ಈರುಳ್ಳಿಯನ್ನು ಹೀಗೆ ಸೇವಿಸಿದರೆ ಕಲ್ಲು ಕಟ್ಟಿರುವ ಯೂರಿಕ್ ಆಸಿಡ್ ಕರಗಿ ದೇಹದಿಂದ ಹೊರ ಹೋಗುವುದು!ಊತ, ಕೀಲುನೋವಿಗೂ ಇದು ಪರಿಹಾರ


Onion In High Uric Acid:ಈರುಳ್ಳಿಯನ್ನು ಹೀಗೆಯೇ ಬಳಸಿದರೆ ಹರಳಿನಂತೆ ಗಟ್ಟಿಯಾಗಿರುವ ಯೂರಿಕ್ ಆಸಿಡ್ ಕರಗಿ ದೇಹದಿಂದ ಹೊರ ಹೋಗುತ್ತದೆ. ಊತ, ಕೀಲು ನೋವಿನಿಂದಲೂ ಪರಿಹಾರ ಸಿಗುತ್ತದೆ.   
 

Onion In High Uric Acid:  ದೇಹದಲ್ಲಿ ಯೂರಿಕ್ ಆಸಿಡ್ ಹೆಚ್ಚಾದಂತೆ, ಅದು ಸ್ಫಟಿಕಗಳ ರೂಪದಲ್ಲಿ ಕೀಲುಗಳಲ್ಲಿ ಸಂಗ್ರಹವಾಗಲು ಪ್ರಾರಂಭಿಸುತ್ತದೆ. ಇದರಿಂದಾಗಿ ಕೀಲುಗಳಲ್ಲಿ ನೋವು, ಊತ, ನಡೆಯಲು ತೊಂದರೆ ಮುಂತಾದ ಸಮಸ್ಯೆಗಳು ಉಂಟಾಗುತ್ತವೆ.ದೇಹದಲ್ಲಿ ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಿಸಲು,ಆಹಾರದ ಬಗ್ಗೆ ನೀವು ವಿಶೇಷ ಕಾಳಜಿಯನ್ನು ತೆಗೆದುಕೊಳ್ಳಬೇಕು.

ಕನ್ನಡ ಭಾಷೆಯಲ್ಲಿ ಇತ್ತೀಚಿನ ಕರ್ನಾಟಕ, ದೇಶ, ವಿದೇಶ, ಮನರಂಜನೆ, ಶಿಕ್ಷಣ, ಉದ್ಯೋಗ, ಆರೋಗ್ಯ, ಜೀವನಶೈಲಿ, ಆಧ್ಯಾತ್ಮ,  ಕ್ರೀಡೆ, ಕ್ರೈಂ, ವೈರಲ್, ವ್ಯಾಪಾರ, ತಂತ್ರಜ್ಞಾನ ಸುದ್ದಿಗಳನ್ನು ಓದಲು ಈಗಲೇ ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...

Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು 
Twitter Link - https://bit.ly/3n6d2R8
Facebook Link - https://bit.ly/3Hhqmcj 
Youtube Link - https://www.youtube.com/live/RNn4I7iIaYE?si=3G4W5dh0oCdFnu-T

Instagram Link -  https://bit.ly/3LyfY2l 
Sharechat Link - https://bit.ly/3LCjokI 
Threads Link-  https://www.threads.net/@zeekannadanews 
WhatsApp Channel- bit.ly/46lENGm ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /6

ಕೆಲವು ಮನೆಮದ್ದುಗಳ ಸಹಾಯದಿಂದ ಯೂರಿಕ್ ಆಸಿಡ್ ಸಮಸ್ಯೆಯನ್ನು ನಿವಾರಿಸಬಹುದು.ಯೂರಿಕ್ ಆಸಿಡ್ ಅನ್ನು ಕರಗಿಸಲು ಸಾಮರ್ಥ್ಯ ಇರುವ ಮನೆ ಮದ್ದುಗಳಲ್ಲಿ ಒಂದು ಈರುಳ್ಳಿ. 

2 /6

ರಕ್ತದಲ್ಲಿನ ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಿಸುವಲ್ಲಿ ಈರುಳ್ಳಿ ತುಂಬಾ ಪ್ರಯೋಜನಕಾರಿ. ಆದರೆ ಕೀಲುಗಳಲ್ಲಿ ಹರಳಿನಂತೆ ಗಟ್ಟಿ ಕಟ್ಟಿ ಕುಳಿತಿರುವ   ಯೂರಿಕ್ ಆಸಿಡ್‌ ಅನ್ನು ಕರಗಿಸಲು ಈರುಳ್ಳಿಯನ್ನು ಹೇಗೆ ಸೇವಿಸಬೇಕು ಎನ್ನುವುದು ಕೂಡಾ ತಿಳಿದಿರಬೇಕು.   

3 /6

ಈರುಳ್ಳಿ ಕಡಿಮೆ ಪ್ಯೂರಿನ್ ಆಹಾರವಾಗಿದ್ದು,ಇದು ಯೂರಿಕ್ ಆಸಿಡ್ ಮಟ್ಟವನ್ನು ಕಡಿಮೆ ಮಾಡಲು ಸಹಾಯ ಮಾಡುತ್ತದೆ.ಅಲ್ಲದೆ ಇದು ಕ್ವೆರ್ಸೆಟಿನ್ ಎಂಬ ಫ್ಲೇವನಾಯ್ಡ್ ಅನ್ನು ಹೊಂದಿರುತ್ತದೆ.ಇದು ಕೀಲುಗಳಲ್ಲಿ ಕಾಣಿಸಿಕೊಳ್ಳುವ ಊತ ಮತ್ತು ನೋವನ್ನು ತಡೆಯಲು ಸಹಾಯ ಮಾಡುತ್ತದೆ.  

4 /6

ಈರುಳ್ಳಿಯಲ್ಲಿ ಜೀವಸತ್ವಗಳು, ಮೆಗ್ನೀಸಿಯಮ್, ಸೋಡಿಯಂ, ಪೊಟ್ಯಾಸಿಯಮ್, ಫೋಲೇಟ್ ಮತ್ತು ರಂಜಕದಂತಹ ಪೋಷಕಾಂಶಗಳು  ಕಂಡುಬರುತ್ತವೆ.ಇದು ಚಯಾಪಚಯವನ್ನು ಸುಧಾರಿಸಲು ಸಹಾಯ ಮಾಡುವುದರಿಂದ ಹೆಚ್ಚಿನ ಯೂರಿಕ್ ಆಸಿಡ್ ಸಮಸ್ಯೆಯನ್ನು ಕಡಿಮೆ ಮಾಡುತ್ತದೆ.

5 /6

ಯೂರಿಕ್ ಆಸಿಡ್ ಮಟ್ಟವನ್ನು ನಿಯಂತ್ರಿಸಲು, ಈರುಳ್ಳಿಯನ್ನು ಹಲವು ವಿಧಗಳಲ್ಲಿ ಸೇವಿಸಬಹುದು.ಆದರೆ ಇದನ್ನು  ಹಸಿಯಾಗಿಯೇ ತಿನ್ನಬೇಕು ಅಥವಾ ಹಾಗೆಯೇ ನೀರಿನಲ್ಲಿ ಹಾಕಿ ಒಂದು ಕುದಿ ಬರಿಸಿ ತಿನ್ನಬೇಕು. ಅಥವಾ ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಈರುಳ್ಳಿ ರಸವನ್ನು ಬೇಕಾದರೂ ಕುಡಿಯಬಹುದು.   

6 /6

ಹೀಗೆ ಈರುಳ್ಳಿಯನ್ನು ನಿಯಮಿತವಾಗಿ ಸೇವಿಸುವುದರಿಂದ ಯೂರಿಕ್ ಆಸಿಡ್ ಕರಗುತ್ತದೆ. ಇದರ ಸೇವನೆಯು ಸಂಧಿವಾತ ಮತ್ತು ಆಸ್ಟಿಯೊಪೊರೋಸಿಸ್ ಸಮಸ್ಯೆಯಲ್ಲೂ ಪ್ರಯೋಜನಕಾರಿಯಾಗಿದೆ. (ಸೂಚನೆ: ಇಲ್ಲಿ ನೀಡಲಾದ ಮಾಹಿತಿಯು ಮನೆಮದ್ದುಗಳು ಮತ್ತು ಸಾಮಾನ್ಯ ಮಾಹಿತಿಯನ್ನು ಆಧರಿಸಿದೆ. ಇವುಗಳನ್ನು ಅನುಸರಿಸುವ ಮೊದಲು ವೈದ್ಯಕೀಯ ಸಲಹೆಯನ್ನು ತೆಗೆದುಕೊಳ್ಳಬೇಕು. Zee News Kannada ಈ ಮಾಹಿತಿಯನ್ನು ಅನುಮೋದಿಸುವುದಿಲ್ಲ.)