನೇ ಸ್ಥಾನದಲ್ಲಿದ್ದಾರೆ. ಸಚಿನ್ ಅವರ ನಿವ್ವಳ ಮೌಲ್ಯ ಸುಮಾರು 1400 ಕೋಟಿ ರೂ.
ಭಾರತದ ಮಾಜಿ ನಾಯಕ ಎಂಎಸ್ ಧೋನಿ ವಿಶ್ವದ ಮೂರನೇ ಶ್ರೀಮಂತ ಕ್ರಿಕೆಟಿಗ. ಎಂಎಸ್ ಧೋನಿ ನಿವ್ವಳ ಮೌಲ್ಯ 949 ಕೋಟಿ ರೂ.
ಈ ಪಟ್ಟಿಯಲ್ಲಿ ಟೀಂ ಇಂಡಿಯಾದ ಡ್ಯಾಶಿಂಗ್ ಬ್ಯಾಟ್ಸ್ಮನ್ ವಿರಾಟ್ ಕೊಹ್ಲಿ ನಾಲ್ಕನೇ ಸ್ಥಾನದಲ್ಲಿದ್ದಾರೆ. ವಿರಾಟ್ ಕೊಹ್ಲಿ ಅವರ ನಿವ್ವಳ ಮೌಲ್ಯ 923 ಕೋಟಿ ರೂ. ಕ್ರಿಕೆಟ್ ಹೊರತಾಗಿ, ವಿರಾಟ್ ಕೊಹ್ಲಿ ಜಾಹೀರಾತುಗಳ ಮೂಲಕ ಸಾಕಷ್ಟು ಹಣವನ್ನು ಗಳಿಸುತ್ತಾರೆ.
ಶ್ರೀಮಂತ ಕ್ರಿಕೆಟಿಗರ ಪಟ್ಟಿಯಲ್ಲಿ ಆಸ್ಟ್ರೇಲಿಯಾದ ಮಾಜಿ ನಾಯಕ ರಿಕಿ ಪಾಂಟಿಂಗ್ ಐದನೇ ಸ್ಥಾನದಲ್ಲಿದ್ದಾರೆ. ರಿಕಿ ಪಾಂಟಿಂಗ್ ಅವರ ನಿವ್ವಳ ಮೌಲ್ಯ ಸುಮಾರು 617 ಕೋಟಿ ರೂ.