ಮನೆಯ ಈ ಜಾಗದಲ್ಲಿ ನವಿಲು ಗರಿ ಇಟ್ಟರೆ ಮನೆಯಲ್ಲಿ ಹಣದ ಹೊಳೆಯೇ ಹರಿಯುವುದು.!

ಮನೆಯಲ್ಲಿ ನವಿಲು ಗರಿಯನ್ನು ಇಡುವುದರಿಂದ ಮನೆಯಲ್ಲಿ ಧನಾತ್ಮಕ ಶಕ್ತಿ ನೆಲೆಸುತ್ತದೆ ಎನ್ನುತ್ತಾರೆ ವಾಸ್ತು ತಜ್ಞರು. 

Peacock Feather Vastu : ವಾಸ್ತು ಶಾಸ್ತ್ರದ ಪ್ರಕಾರ ಯಾವುದೇ ಒಂದು ವಸ್ತುವನ್ನು ಸರಿಯಾದ ದಿಕ್ಕಿನಲ್ಲಿ ಮತ್ತು ಸ್ಥಳದಲ್ಲಿ ಇರಿಸಿದಾಗ ಮಾತ್ರ ಧನಾತ್ಮಕ ಪರಿಣಾಮವನ್ನು ತೋರಿಸುತ್ತದೆ.  ಹಾಗೆಯೇ ಕೃಷ್ಣನಿಗೆ ಪ್ರಿಯವಾದ ನವಿಲು ಗರಿಗಳನ್ನು ಮನೆಯಲ್ಲಿ ಸರಿಯಾದ ದಿಕ್ಕಿನಲ್ಲಿ ಇಡುವುದರಿಂದ ದೊಡ್ಡ ಮಟ್ಟದ ಬದಲಾವಣೆಯನ್ನು ಕಾಣಬಹುದು. 
 

ಕನ್ನಡ ಭಾಷೆಯಲ್ಲಿ ಮತ್ತಷ್ಟು ತಾಜಾ ಸುದ್ದಿಗಳನ್ನು ಓದಲು ನಮ್ಮ ಜೀ ಕನ್ನಡ ನ್ಯೂಸ್ ಮೊಬೈಲ್ ಅಪ್ಲಿಕೇಶನ್ ಡೌನ್ಲೋಡ್ ಮಾಡಿ...
Android Link - https://bit.ly/3AClgDd
Apple Link - https://apple.co/3wPoNgr
ನಮ್ಮ ಸೋಶಿಯಲ್ ಮೀಡಿಯಾ ಪುಟಗಳಿಗೆ ಸಬ್ ಸ್ಕ್ರೈಬ್ ಆಗಲು TwitterFacebookYoutube ಲಿಂಕ್ ಗಳ ಮೇಲೆ ಕ್ಲಿಕ್ ಮಾಡಿ.

1 /4

ಮನೆಯಲ್ಲಿ ನವಿಲು ಗರಿಯನ್ನು ಇಡುವುದರಿಂದ ಮನೆಯಲ್ಲಿ ಧನಾತ್ಮಕ ಶಕ್ತಿ ನೆಲೆಸುತ್ತದೆ ಎನ್ನುತ್ತಾರೆ ವಾಸ್ತು ತಜ್ಞರು. ಇದರೊಂದಿಗೆ ಲಕ್ಷ್ಮೀ ಕೂಡ ಮನೆಯಲ್ಲಿ ನೆಲೆಸುತ್ತಾಳೆ. ಇದೀಗ ಶ್ರೀಕೃಷ್ಣನ ಅಚ್ಚುಮೆಚ್ಚಿನ ಮಾಸ ನಡೆಯುತ್ತಿದೆ. 

2 /4

ನವಿಲು ಗರಿ ನೋಡುವುದಕ್ಕೆ ಎಷ್ಟು ಸುಂದರವಾಗಿದೆಯೋ, ಅದರ ಪ್ರಭಾವ ಕೂಡಾ ಅಷ್ಟೇ ದೊಡ್ಡದಾಗಿದೆ. ಮನೆಯಲ್ಲಿ ನವಿಲು ಗರಿಗಳನ್ನು ಇಡುವುದರಿಂದ ವ್ಯಕ್ತಿಯ ಅನೇಕ ಸಮಸ್ಯೆಗಳಿಗೆ ಪರಿಹಾರ ಸಿಗುತ್ತದೆ ಎಂದು ಹೇಳಲಾಗುತ್ತದೆ. ಮನೆಯಲ್ಲಿ ಕೊಳಲುವಿನ ಜೊತೆಗೆ ನವಿಲು ಗರಿಯನ್ನು ಇಡುವುದರಿಂದ ಸಂಬಂಧಗಳಲ್ಲಿ ಮಾಧುರ್ಯ ಹೆಚ್ಚುತ್ತದೆ ಎನ್ನುತ್ತಾರೆ ವಾಸ್ತು ತಜ್ಞರು. 

3 /4

ಶ್ರೀಕೃಷ್ಣನಿಗೆ ನವಿಲು ಗರಿ ಬಹಳ ಪ್ರಿಯ. ನವಿಲು ಗರಿಯನ್ನು ಮನೆಯ ಸರಿಯಾದ ದಿಕ್ಕಿನಲ್ಲಿ ಇರಿಸಿದರೆ, ತಾಯಿ  ಲಕ್ಷ್ಮೀ ದೆವಿಯ ಕೃಪೆ ಜೀವನದಲ್ಲಿ ಉಳಿಯುತ್ತದೆ ಎಂದು ವಾಸ್ತುವಿನಲ್ಲಿ ಹೇಳಲಾಗಿದೆ. ವೈವಾಹಿಕ ಜೀವನದಲ್ಲಿ ಸಮಸ್ಯೆ ಇದ್ದರೆ, ಮಲಗುವ ಕೋಣೆಯಲ್ಲಿ ನವಿಲು ಗರಿಗಳನ್ನು ಇಡಬೇಕು. ಹೀಗೆ ಮಾಡುವುದರಿಂದ ಪತಿ-ಪತ್ನಿಯರ  ಸಂಬಂಧದಲ್ಲಿ ಮಧುರತೆ ಬರುತ್ತದೆ.   

4 /4

ಗ್ರಹ ದೋಷಗಳ ಅಶುಭ ಪರಿಣಾಮಗಳನ್ನು ತಪ್ಪಿಸಲು, ಗ್ರಹ ಮಂತ್ರವನ್ನು 21 ಬಾರಿ ಜಪಿಸಬೇಕು. ಇದಾದ ನಂತರ ನವಿಲು ಗರಿಗೆ ನೀರು ಚಿಮುಕಿಸಿ ಶುಭ ಸ್ಥಳದಲ್ಲಿ ಇಡುವುದರಿಂದ ಗ್ರಹಗಳ ಅಶುಭ ನಿವಾರಣೆಯಾಗುತ್ತದೆ. ನವಿಲು ಗರಿಗಳನ್ನು ಎಲ್ಲರಿಗೂ ಕಾಣುವ ಸ್ಥಳದಲ್ಲಿ ಇಡಬೇಕು.